ದೆಹಲಿಯ ಅಪೋಲೋ ಆಸ್ಪತ್ರೆಗೆ ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲು

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡುವ ಸುಪ್ರೀಂಕೋರ್ಟ್‌ನ ಆದೇಶದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೆಪ್ಟೆಂಬರ್ 13 ರಿಂದ ದೆಹಲಿಯಲ್ಲಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ದೆಹಲಿಯ ಅಪೋಲೋ ಆಸ್ಪತ್ರೆಗೆ ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲು
ಭಗವಂತ್ ಮಾನ್
ರಶ್ಮಿ ಕಲ್ಲಕಟ್ಟ

Updated on: Sep 18, 2024 | 7:36 PM

ದೆಹಲಿ ಸೆಪ್ಟೆಂಬರ್ 18: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರನ್ನು ಬುಧವಾರ ದೆಹಲಿಯ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ದೆಹಲಿಯಿಂದ ಹಿಂದಿರುಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಬಂದ ನಂತರ ಮಾನ್ ಅನಾರೋಗ್ಯಕ್ಕೆ ಒಳಗಾದರು. ಪ್ರೆಸ್ ಕಿ ತಾಖತ್ ವರದಿಯ ಪ್ರಕಾರ ಅವರನ್ನು ಅಪೋಲೋ ಆಸ್ಪತ್ರೆಗೆ ವರ್ಗಾಯಿಸುವ ಮೊದಲು ಚಂಡೀಗಢದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ IV ಡ್ರಿಪ್ ನೀಡಲಾಗಿದೆ.  ಆಸ್ಪತ್ರೆಯಿಂದ ಮಾನ್ ಅವರ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ನವೀಕರಣಗಳಿಲ್ಲ.

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡುವ ಸುಪ್ರೀಂಕೋರ್ಟ್‌ನ ಆದೇಶದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೆಪ್ಟೆಂಬರ್ 13 ರಿಂದ ದೆಹಲಿಯಲ್ಲಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಕೇಜ್ರಿವಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದ ಸೆಪ್ಟೆಂಬರ್ 15 ರ ಭಾನುವಾರದಂದು ಎಎಪಿ ಕಾರ್ಯಕರ್ತರ ಸಭೆಯಲ್ಲೂ ಮಾನ್ ಭಾಗವಹಿಸಿದ್ದರು.  ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕೇಜ್ರಿವಾಲ್ ಅವರ ನಿರ್ಧಾರವನ್ನು “ಕ್ರಾಂತಿಕಾರಿ” ಎಂದು ಮಾನ್ ಬಣ್ಣಿಸಿದ್ದು ಇದು ಅವರ “ಪ್ರಾಮಾಣಿಕತೆ ಮತ್ತು ಜನರಿಗೆ ಬದ್ಧತೆ” ಗೆ ನೀಡಿದ ಮನ್ನಣೆ ಎಂದಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಬೆಂಬಲಿಸಲಿದ್ದಾರೆ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ಎಎಪಿಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆದಿವೆ, ಆದರೆ ಈ ಪ್ರಯತ್ನಗಳು ಪಕ್ಷವನ್ನು ದುರ್ಬಲಗೊಳಿಸುವಲ್ಲಿ ವಿಫಲವಾಗಿವೆ ಎಂದಿದ್ದಾರೆ ಮಾನ್.

ಎರಡು ದಿನಗಳ ನಂತರ ಕೇಜ್ರಿವಾಲ್ ಭಾನುವಾರ ತಮ್ಮ ರಾಜೀನಾಮೆಯನ್ನು ಘೋಷಿಸಿ, ರಾಷ್ಟ್ರ ರಾಜಧಾನಿಯಲ್ಲಿ ಬೇಗನೆ ಚುನಾವಣೆ ನಡೆಸಬೇಕು. ಸಾರ್ವಜನಿಕರು ತನಗೆ “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

ಮಂಗಳವಾರ, ಕೇಜ್ರಿವಾಲ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ ನಂತರ ಪಕ್ಷದ ಹಿರಿಯ ನಾಯಕ ಅತಿಶಿ ಅವರನ್ನು ದೆಹಲಿಯ ಹೊಸ ಮುಖ್ಯಮಂತ್ರಿಯಾಗಿ ನೇಮಿಸಲು ಆಮ್ ಆದ್ಮಿ ಪಕ್ಷವು ಸರ್ವಾನುಮತದಿಂದ ಒಪ್ಪಿಕೊಂಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us