Punjab cabinet expansion ಪಂಜಾಬ್ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 15 ಶಾಸಕರ ಪ್ರಮಾಣ ವಚನ

Charanjit Singh Channi: ಬ್ರಹ್ಮ ಮೊಹಿಂದ್ರಾ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರ ಸಮ್ಮುಖದಲ್ಲಿ ಹೊಸ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಟಿಂಡಾ (ನಗರ) ವನ್ನು ಪ್ರತಿನಿಧಿಸುವ ಮನ್ ಪ್ರೀತ್ ಸಿಂಗ್ ಬಾದಲ್ ಮೊಹಿಂದ್ರಾ ನಂತರ ಪ್ರಮಾಣ ವಚನ ಸ್ವೀಕರಿಸಿದರು

Punjab cabinet expansion ಪಂಜಾಬ್ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರಾಗಿ 15 ಶಾಸಕರ ಪ್ರಮಾಣ ವಚನ
ಪಂಜಾಬ್ ಸಚಿವ ಸಂಪುಟದಲ್ಲಿ ನೂತನ ಸಚಿವರ ಪ್ರಮಾಣ ವಚನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 26, 2021 | 5:45 PM

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಭಾನುವಾರ ಸಂಪುಟ ವಿಸ್ತರಣೆ ಮಾಡಿದ್ದು 15 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬ್ರಹ್ಮ ಮೊಹಿಂದ್ರಾ ಅವರು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರ ಸಮ್ಮುಖದಲ್ಲಿ ಹೊಸ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಟಿಂಡಾ (ನಗರ) ವನ್ನು ಪ್ರತಿನಿಧಿಸುವ ಮನ್ ಪ್ರೀತ್ ಸಿಂಗ್ ಬಾದಲ್ ಮೊಹಿಂದ್ರಾ ನಂತರ ಪ್ರಮಾಣ ವಚನ ಸ್ವೀಕರಿಸಿದರು. ಇವರ ನಂತರ ಟ್ರಿಪ್ಟ್ ರಾಜಿಂದರ್ ಸಿಂಗ್ ಬಾಜ್ವಾ, ಅರುಣಾ ಚೌಧರಿ ಕ್ಯಾಬಿನೆಟ್ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಟ್ರಿಪ್ಟ್ ರಾಜಿಂದರ್ ಸಿಂಗ್ ಬಾಜ್ವಾ ಮತ್ತು ಅರುಣಾ ಚೌಧರಿ ಕ್ರಮವಾಗಿ ಫತೇಘರ್ ಚುರಿಯನ್ ಮತ್ತು ದಿನಾ ನಗರವನ್ನು ಪ್ರತಿನಿಧಿಸುತ್ತಾರೆ.

ರಾಜ ಸಂಸಿಯನ್ನು ಪ್ರತಿನಿಧಿಸುವ ಸುಖಬಿಂದರ್ ಸಿಂಗ್ ಸರ್ಕಾರಿಯಾ ಮತ್ತು ವಿವಾದಿತ ಶಾಸಕ ಗುರ್ಜಿತ್ ಸಿಂಗ್ ರಾಣಾ ಕೂಡ ಪಂಜಾಬ್ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಣಾ ಗುರ್ಜಿತ್ ಸಿಂಗ್ ಅವರು ಕಪುರ್ತಲಾ ಶಾಸಕರಾಗಿದ್ದು, ಅವರು ರಾಜ್ಯ ಸಚಿವ ಸಂಪುಟಕ್ಕೆ ಮರಳುವುದನ್ನು ಹಲವಾರು ನಾಯಕರು ವಿರೋಧಿಸಿದರು. ಅವರು ಅಮರಿಂದರ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು ಮತ್ತು 2018 ರಲ್ಲಿ 10 ತಿಂಗಳ ನಂತರ ಮರಳು ಗಣಿಗಾರಿಕೆಯ ಹರಾಜಿನಲ್ಲಿ ಹಗರಣ ಆರೋಪದಲ್ಲಿ ರಾಜಿನಾಮೆ ನೀಡಬೇಕಾಗಿ ಬಂತು. ಮಲೆರ್ಕೋಟ್ಲಾ ಶಾಸಕಿ ರಜಿಯಾ ಸುಲ್ತಾನಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಗಿಡ್ಡೇರ್ಬಾಹಾ ಶಾಸಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ನವಜೋತ್ ಸಿಂಗ್ ಸಿಧು ಆಪ್ತ  ಪರ್ಗತ್ ಸಿಂಗ್ ಪ್ರಮಾಣವಚನ ಸ್ವೀಕರಿಸಿದರು. ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಬಂಡಾಯವೆದ್ದವರಲ್ಲಿ ಒಬ್ಬರಾಗಿದ್ದರು ಪರ್ಗತ್ ಸಿಂಗ್.  ರಾಜ್ ಕುಮಾರ್ ವರ್ಕಾ ಮತ್ತು ಸಂಗತ್ ಸಿಂಗ್ ಗಿಲ್ಜಿಯಾನ್ ಪ್ರಮಾಣವಚನ ಸ್ವೀಕರಿಸಿದರು ರಾಜ್ಯ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ವೆರ್ಕಾ ಅವರು ಜನರ ಆಶಯಗಳನ್ನು ಈಡೇರಿಸಲು ಬಯಸುತ್ತಾರೆ ಎಂದು ಹೇಳಿದರು. ಗುರ್ಕೀರತ್ ಕೊಟ್ಲಿ ಕೊನೆಯದಾಗಿ ಪ್ರಮಾಣವಚನ ಸ್ವೀಕರಿಸಿದರು

3 ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ 

ವಿಜಯ್ ಇಂದರ್ ಸಿಂಗ್ಲಾ, ಭರತ್ ಭೂಷಣ್ ಅಶು ಮತ್ತು ರಣದೀಪ್ ಸಿಂಗ್ ನಭಾ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪಂಜಾಬ್ ಸಚಿವ ಸಂಪುಟ ವಿಸ್ತರಣೆ : 7 ಹೊಸ ಮುಖಗಳ ಸೇರ್ಪಡೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲ 15 ಮಂದಿಯಲ್ಲಿ 8 ಮುಖ್ಯಮಂತ್ರಿಗಳನ್ನು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸಂಪುಟದಿಂದ ಉಳಿಸಿಕೊಳ್ಳಲಾಗಿದೆ. ಚನ್ನಿಯವರ ಹೊಸ ಸಂಪುಟದಲ್ಲಿ 7 ಹೊಸ ಮುಖಗಳನ್ನು ಸೇರಿಸಲಾಗಿದೆ.

ಇದನ್ನೂ ಓದಿ: Punjab cabinet expansion ಪಂಜಾಬ್ ಸಚಿವ ಸಂಪುಟದಲ್ಲಿರಲಿದ್ದಾರೆ 15 ಸಚಿವರು; ಮೂವರು ಹೊಸಬರಿಗೆ ಅವಕಾಶ?

ಇದನ್ನೂ ಓದಿ: Punjab cabinet expansion ಪಂಜಾಬ್ ನೂತನ ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ: ಕೊನೇ ಹಂತದಲ್ಲಿ ಕೆಲವರನ್ನು ಕೈ ಬಿಡುವ ಸಾಧ್ಯತೆ

(Punjab cabinet expansion Charanjit Singh Channi inducts 15 ministers to the cabinet New ministers take oath)

Published On - 5:17 pm, Sun, 26 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ