ಪಂಜಾಬ್: ಭಗವಂತ್ ಮಾನ್ ಸಂಪುಟದಲ್ಲಿ 10 ಮಂದಿ ಸಚಿವರು, ಇಲ್ಲಿದೆ ಸಚಿವರ ಪಟ್ಟಿ

ಮಾರ್ಚ್ 19 ರಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ನಂತರ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ಮಧ್ಯಾಹ್ನ 12:30 ಕ್ಕೆ ನಡೆಸಲಿದ್ದಾರೆ.

ಪಂಜಾಬ್: ಭಗವಂತ್ ಮಾನ್ ಸಂಪುಟದಲ್ಲಿ 10 ಮಂದಿ ಸಚಿವರು, ಇಲ್ಲಿದೆ ಸಚಿವರ ಪಟ್ಟಿ
ಭಗವಂತ್ ಮಾನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 18, 2022 | 9:25 PM

ಚಂಡೀಗಢ: ಭಗವಂತ್ ಮಾನ್ (Bhagwant Mann) ಪಂಜಾಬ್ (Punjab) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶನಿವಾರ ರಚನೆಯಾಗಲಿರುವ ಅವರ ಹೊಸ ಸಚಿವ ಸಂಪುಟದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಒಟ್ಟು ಹತ್ತು ಮಂದಿ ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾರ್ಚ್ 19 ರಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ನಂತರ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ಮಧ್ಯಾಹ್ನ 12:30 ಕ್ಕೆ ನಡೆಸಲಿದ್ದಾರೆ. ಪಂಜಾಬ್ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 18 ಸ್ಥಾನಗಳಿವೆ.  ಪಂಜಾಬ್‌ನ ಶಹೀದ್ ಭಗತ್ ಸಿಂಗ್ ನಗರ್ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಬುಧವಾರ ಭಗವಂತ್ ಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. “ಇಂಕಿಲಾಬ್ ಜಿಂದಾಬಾದ್” ಎಂಬ ಘೋಷಣೆಯೊಂದಿಗೆ ಮಾನ್ ತಮ್ಮ ಪ್ರಮಾಣವಚನವನ್ನು ಮುಗಿಸಿದ್ದರು.

ಪಂಜಾಬ್ ಸಂಪುಟ ವಿಸ್ತರಣೆ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿ ಇಲ್ಲಿದೆ: ಹರ್ಪಾಲ್ ಸಿಂಗ್ ಚೀಮಾ ಡಾ ಬಲ್ಜಿತ್ ಕೌರ್ ಹರ್ಭಜನ್ ಸಿಂಗ್ ಇಟಿಒ ಡಾ ವಿಜಯ್ ಸಿಂಗ್ಲಾ ಲಾಲ್ ಚಂದ್ ಕತರುಚಕ್ ಗುರ್ಮೀತ್ ಸಿಂಗ್ ಮೀತ್ ಹೇಯರ್ ಕುಲದೀಪ್ ಸಿಂಗ್ ಧಲಿವಾಲ್ ಲಾಲ್ಜಿತ್ ಸಿಂಗ್ ಭುಲ್ಲರ್ ಬ್ರಾಮ್ ಶಂಕರ್ (ಜಿಂಪಾ) ಹರ್ಜೋತ್ ಸಿಂಗ್ ಬೈನ್ಸ್

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಚೊಚ್ಚಲ ಸಭೆಯಲ್ಲಿ, ಮುಖ್ಯಮಂತ್ರಿ ಮಾನ್ ಅವರು ರಾಜ್ಯವನ್ನು ಮುಂಚೂಣಿಯಲ್ಲಿರುವಂತೆ ಮಾಡಲು ಅಧಿಕಾರಿಗಳನ್ನು ಒತ್ತಾಯಿಸಿದರು. ಭಾರತೀಯ ಕ್ರಿಕೆಟ್ ತಂಡದ ಉದಾಹರಣೆಯನ್ನು ನೀಡಿದ ಅವರು, “ಪಂದ್ಯಗಳು ಗೆಲ್ಲುತ್ತವೆ ಅಥವಾ ಸೋಲುತ್ತವೆ ಆದರೆ ತಂಡದ ಮನೋಭಾವವು ಮುಖ್ಯವಾಗಿದೆ. ನಮ್ಮ ರಾಜ್ಯವನ್ನು ಲಂಡನ್, ಕ್ಯಾಲಿಫೋರ್ನಿಯಾ ಅಥವಾ ಪ್ಯಾರಿಸ್ ಅಲ್ಲ. ನಿಜವಾದ ಪಂಜಾಬ್ ಆಗಿ ಮಾಡುವುದು ನಮ್ಮ ಪ್ರಧಾನ ಕಾಳಜಿಯಾಗಬೇಕು ಎಂದು ಹೇಳಿದ್ದಾರೆ. ಎಎಪಿ ಪಂಜಾಬ್‌ನಲ್ಲಿ 117 ಸದಸ್ಯರ ಅಸೆಂಬ್ಲಿಯಲ್ಲಿ 92 ಸ್ಥಾನಗಳನ್ನು ಗಳಿಸುವ ಮೂಲಕ ಚುನಾವಣಾ ವಿಜಯವನ್ನು ಗಳಿಸಿತು. ಪಕ್ಷದ ಹೊಸದಾಗಿ ಚುನಾಯಿತರಾದ ಬಹುಪಾಲು ಶಾಸಕರು ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸಿದವರಾಗಿದ್ದಾರೆ.

ಇದನ್ನೂ ಓದಿ: ನವೀನ್‌ ದೇಹ ಸೋಮವಾರ ಆಗಮನ: ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಶರೀರ ದಾನ -ನವೀನ್ ತಂದೆ ಶೇಖರಗೌಡ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ