AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸಿಎಂ ಆರೋಗ್ಯವಾಗಿದ್ದಾರೆ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಭೇಟಿಯಾದ ಭಗವಂತ್ ಮಾನ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ನ್ಯಾಯಾಂಗ ಬಂಧನದಲ್ಲಿ ಇರಿಸಿದೆ. ಏ. 9ರಂದು ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿತ್ತು. ಅವರನ್ನು ಇಂದು ಆಪ್ ನಾಯಕ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಭೇಟಿಯಾಗಿದ್ದಾರೆ.

ದೆಹಲಿ ಸಿಎಂ ಆರೋಗ್ಯವಾಗಿದ್ದಾರೆ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಭೇಟಿಯಾದ ಭಗವಂತ್ ಮಾನ್
ಕೇಜ್ರಿವಾಲ್- ಭಗವಂತ್ ಮಾನ್
ಸುಷ್ಮಾ ಚಕ್ರೆ
|

Updated on:Apr 30, 2024 | 8:55 PM

Share

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಏಪ್ರಿಲ್ 1ರಿಂದ ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಲೋಕಸಭಾ ಚುನಾವಣಾ ಪ್ರಚಾರದಿಂದ ದೂರವಿಡಲು ಆಡಳಿತಾರೂಢ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಮಂಗಳವಾರ) ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದಾರೆ. ಕೇಜ್ರಿವಾಲ್ ಅವರ ಆರೋಗ್ಯ ಚೆನ್ನಾಗಿದೆ, ಅವರು ಇನ್ಸುಲಿನ್ ಪಡೆಯುತ್ತಿದ್ದಾರೆ ಮತ್ತು ನಿಯಮಿತವಾಗಿ ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಹಿರಿಯ ಎಎಪಿ ನಾಯಕ ಭಗವಂತ್ ಮಾನ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ I.N.D.I.A ಬ್ಲಾಕ್ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ಮಾಡಲು ದೆಹಲಿ ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬೇಕಂತಲೇ ಮಾವಿನ ಹಣ್ಣು ತಿನ್ನುತ್ತಿದ್ದಾರೆ: ಇಡಿ ದೂರು

ಅರವಿಂದ್ ಕೇಜ್ರಿವಾಲ್ ಜನರು ನನ್ನ ಬಗ್ಗೆ ಚಿಂತಿಸಬಾರದು. ಚುನಾವಣೆಯ ಸಮಯದಲ್ಲಿ ಜನರು ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ. ಇದು 2ನೇ ಬಾರಿ ಕಳೆದ 15 ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭೇಟಿಯಾಗಿದ್ದಾರೆ. ಕೇಜ್ರಿವಾಲ್ ಅವರನ್ನು ಮೊದಲ ಬಾರಿಗೆ ಭೇಟಿಯಾದ ರೀತಿಯಲ್ಲಿಯೇ ಭೇಟಿಯಾಗಿದ್ದೇನೆ ಎಂದು ಭಗವಂತ್ ಮಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಾವು ಭರೂಚ್ ಮತ್ತು ಭಾವನಗರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಇತ್ತೀಚೆಗೆ ಗುಜರಾತ್‌ಗೆ ಭೇಟಿ ನೀಡಿದ್ದಾಗಿ ಕೇಜ್ರಿವಾಲ್‌ಗೆ ತಿಳಿಸಿದ್ದಾರೆ. ಕೇಜ್ರಿವಾಲ್ ಅವರ ವಿಷಯದಲ್ಲಿ ನಡೆದಿರುವುದು ತಪ್ಪು ಎಂದು ಇಡೀ ದೇಶ ಹೇಳುತ್ತಿದೆ. ನಾನು ಅಸ್ಸಾಂಗೆ ಹೋಗಿದ್ದೆ. ಅವರು ದೆಹಲಿಗೆ ಬರಲು ಮತ್ತು ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ I.N.D.I.A ಬ್ಲಾಕ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಇದನ್ನೂ ಓದಿ: ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್​ 23ರವರೆಗೆ ವಿಸ್ತರಣೆ

ಕೇಜ್ರಿವಾಲ್ ನನ್ನ ಮಗಳ ಯೋಗಕ್ಷೇಮದ ಬಗ್ಗೆಯೂ ವಿಚಾರಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. “ನಾವು ನಮ್ಮ ಕುಟುಂಬಗಳ ಬಗ್ಗೆ ಮಾತನಾಡಿದೆವು. 1 ತಿಂಗಳ ವಯಸ್ಸಿನ ನನ್ನ ಮಗಳು ನಿಯಾಮತ್ ಬಗ್ಗೆ ಕೇಳಿದರು. ಅವರು ಪಂಜಾಬ್‌ನಲ್ಲಿ ಕೃಷಿ ಉತ್ಪನ್ನಗಳು ಹೇಗಿವೆ ಮತ್ತು ಮಾದರಿ ನೀತಿ ಸಂಹಿತೆಯಿಂದಾಗಿ ಯಾವುದೇ ಸೌಲಭ್ಯಗಳಿಗೆ ತೊಂದರೆಯಾಗುತ್ತಿದೆಯೇ ಎಂದು ಕೇಳಿದರು” ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

“ಜನರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ ಎಂದು ನಾನು ಅವರಿಗೆ ಹೇಳಿದೆ. ಪಂಜಾಬ್ ಸರ್ಕಾರಿ ಶಾಲೆಗಳ 158 ಮಕ್ಕಳು ಜೆಇಇ (ಮೇನ್ಸ್) ತೇರ್ಗಡೆಯಾಗಿದ್ದಾರೆ ಎಂದು ನಾನು ಅವರಿಗೆ ತಿಳಿಸಿದೆ. ಅವರು ಬಹಳ ಸಂತೋಷಪಟ್ಟರು. ಇದು ಶಿಕ್ಷಣ ಕ್ರಾಂತಿಯಾಗಿದೆ ಎಂದಿದ್ದಾರೆ.

ಸೋಮವಾರ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ದೆಹಲಿ ಸಚಿವ ಅತಿಶಿ ಅವರನ್ನು ಭೇಟಿ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Tue, 30 April 24