ರಾಜಿ ಮಾಡಿಕೊಳ್ಳುವುದಿಲ್ಲ, ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಭಗವಂತ್ ಮಾನ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಲೋಕಸಭಾ ಚುನಾವಣೆಯನ್ನು ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಎದುರಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ಬೆನ್ನಲ್ಲೇ ಪಂಜಾಬ್‌ನಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.
ದೆಹಲಿ ಜನವರಿ 24: ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ (Punjab) ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷ (AAP) ಹೇಳಿದೆ. ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಎಲ್ಲಾ 13 ಲೋಕಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ( Bhagwant Mann) ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಲೋಕಸಭಾ ಚುನಾವಣೆಯನ್ನು ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಎದುರಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ಬೆನ್ನಲ್ಲೇ ಎಎಪಿ ಈ ನಿರ್ಧಾರ ಪ್ರಕಟಿಸಿದೆ.
ಏಕಾಂಗಿಯಾಗಿ ಚುನಾವಣೆ ಸ್ಪರ್ಧಿಸುವ ಮಮತಾ ಬ್ಯಾನರ್ಜಿಯವರ ನಿರ್ಧಾರ ಮತ್ತು ಎಎಪಿ ಇದನ್ನು ಅನುಸರಿಸುತ್ತದೆಯೇ ಎಂಬ ಪ್ರಶ್ನೆಗೆ ಮಾನ್, “ಪಂಜಾಬ್‌ನಲ್ಲಿ ನಾವು ಹಾಗೆ ಏನನ್ನೂ ಮಾಡುವುದಿಲ್ಲ ,ನಾವು ಕಾಂಗ್ರೆಸ್‌ನೊಂದಿಗೆ ಮೈತ್ರಿ ಹೊಂದಿಲ್ಲ ಎಂದಿದ್ದಾರೆ.
#WATCH | On TMC leader Mamata Banerjee saying “Will fight alone” during Lok Sabha polls in Bengal, Punjab CM & AAP leader Bhagwant Mann says, “…In Punjab, we will not do anything (alliance with Congress) like that, we have nothing with Congress.” pic.twitter.com/JVBY8FtjJV
— ANI (@ANI) January 24, 2024
ಪಂಜಾಬ್‌ನಲ್ಲಿ ಕಾಂಗ್ರೆಸ್‌ನೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಎಎಪಿ ನಿರಾಕರಿಸಬಹುದು. ಯಾಕೆಂದರೆ ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಠಮಾರಿ ಧೋರಣೆ ಹೊಂದಿದೆ ಎಂದು ಮಾನ್ ಆರೋಪಿಸಿದರು.
ಇಂಡಿಯಾ ಟುಡೇ ವರದಿಯ ಪ್ರಕಾರ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಪಂಜಾಬ್ ಘಟಕದ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ. ಎಎಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆ ಕೇಳಿದಾಗ, ಪಂಜಾಬ್‌ನ ಎಲ್ಲಾ 13 ಸ್ಥಾನಗಳನ್ನು ಎಎಪಿ ಗೆಲ್ಲುತ್ತದೆ ಎಂದು ಮಾನ್ ಕಳೆದ ವಾರ ಹೇಳಿದ್ದರು.
ಪಂಜಾಬ್ ಹೀರೋ ಆಗಲಿದೆ. ಆಮ್ ಆದ್ಮಿ ಪಕ್ಷವು ಎಲ್ಲಾ 13 (ಲೋಕಸಭಾ) ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ಹಲವಾರು ಬಾರಿ ಹೇಳಿದ್ದೇನೆ. ಪಂಜಾಬ್‌ನ ಜನರು ಎಎಪಿಯನ್ನು ಪ್ರೀತಿಸುತ್ತಾರೆ ಮತ್ತು ಅವರು ಎಎಪಿಗೆ 92 (ಅಸೆಂಬ್ಲಿ) ಸ್ಥಾನಗಳನ್ನು ನೀಡಿದ್ದಾರೆ. ನಾವು ಪಕ್ಷದ ಅಧಿಕಾರವನ್ನು ಜನರ ಕಲ್ಯಾಣಕ್ಕಾಗಿ ಬಳಸುತ್ತಿದ್ದೇವೆ ಎಂದು ಮಾನ್ ಹೇಳಿದ್ದರು.
ಪಂಜಾಬ್‌ನ ಆಪ್ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ “ತುಂಬಾ ಉತ್ಸುಕರಾಗಿದ್ದಾರೆ”. ಪಂಜಾಬ್ ಯಾವಾಗಲೂ ಹೊಸ ದಾಖಲೆಗಳನ್ನು ಸೃಷ್ಟಿಸಿದೆ, ಅದು ಹಸಿರು ಕ್ರಾಂತಿಯಾಗಿರಬಹುದು ಅಥವಾ ಸ್ವಾತಂತ್ರ್ಯ ಹೋರಾಟವಾಗಿರಬಹುದು. ಪಂಜಾಬ್ ಹೊಸ ದಾಖಲೆ ರಚಿಸಲು ಪ್ರಸಿದ್ಧವಾಗಿದೆಯ ಈ ಬಾರಿ ಅದು 13-0 ದಾಖಲೆಯನ್ನು ರಚಿಸುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಹೋರಾಟ: ಮಮತಾ ಬ್ಯಾನರ್ಜಿ
ಪಂಜಾಬ್ 13 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಎಎಪಿ ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾತುಕತೆ ನಡೆಸುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:45 pm, Wed, 24 January 24