ಹೊಟ್ಟೆ ನೋವೆಂದ ಬಾಲಕಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಲ್ಲೇ ಹೆರಿಗೆ,ಆಕೆ ಗರ್ಭಿಣಿ ಎಂದು ಆಗ್ಲೇ ಗೊತ್ತಾಗಿದ್ದು

ಜಲಂಧರ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಗೆ ಕಾಣಿಸಿಕೊಂಡಿರುವುದು ಹೆರಿಗೆ ನೋವು, ಆಕೆ ಗರ್ಭಿಣಿ(Pregnant) ಎಂದು ಆಗಲೇ ಗೊತ್ತಾಗಿದೆ. ಆಕೆ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಸರ ಮೂಲದ ಯುವಕನ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹೊಟ್ಟೆ ನೋವೆಂದ ಬಾಲಕಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಲ್ಲೇ ಹೆರಿಗೆ,ಆಕೆ ಗರ್ಭಿಣಿ ಎಂದು ಆಗ್ಲೇ ಗೊತ್ತಾಗಿದ್ದು
ಮಗು

Updated on: Apr 24, 2026 | 11:52 AM

ಅಮೃತಸರ, ಏಪ್ರಿಲ್ 24: ಜಲಂಧರ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಗೆ ಕಾಣಿಸಿಕೊಂಡಿರುವುದು ಹೆರಿಗೆ ನೋವು, ಆಕೆ ಗರ್ಭಿಣಿ(Pregnant) ಎಂದು ಆಗಲೇ ಗೊತ್ತಾಗಿದ್ದು. ಆಕೆ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಾಳೆ.  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಸರ ಮೂಲದ ಯುವಕನ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅತ್ಯಂತ ಕಳವಳಕಾರಿ ಘಟನೆಯೊಂದು ವರದಿಯಾಗಿದೆ. ಸಾಮಾನ್ಯ ಹೊಟ್ಟೆನೋವು ಎಂದು ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿ ಎಂಬ ವಿಷಯ ತಿಳಿದು ಕುಟುಂಬಸ್ಥರು ದಿಗಿಲುಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಸಂತ್ರಸ್ತೆಯ ಚಿಕ್ಕಮ್ಮ ನೀಡಿರುವ ದೂರಿನ ಪ್ರಕಾರ, ಬಾಲಕಿಗೆ ಸುಮಾರು ಒಂದೂವರೆ ತಿಂಗಳಿನಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಇದಕ್ಕಾಗಿ ಮೊದಲು ಜಲಂಧರ್‌ನ ನೂರ್ಮಹಲ್‌ನಲ್ಲಿರುವ ಖಾಸಗಿ ವೈದ್ಯರ ಬಳಿ ತಪಾಸಣೆ ನಡೆಸಿ ಔಷಧಿ ಪಡೆಯಲಾಗಿತ್ತು. ಆದರೆ, ಏಪ್ರಿಲ್ 19 ರಂದು ನೋವು ತೀವ್ರಗೊಂಡಾಗ ಬಾಲಕಿಯನ್ನು ಫಿಲ್ಲೌರ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ, ಆರೋಪಿಯ ಕ್ರೌರ್ಯ, ಉಸಿರಿರುವವರೆಗೂ ಹೋರಾಡಿದ್ದ ಯುವತಿ

ಬಾಲಕಿಯನ್ನು ಪರೀಕ್ಷಿಸಿದ ಫಿಲ್ಲೌರ್‌ನ ವೈದ್ಯರು ಪರಿಸ್ಥಿತಿ ಗಂಭೀರವಾಗಿರುವುದನ್ನು ಕಂಡು ಬೇರೆ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಅಲ್ಲಿ ನಡೆಸಿದ ಹೆಚ್ಚಿನ ತಪಾಸಣೆಯಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸುದ್ದಿಯಿಂದ ಆಘಾತಕ್ಕೊಳಗಾದ ಚಿಕ್ಕಮ್ಮ ಬಾಲಕಿಯನ್ನು ವಿಚಾರಿಸಿದಾಗ, ಅಮೃತಸರದ ಯುವಕನೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಕಣ್ಣೀರಿಟ್ಟಿದ್ದಾಳೆ.

ಘಟನೆಯ ಗಾಂಭೀರ್ಯವನ್ನು ಪರಿಗಣಿಸಿದ ಜಲಂಧರ್ ಗ್ರಾಮೀಣ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಏಪ್ರಿಲ್ 20 ರಂದು ಆರೋಪಿ ಬಾಲಕನ ವಿರುದ್ಧ ಪೋಕ್ಸೊ (POCSO) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಎಫ್​ಐಆರ್ ದಾಖಲಿಸಲಿಸಿದ್ದಾರೆ.

ಘಟನೆ ನಡೆದ ಸ್ಥಳದ ವ್ಯಾಪ್ತಿಯನ್ನು ಲೆಕ್ಕಿಸದೆ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಿಸಬಹುದಾದ ಝೀರೊ ಎಫ್‌ಐಆರ್ ಇದಾಗಿದೆ. ಬಳಿಕ ಇದನ್ನು ಘಟನೆ ನಡೆದ ವ್ಯಾಪ್ತಿಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ.

ಸದ್ಯ ಪೊಲೀಸರು ಆರೋಪಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿಯ ವಯಸ್ಸು ಮತ್ತು ಆಕೆಯ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ವರದಿಗಳನ್ನು ಸಂಗ್ರಹಿಸಲಾಗುತ್ತಿದೆ. ಅತ್ಯಾಚಾರದಂತಹ ಘಟನೆಗಳು ಅಪ್ರಾಪ್ತರ ಮೇಲೆ ನಡೆಯುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us