AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2027ರ ಪಂಜಾಬ್ ವಿಧಾನಸಭಾ ಚುನಾವಣೆ: ಬಿಜೆಪಿ–ಅಕಾಲಿ ದಳ ಮೈತ್ರಿ ಘೋಷಿಸಿದ ಅಮಿತ್ ಶಾ

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ. ಆರು ವರ್ಷಗಳ ಹಿಂದೆ ಮುರಿದುಬಿದ್ದಿದ್ದ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ ಮೈತ್ರಿ ಮತ್ತೆ ಒಂದಾಗುವ ಸೂಚನೆ ಸಿಕ್ಕಿದೆ. ಅಮಿತ್ ಶಾ, ಸುಖ್‌ಬೀರ್ ಬಾದಲ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಸಾಧ್ಯತೆಯಿದೆ. ಇದು ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಹೊಸ ಸವಾಲಾಗಲಿದೆ. ಈ ಮೈತ್ರಿ ನಿರ್ಧಾರ ಪಂಜಾಬ್ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

2027ರ ಪಂಜಾಬ್ ವಿಧಾನಸಭಾ ಚುನಾವಣೆ: ಬಿಜೆಪಿ–ಅಕಾಲಿ ದಳ ಮೈತ್ರಿ ಘೋಷಿಸಿದ ಅಮಿತ್ ಶಾ
ಅಮಿತ್ ಶಾ
ನಯನಾ ರಾಜೀವ್
|

Updated on:Nov 24, 2026 | 1:16 PM

Share

ಅಮೃತಸರ, ನವೆಂಬರ್ 24: ಪಂಜಾಬ್​​ನಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (SAD) ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಈ ಮಹತ್ವದ ಘೋಷಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿದ್ದಾರೆ. ಸುಮಾರು ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಅಕಾಲಿ ದಳ ಮತ್ತೆ ಕೈಜೋಡಿಸಿವೆ. 2020ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಎರಡೂ ಪಕ್ಷಗಳ ಮೈತ್ರಿ ಮುರಿದುಬಿದ್ದಿತ್ತು. ಇದೀಗ ಮುಂಬರುವ ಪಂಜಾಬ್ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ನಿರ್ಧರಿಸಿವೆ.

ಈ ಹಿಂದೆ ಹಲವು ಚುನಾವಣೆಗಳಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. 2022ರ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಬಿಜೆಪಿ ಮತ್ತು ಅಕಾಲಿ ದಳಕ್ಕೆ ನಿರೀಕ್ಷಿತ ಯಶಸ್ಸು ಸಿಕ್ಕಿರಲಿಲ್ಲ. ಇದೀಗ ಮತ್ತೆ ಮೈತ್ರಿ ಮಾಡಿಕೊಂಡಿರುವುದರಿಂದ ಪಂಜಾಬ್ ರಾಜಕೀಯದಲ್ಲಿ ಹೊಸ ಬೆಳವಣಿಗೆ ನಡೆದಿದೆ.

ಈ ಬೆಳವಣಿಗೆ ಪಂಜಾಬ್ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಕಾಲದಲ್ಲಿ ರಾಜ್ಯದಲ್ಲಿ ಪ್ರಬಲ ಮೈತ್ರಿಕೂಟವಾಗಿದ್ದ ಈ ಎರಡು ಪಕ್ಷಗಳು ಮತ್ತೆ ಕೈಜೋಡಿಸಿದರೆ, ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (AAP) ಹೊಸ ರಾಜಕೀಯ ಸವಾಲು  ಎದುರಾಗಲಿದೆ . ಕಾಂಗ್ರೆಸ್ ಕೂಡ ಪಂಜಾಬ್‌ನಲ್ಲಿ ತನ್ನ ಪ್ರಾಬಲ್ಯ ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ಮೈತ್ರಿ ನಿರ್ಧಾರ ಮಹತ್ವ ಪಡೆದುಕೊಂಡಿದೆ.

2020ರಲ್ಲಿ ಮೈತ್ರಿ ಮುರಿದುಬಿದ್ದಿದ್ದೇಕೆ? ಬಿಜೆಪಿ ಮತ್ತು ಅಕಾಲಿ ದಳದ ಮೈತ್ರಿ ಸುಮಾರು 24 ವರ್ಷಗಳ ಕಾಲ ಮುಂದುವರೆದಿತ್ತು. ಆದರೆ 2020ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು.

ಈ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್ ಸೇರಿದಂತೆ ದೇಶದ ವಿವಿಧ ಭಾಗಗಳ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಅಕಾಲಿ ದಳ ರೈತರ ಪರ ನಿಂತು ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿತು. ಇದರ ಪರಿಣಾಮವಾಗಿ 2020ರ ಸೆಪ್ಟೆಂಬರ್‌ನಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬರುವ ನಿರ್ಧಾರ ಕೈಗೊಂಡಿತು. ಅಕಾಲಿ ದಳದ ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಅಖಿಲೇಶ್ ಯಾದವ್ ರ‍್ಯಾಲಿಯಲ್ಲಿ ದುರಂತ, ಬುಲ್ಡೋಜರ್ ಡಿಕ್ಕಿ ಹೊಡೆದು ಬಿಜೆಪಿ ನಾಯಕನ ಪುತ್ರ ಸಾವು

ನಂತರ ರೈತರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2021ರಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಿತು. ಆದರೂ ಬಿಜೆಪಿ ಮತ್ತು ಅಕಾಲಿ ದಳ ಮತ್ತೆ ಒಂದಾಗಿರಲಿಲ್ಲ.

2027ರ ಚುನಾವಣೆಗೆ ಮತ್ತೆ ಒಂದಾಗುತ್ತಿರುವುದೇಕೆ? 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಆ ಚುನಾವಣೆಯಲ್ಲಿ ಅಕಾಲಿ ದಳ ಕೇವಲ 3 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಆಮ್ ಆದ್ಮಿ ಪಕ್ಷ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು.

2024ರ ಲೋಕಸಭಾ ಚುನಾವಣೆಯಲ್ಲೂ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು. ಅಕಾಲಿ ದಳ ಒಂದು ಸ್ಥಾನ ಗೆದ್ದರೆ, ಬಿಜೆಪಿಗೆ ಪಂಜಾಬ್‌ನಲ್ಲಿ ಒಂದೇ ಒಂದು ಸ್ಥಾನವೂ ಸಿಗಲಿಲ್ಲ.

ಈ ಚುನಾವಣಾ ಹಿನ್ನಡೆಗಳ ಹಿನ್ನೆಲೆಯಲ್ಲಿ 2027ರ ವಿಧಾನಸಭಾ ಚುನಾವಣೆಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸುಖ್‌ಬೀರ್ ಸಿಂಗ್ ಬಾದಲ್ ಅವರ ನಡುವೆ ಆಗಸ್ಟ್‌ನಲ್ಲಿ ನಡೆದ ಭೇಟಿಯೂ ರಾಜಕೀಯ ವಲಯದಲ್ಲಿ ಮೈತ್ರಿ ಕುರಿತ ಚರ್ಚೆಗಳಿಗೆ ಮತ್ತಷ್ಟು ಬಲ ನೀಡಿತ್ತು.

ಬಿಜೆಪಿ–ಅಕಾಲಿ ದಳ ಮೈತ್ರಿಯ ಇತಿಹಾಸ

ಬಿಜೆಪಿ ಮತ್ತು ಅಕಾಲಿ ದಳದ ಮೈತ್ರಿ 1997ರಲ್ಲಿ ಅಧಿಕೃತವಾಗಿ ಆರಂಭವಾಯಿತು. ಮೊದಲ ಚುನಾವಣೆಯಲ್ಲೇ ಈ ಮೈತ್ರಿಕೂಟ ಭರ್ಜರಿ ಯಶಸ್ಸು ಕಂಡಿತ್ತು. ಪಂಜಾಬ್‌ನ ಒಟ್ಟು 117 ವಿಧಾನಸಭಾ ಕ್ಷೇತ್ರಗಳ ಪೈಕಿ 93 ಸ್ಥಾನಗಳನ್ನು ಗೆದ್ದಿತ್ತು.

ಆಗಿನ ಸೀಟು ಹಂಚಿಕೆ ಸೂತ್ರದ ಪ್ರಕಾರ ಅಕಾಲಿ ದಳ 94 ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 23 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದವು.

ಅಕಾಲಿ ದಳಕ್ಕೆ ಗ್ರಾಮೀಣ ಪ್ರದೇಶಗಳು, ಸಿಖ್ ಸಮುದಾಯ ಮತ್ತು ರೈತರ ಬೆಂಬಲವಿದ್ದರೆ, ಬಿಜೆಪಿ ನಗರ ಪ್ರದೇಶಗಳಲ್ಲಿ ತನ್ನ ಪ್ರಾಬಲ್ಯ ಹೊಂದಿತ್ತು. ಈ ಮತಬ್ಯಾಂಕ್‌ಗಳ ಸಮೀಕರಣವೇ ಮೈತ್ರಿಯ ಯಶಸ್ಸಿಗೆ ಪ್ರಮುಖ ಕಾರಣವಾಗಿತ್ತು. 2017ರವರೆಗೆ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದವು.

ಈ ಬಾರಿಯ ಸೀಟು ಹಂಚಿಕೆ ಹೇಗಿರಬಹುದು? 2027ರ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಬಿಜೆಪಿ 23 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿತ್ತು. ಆದರೆ ಈ ಬಾರಿ ತನ್ನ ಪಾಲಿನ ಕ್ಷೇತ್ರಗಳನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಆಸಕ್ತಿ ತೋರಿದೆ ಎಂಬ ವರದಿಗಳಿವೆ.

ಕೆಲವು ವರದಿಗಳ ಪ್ರಕಾರ ಬಿಜೆಪಿ 47ರಿಂದ 48 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸುತ್ತಿದೆ. ಉಳಿದ ಕ್ಷೇತ್ರಗಳಲ್ಲಿ ಅಕಾಲಿ ದಳ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ ಅಧಿಕೃತ ಸೀಟು ಹಂಚಿಕೆ ಪ್ರಕಟವಾಗುವವರೆಗೆ ಈ ಸಂಖ್ಯೆಗಳು ಅಂತಿಮವಲ್ಲ.

ಮೈತ್ರಿಗೆ ಸವಾಲುಗಳೇನು? ಮೈತ್ರಿ ಪುನರುಜ್ಜೀವನ ಸುಲಭದ ನಿರ್ಧಾರವಲ್ಲ. ಪಂಜಾಬ್‌ನ ರೈತ ಸಮುದಾಯದಲ್ಲಿ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ಬಿಜೆಪಿಯ ವಿರುದ್ಧ ಅಸಮಾಧಾನವಿದೆ. ಅಕಾಲಿ ದಳ ಮತ್ತೆ ಬಿಜೆಪಿ ಮೈತ್ರಿಯಿಂದ ಸಾಂಪ್ರದಾಯಿಕ ರೈತ ಮತದಾರರ ಬೆಂಬಲ ಕಳೆದುಕೊಳ್ಳುವ ಆತಂಕವೂ ಇದೆ.

ಇನ್ನೊಂದೆಡೆ, ಪಂಜಾಬ್ ಬಿಜೆಪಿ ನಾಯಕರಲ್ಲಿಯೂ ಮೈತ್ರಿ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ನಾಯಕರು ಅಕಾಲಿ ದಳದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಎರಡೂ ಪಕ್ಷಗಳಿಗೆ ಮೈತ್ರಿ ರಾಜಕೀಯವಾಗಿ ಎಷ್ಟು ಲಾಭ ತಂದುಕೊಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:10 pm, Tue, 24 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?