Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವಂತ್ ಮಾನ್ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರದಲ್ಲೂ ಎಎಪಿ ಸೋಲು, ಕೇಜ್ರಿವಾಲ್ ಪಂಜಾಬ್ ಸಿಎಂ ಆಗ್ತಾರಾ?

ದೆಹಲಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರಚಾರ ನಡೆಸಿದ್ದ 12ಕ್ಷೇತ್ರಗಳಲ್ಲಿ ಎಎಪಿ ಸೋಲನ್ನು ಕಂಡಿದೆ. ಇದರಲ್ಲಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸ್ಥಾನಗಳು ಸೇರಿದ್ದವು, ಅಲ್ಲಿ ಈ ದೊಡ್ಡ ನಾಯಕರು ಸ್ವತಃ ಸೋಲು ಕಂಡಿದ್ದಾರೆ.ದೆಹಲಿ ಚುನಾವಣೆಯಲ್ಲಿ ಎಎಪಿ ಸೋಲಿನ ನಂತರ, ಎಲ್ಲರ ಚಿತ್ತ ಈಗ ಪಂಜಾಬ್ ಮೇಲೆ ನೆಟ್ಟಿವೆ.

ಭಗವಂತ್ ಮಾನ್ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರದಲ್ಲೂ ಎಎಪಿ ಸೋಲು, ಕೇಜ್ರಿವಾಲ್ ಪಂಜಾಬ್ ಸಿಎಂ ಆಗ್ತಾರಾ?
ಅರವಿಂದ್ ಕೇಜ್ರಿವಾಲ್ Image Credit source: Mint
Follow us
ನಯನಾ ರಾಜೀವ್
|

Updated on: Feb 09, 2025 | 11:07 AM

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲನ್ನು ಕಂಡಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರಚಾರ ಮಾಡಿದ್ದ 12 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಸೋತಿದ್ದು ಗಮನಿಸಬೇಕಾದ ಸಂಗತಿ. ಇದರಲ್ಲಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸ್ಥಾನಗಳು ಸೇರಿದ್ದವು,

ಅಲ್ಲಿ ಈ ದೊಡ್ಡ ನಾಯಕರು ಸ್ವತಃ ಸೋಲು ಕಂಡಿದ್ದಾರೆ. ಈ ಸೋಲಿನ ನಂತರ, ಪಕ್ಷದೊಳಗೆ ಮತ್ತು ಪಂಜಾಬ್ ರಾಜಕೀಯದಲ್ಲಿ ಹೊಸ ಚರ್ಚೆಗಳು ವೇಗ ಪಡೆದಿವೆ. ದೆಹಲಿ ಚುನಾವಣೆಯಲ್ಲಿ ಎಎಪಿ ಸೋಲಿನ ನಂತರ, ಎಲ್ಲರ ಚಿತ್ತ ಈಗ ಪಂಜಾಬ್ ಮೇಲೆ ನೆಟ್ಟಿವೆ.

ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಜ್ವಾ ದೊಡ್ಡ ಹೇಳಿಕೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಈಗ ಪಂಜಾಬ್ ಮುಖ್ಯಮಂತ್ರಿಯಾಗಬಹುದು ಎಂದು ಅವರು ಹೇಳಿದರು. ಪಂಜಾಬ್ ಸರ್ಕಾರದ ಸಚಿವ ಮತ್ತು ಎಎಪಿ ರಾಜ್ಯ ಅಧ್ಯಕ್ಷ ಅಮನ್ ಅರೋರಾ ಅವರ ಇತ್ತೀಚಿನ ಹೇಳಿಕೆಗಳನ್ನು ಬಜ್ವಾ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಎಎಪಿಯೊಳಗೆ ಸಂಘರ್ಷ ಸಾಧ್ಯತೆ ಎಎಪಿ ಅಂತಹ ನಿರ್ಧಾರವನ್ನು ತೆಗೆದುಕೊಂಡರೆ, ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಬೆಂಬಲಿಗರು ಮತ್ತು ಪಕ್ಷದ ಇನ್ನೊಂದು ಬಣದ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಎಎಪಿ ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರನ್ನು ಈ ಸ್ಥಾನದಿಂದ ಸ್ಪರ್ಧಿಸುವಂತೆ ಮಾಡುವ ಮೂಲಕ ಮುಖ್ಯಮಂತ್ರಿಯನ್ನಾಗಿ ಮಾಡಬಹುದು. ಈ ಬಗ್ಗೆ ಎಎಪಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಮತ್ತಷ್ಟು ಓದಿ: ಯಾರಾಗಬಹುದು ದೆಹಲಿ ಮುಖ್ಯಮಂತ್ರಿ? ಹಿರಿಯ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ

ಪಂಜಾಬ್‌ನಲ್ಲಿ ಎಎಪಿಯ ಕಾರ್ಯತಂತ್ರದ ಮೇಲೆ ಕಣ್ಣು 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಭರ್ಜರಿ ಜಯ ಸಾಧಿಸುವ ಮೂಲಕ ಸರ್ಕಾರವನ್ನು ರಚಿಸಿತ್ತು. ಭಗವಂತ್ ಮಾನ್ ಮುಖ್ಯಮಂತ್ರಿಯಾದರು, ಆದರೆ ಅರವಿಂದ್ ಕೇಜ್ರಿವಾಲ್ ಪಂಜಾಬ್ ರಾಜಕೀಯದಲ್ಲಿ ಹಲವು ಬಾರಿ ಹಸ್ತಕ್ಷೇಪ ಮಾಡುತ್ತಿರುವುದು ಕಂಡುಬಂದಿದೆ.

ಅವರು ‘ರಿಮೋಟ್ ಕಂಟ್ರೋಲ್’ ಮೂಲಕ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ದೆಹಲಿ ಚುನಾವಣೆಯ ಸೋಲಿನ ನಂತರ, ಕೇಜ್ರಿವಾಲ್ ಸ್ವತಃ ಪಂಜಾಬ್ ರಾಜಕೀಯದಲ್ಲಿ ದೊಡ್ಡ ಪಾತ್ರ ವಹಿಸಲು ತಯಾರಿ ನಡೆಸುತ್ತಿದ್ದಾರೆಯೇ ಎಂಬ ಚರ್ಚೆ ತೀವ್ರಗೊಂಡಿದೆ.

ರಾಜಕೀಯದಲ್ಲಿ ಏನು ಬೇಕಾದರೂ ಸಾಧ್ಯ, ಆದ್ದರಿಂದ ಬಾಜ್ವಾ ಅವರ ಹೇಳಿಕೆ ಸರಿ ಎಂದು ಸಾಬೀತಾದರೆ, ಪಂಜಾಬ್ ರಾಜಕೀಯದಲ್ಲಿ ದೊಡ್ಡ ಬದಲಾವಣೆಯನ್ನು ಕಾಣಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್