ಅನಾರೋಗ್ಯದಿಂದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ರಕ್ತದೊತ್ತಡದಲ್ಲಿ ಏರುಪೇರಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮೊಹಾಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ 2 ದಿನಗಳಿಂದ ಅಸ್ವಸ್ಥರಾಗಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯದಲ್ಲಿ ಇಂದು ವಿಪರೀತ ಏರುಪೇರಾದ್ದರಿಂದ ಇಂದು ಸಂಜೆ ಆಸ್ಪತ್ರೆಗೆ ದಾಖಲಿಸಲಾಯಿತು. ಮುಂದಿನ ವೈದ್ಯಕೀಯ ಸಲಹೆ ಬರುವವರೆಗೆ ಅವರನ್ನು ಅಬ್ಸರ್ವೇಷನ್​​ನಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅನಾರೋಗ್ಯದಿಂದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು
Bhagwant Mann

Updated on: Sep 05, 2025 | 10:30 PM

ಮೊಹಾಲಿ, ಸೆಪ್ಟೆಂಬರ್ 5: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರ ಆರೋಗ್ಯ ಸ್ಥಿತಿ ಕಳೆದ ಎರಡು ದಿನಗಳಿಂದ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಇಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ಮುಖ್ಯಮಂತ್ರಿ ತೀವ್ರ ಅಸ್ವಸ್ಥರಾಗಿದ್ದರು ಮತ್ತು ಕಳೆದ 2 ದಿನಗಳಿಂದ ರಕ್ತದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯ ಲಕ್ಷಣ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ಸೇರಿಸಲು ಸಲಹೆ ನೀಡಿದರು.

51 ವರ್ಷದ ಎಎಪಿ ನಾಯಕ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ ಎರಡು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಎಂ ಭಗವಂತ್ ಮಾನ್ ಅವರನ್ನು ಇಂದು ಸಂಜೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಆದರೆ ಮುಂದಿನ ವೈದ್ಯಕೀಯ ಸಲಹೆ ಬರುವವರೆಗೆ ಅವರನ್ನು ಅಬ್ಸರ್ವೇಷನ್​​ನಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಭಗವಂತ್ ಮಾನ್ ಅವರ ಡಿಸ್ಚಾರ್ಜ್ ಅಥವಾ ಮುಂದಿನ ಚಿಕಿತ್ಸಾ ಯೋಜನೆಗಳ ಕುರಿತು ಅವರ ಕಚೇರಿ ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

ಭಗವಂತ್ ಮಾನ್ ಇಂದು ಸಂಪುಟ ಸಭೆ ನಡೆಸಬೇಕಿತ್ತು. ಆದರೆ ಅವರು ಅನಾರೋಗ್ಯಕ್ಕೆ ಒಳಗಾದ ನಂತರ ಅದನ್ನು ಮುಂದೂಡಲಾಯಿತು ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಅವರ ಅನಾರೋಗ್ಯದ ಸುದ್ದಿ ತಿಳಿದ ನಂತರ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಭಗವಂತ್ ಮಾನ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:29 pm, Fri, 5 September 25