AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಚೆನ್ನಾಗಿದೆ; ಜಲಿಯನ್ ವಾಲಾಬಾಗ್ ನವೀಕರಣ ಬಗ್ಗೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

Amarinder Singh: "ಏನು ತೆಗೆದುಹಾಕಲಾಗಿದೆ ಎಂದು ನನಗೆ ಗೊತ್ತಿಲ್ಲ. ನನಗೆ ಇದು ತುಂಬಾ ಚೆನ್ನಾಗಿ ಕಾಣುತ್ತದೆ" ಎಂದು ಸಿಂಗ್ ಹೇಳಿದ್ದಾರೆ. ಇತ್ತ ರಾಹುಲ್ ಗಾಂಧಿ "ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಅವಮಾನ" ಎಂದು ಕರೆದಿದ್ದು ಸಿಂಗ್ ರಾಹುಲ್​​ಗಿಂತ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದಾರೆ.

ನೋಡಲು ಚೆನ್ನಾಗಿದೆ; ಜಲಿಯನ್ ವಾಲಾಬಾಗ್ ನವೀಕರಣ ಬಗ್ಗೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್
ಕ್ಯಾಪ್ಟನ್ ಅಮರಿಂದರ್ ಸಿಂಗ್
TV9 Web
| Edited By: |

Updated on: Aug 31, 2021 | 7:23 PM

Share

ದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಜಲಿಯನ್ ವಾಲಾಬಾಗ್ ನವೀಕರಣವನ್ನು ಬೆಂಬಲಿಸಿ ಮಾತನಾಡಿದ್ದಾರೆ. ಜಲಿಯನ್ ವಾಲಾಬಾಗ್ ನವೀಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಇತಿಹಾಸಕಾರರು ಮತ್ತು ನಾಗರಿಕ ಸಮಾಜದಿಂದ ಟೀಕೆಗಳನ್ನು ಎದುರಿಸುತ್ತಿದೆ. ಜಲಿಯನ್ ವಾಲಾಬಾಗ್ ನವೀಕರಣವನ್ನು ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಯಾಕೆ ತಡೆದಿಲ್ಲ ಎಂಬ ಪ್ರಶ್ನೆಗಳೂ ಕೇಳಿಬಂದಿದೆ. ಲೇಸರ್ ಶೋ ಸೇರಿದಂತೆ, ಸ್ಟ್ಯಾಕ್ ಕಾರಿಡಾರ್ ಮೊದಲಾದ ನವೀಕರಣದಿಂದಾಗಿ ಜನರ ತ್ಯಾಗವನ್ನು ಕ್ಷುಲ್ಲಕವಾಗಿಸಿದೆ ಮತ್ತು ಪಂಜಾಬ್ ಸರ್ಕಾರ ಅದನ್ನು ಆರಂಭದಲ್ಲಿಯೇ ನಿಲ್ಲಿಸಬೇಕಾಗಿತ್ತು ಎಂದು ಹಲವರು ಹೇಳಿದ್ದಾರೆ. “ಏನು ತೆಗೆದುಹಾಕಲಾಗಿದೆ ಎಂದು ನನಗೆ ಗೊತ್ತಿಲ್ಲ. ನನಗೆ ಇದು ತುಂಬಾ ಚೆನ್ನಾಗಿ ಕಾಣುತ್ತದೆ” ಎಂದು ಸಿಂಗ್ ಹೇಳಿದ್ದಾರೆ. ಇತ್ತ ರಾಹುಲ್ ಗಾಂಧಿ “ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಅವಮಾನ” ಎಂದು ಕರೆದಿದ್ದು ಸಿಂಗ್ ರಾಹುಲ್​​ಗಿಂತ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದಾರೆ.  “ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಇಂತಹ ಅವಮಾನವನ್ನು ಹುತಾತ್ಮರ ಅರ್ಥ ತಿಳಿಯದವರು ಮಾತ್ರ ಮಾಡಬಹುದು. ನಾವು ಈ ಕ್ರೌರ್ಯದ ವಿರುದ್ಧ ಇದ್ದೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

102 ವರ್ಷಗಳ ಹಿಂದೆ ಬ್ರಿಟಿಷ್ ಜನರಲ್ ಡೈಯರ್ ಶಾಂತಿಯುತ ಪ್ರತಿಭಟನೆ ವಿರುದ್ಧ ಗುಂಡು ಹಾರಿಸಿದ್ದ ಜಲಿಯನ್ ವಾಲಾಬಾಗ್ ಈ ನವೀಕರಣದೊಂದಿಗೆ ಘನತೆ, ನಷ್ಟ ಮತ್ತು ಭಯಾನಕತೆಯ ಸ್ಥಳವನ್ನು ಕಸಿದುಕೊಂಡಿದೆ ಎಂದು ಇತರ ವಿರೋಧ ಪಕ್ಷದ ಖಂಡಿಸಿದರು.

ಸಿಪಿಎಂನ ಸೀತಾರಾಂ ಯೆಚೂರಿಯಂತಹ ನಾಯಕರು ಬಲಪಂಥೀಯ ಇತಿಹಾಸವನ್ನು ಉಲ್ಲೇಖಿಸಿ ತೀವ್ರವಾಗಿ ಟೀಕಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಿಂದ ದೂರ ಉಳಿದವರು ಮಾತ್ರ ಇದನ್ನು ಮಾಡಬಹುದು ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು “ನೋವು … ನಷ್ಟ (ಮತ್ತು) ದುರಂತದ ಬಗ್ಗೆ ನೆನಪುಗಳನ್ನು ಸುಂದರಗೊಳಿಸುವ “ಅಥವಾ” ಆ ನೆನಪುಗಳನ್ನು “ಮಾರ್ಪಡಿಸುವ ಪ್ರಯತ್ನಗಳು ನಮ್ಮ ಸಾಮೂಹಿಕ ಇತಿಹಾಸಕ್ಕೆ ದೊಡ್ಡ ಹಾನಿಯನ್ನುಂಟು ಮಾಡುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ನಾನೂ ಹುತಾತ್ಮರ ಮಗ, ಈ ಅವಮಾನ ಸಹಿಸುವುದಿಲ್ಲ; ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಕ್ಕೆ ರಾಹುಲ್ ಗಾಂಧಿ ಕಿಡಿ

(Punjab CM Amarinder Singh support the renovations at Jallianwala Bagh says Looks Nice)

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್