Bhagwant Mann: ಹೆಣ್ಣು ಮಗುವನ್ನು ಬರಮಾಡಿಕೊಂಡ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ದಂಪತಿ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)ಮತ್ತು ಅವರ ಪತ್ನಿ ಗುರುಪ್ರೀತ್ ಕೌರ್ ಗುರುವಾರ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಭಗವಂತ್ ಮಾನ್ ಅವರು ತಮ್ಮ ಮಗುವಿನ ಚಿತ್ರವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ದೇವರು ನನಗೆ ಹೆಣ್ಣುಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ, ತಾಯಿ, ಮಗು ಸುರಕ್ಷಿತವಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

2015 ರಲ್ಲಿ ಅವರ ಮೊದಲ ಹೆಂಡತಿಯಿಂದ ವಿಚ್ಛೇದನದ ಪಡೆದಿದ್ದರು, ಆರು ವರ್ಷಗಳ ನಂತರ ಭಗವಂತ್ ಮಾನ್ 2022 ರಲ್ಲಿ ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು.
ಅವರು ತಮ್ಮ ಮೊದಲ ಮದುವೆಯಿಂದ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ ಮಗಳ ಹೆಸರು ಸೀರತ್ ಕೌರ್ ಮತ್ತು ಮಗನ ಹೆಸರು ದಿಲ್ಶನ್. ಇಬ್ಬರೂ ತಮ್ಮ ತಂದೆ ಮತ್ತು ಸಿಎಂ ಭಗವಂತ್ ಮಾನ್ ಅವರೊಂದಿಗೆ ಅನೇಕ ಸಂದರ್ಭಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಮತ್ತಷ್ಟು ಓದಿ: ರಾಜಿ ಮಾಡಿಕೊಳ್ಳುವುದಿಲ್ಲ, ಪಂಜಾಬ್ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಏಕಾಂಗಿ ಸ್ಪರ್ಧೆ: ಭಗವಂತ್ ಮಾನ್
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಮನ್ ತಮ್ಮ ಭಾಷಣದಲ್ಲಿ ತಮ್ಮ ಪತ್ನಿ ಗುರುಪ್ರೀತ್ ಕೌರ್ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಗುರುಪ್ರೀತ್ ಕೌರ್ ಮೂಲತಃ ಹರಿಯಾಣದ ಪೆಹೋವಾದವರು ಮತ್ತು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಡಾ.ಗುರ್ ಪ್ರೀತ್ ಕೌರ್ ಸಿಎಂ ಭಗವಂತ್ ಮಾನ್ ಗಿಂತ 16 ವರ್ಷ ಚಿಕ್ಕವರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ