ಪಂಜಾಬ್: ಫ್ರಿಜ್ ಕಂಪ್ರೆಸರ್ ಸ್ಫೋಟ, ಒಂದೇ ಕುಟುಂಬದ ಐವರ ದುರ್ಮರಣ
ರೆಫ್ರಿಜರೇಟರ್‌ನ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.

ಸ್ಫೋಟದ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಲಂಧರ್‌ನ ಅವತಾರ್ ನಗರದಲ್ಲಿನ ಮನೆಯೊಂದರಲ್ಲಿ ಸ್ಫೋಟದ ರೀತಿಯ ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದಿತು, ನಂತರ ನಾವು ತಕ್ಷಣ ಸ್ಥಳಕ್ಕೆ ತಲುಪಿದ್ದೇವೆ. ಅಪಘಾತದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ನಾವು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಲಿಂಡರ್ ಸ್ಫೋಟ: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್ ನಗರದ ತಥಾವಾಡೆ ಪ್ರದೇಶದಲ್ಲಿ ಭಾನುವಾರ ರಾತ್ರಿ ಅನೇಕ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ, ನಂತರ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು, ಇದು ಸ್ಥಳೀಯರಲ್ಲಿ ಭೀತಿಯನ್ನು ಉಂಟುಮಾಡಿತ್ತು.
ಟ್ಯಾಂಕರ್‌ನಿಂದ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಎಲ್‌ಪಿಜಿ ತುಂಬುತ್ತಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ಓದಿ: ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಫೋಟ, 4 ಮಂದಿ ಸಾವು, ಮಾಲೀಕನ ಬಂಧನ
ಸ್ಫೋಟದ ನಂತರ, ಹತ್ತಿರದ ಕಾಲೇಜಿಗೆ ಸೇರಿದ ಒಂದೆರಡು ಬಸ್‌ಗಳಿಗೆ ಸಹ ಬೆಂಕಿ ಹೊತ್ತಿಕೊಂಡಿವೆ ಎಂದು ಅವರು ಹೇಳಿದರು. ರಾತ್ರಿ 10.30 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ನಾಲ್ಕೈದು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಟೆಂಡರ್‌ಗಳು ಮತ್ತು ನೀರಿನ ಟ್ಯಾಂಕರ್‌ಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಯಿತು ಮತ್ತು ಅವರು ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ