AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭದ್ರತೆಯಲ್ಲಿ ಯಾವುದೇ ಲೋಪವಾಗಿಲ್ಲ: ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ

PM Security Breach ಧಾನಿ ಮೋದಿಯವರು ಇಂದು ಫಿರೋಜ್‌ಪುರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂತಿರುಗಬೇಕಾಯಿತು ಎಂಬುದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾವು ನಮ್ಮ ಪ್ರಧಾನಿಯನ್ನು ಗೌರವಿಸುತ್ತೇವೆ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

ಪ್ರಧಾನಿ ಮೋದಿ ಭದ್ರತೆಯಲ್ಲಿ ಯಾವುದೇ ಲೋಪವಾಗಿಲ್ಲ: ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 05, 2022 | 6:47 PM

Share

ಚಂಡೀಗಢ: ಪಂಜಾಬ್​​ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುವ ವೇಳೆ ಪಂಜಾಬ್ ಪೊಲೀಸರಿಂದ ಗಂಭೀರ ಭದ್ರತಾ ಲೋಪ ಸಂಭವಿಸಿದ ಹಿನ್ನಲೆಯಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ. ನನ್ನ ಕಾರ್ಯದರ್ಶಿಗೆ ಕೊರೊನಾ ಆದ ಕಾರಣ ನಾನು ಖುದ್ದಾಗಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಹೋಗಿಲ್ಲ ಎಂದಿದ್ದಾರೆ.  ಮೋದಿಯವರನ್ನು ಸ್ವಾಗತಿಸಲು ಹಣಕಾಸು ಸಚಿವರನ್ನು ಕಳುಹಿಸಿದ್ದೆವು. ಪ್ರಧಾನಿಗೆ ರಾಜ್ಯದ ವತಿಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದೆವು. ಪಂಜಾಬ್​​ನಲ್ಲಿ ನಡೆದ ಘಟನೆ ದುರದೃಷ್ಟಕರ. ರೈತರ ಪ್ರತಿಭಟನೆ ಬಗ್ಗೆ ಗೃಹಸಚಿವರು ಮಾಹಿತಿ ನೀಡಿದ್ದರು. ರೈತರ ಪ್ರತಿಭಟನೆ ತಡೆಯಲು ಪೊಲೀಸರು ಶ್ರಮ ವಹಿಸಿದ್ದರು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಪ್ರತಿಭಟನೆಗಳಿಂದಾಗಿ ಭೇಟಿಯನ್ನು ನಿಲ್ಲಿಸುವಂತೆ ನಾವು ಅವರಿಗೆ (PMO) ಕೇಳಿಕೊಂಡಿದ್ದೇವೆ. ಅವರ (ಪ್ರಧಾನಿ ನರೇಂದ್ರ ಮೋದಿ) ಹಠಾತ್ ಮಾರ್ಗ ಬದಲಾವಣೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಪ್ರಧಾನಿ ಭೇಟಿ ವೇಳೆ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಚನ್ನಿ ಹೇಳಿದ್ದಾರೆ.

ನಾನು ಇಂದು ಬಟಿಂಡಾದಲ್ಲಿ ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳಬೇಕಾಗಿತ್ತು ಆದರೆ ನನ್ನ ಜೊತೆಗಿದ್ದವರು ಕೊವಿಡ್ ಪಾಸಿಟಿವ್ ಆಗಿದ್ದರು. ಪಾಸಿಟಿವ್ ಬಂದ ಕೆಲವರ ಜತೆ ನಿಕಟ ಸಂಪರ್ಕದಲ್ಲಿದ್ದ ಕಾರಣ ಇಂದು ಪ್ರಧಾನಿಯವರನ್ನು ಬರಮಾಡಿಕೊಳ್ಳಲು ಹೋಗಿರಲಿಲ್ಲ. ಪ್ರಧಾನಿ ಮೋದಿಯವರು ಇಂದು ಫಿರೋಜ್‌ಪುರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂತಿರುಗಬೇಕಾಯಿತು ಎಂಬುದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾವು ನಮ್ಮ ಪ್ರಧಾನಿಯನ್ನು ಗೌರವಿಸುತ್ತೇವೆ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ರೈತರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ. ನಾನು ರೈತರ ಮೇಲೆ ಲಾಠಿ ಚಾರ್ಜ್ ಮಾಡಲು ಹೋಗುವುದಿಲ್ಲ. ನಾವು ನಿನ್ನೆ ರಾತ್ರಿ ಇಡೀ ರೈತರೊಂದಿಗೆ ಮಾತನಾಡಿದ ನಂತರ ಅವರು ತಮ್ಮ ಧರಣಿಯನ್ನು ಕೊನೆಗೊಳಿಸಿದ್ದಾರೆ.ಇಂದು ಇದ್ದಕ್ಕಿದ್ದಂತೆ ಫಿರೋಜ್‌ಪುರ ಜಿಲ್ಲೆಯಲ್ಲಿ ಕೆಲವು ಚಳವಳಿಗಾರರು ಜಮಾಯಿಸಿದ್ದಾರೆ. ಇಂದು ಪ್ರಧಾನಿ ಮೋದಿ ಭೇಟಿ ವೇಳೆ ಯಾವುದೇ ಭದ್ರತಾ ಲೋಪಗಳಾಗಿದ್ದರೆ, ನಾವು ತನಿಖೆ ನಡೆಸುತ್ತೇವೆ. ಪ್ರಧಾನಿಗೆ ಯಾವುದೇ ಅಪಾಯವಾಗಿಲ್ಲ ಎಂದು ಪಂಜಾಬ್ ಸಿಎಂ ಚನ್ನಿ ಹೇಳಿದರು.

ಕಾಂಗ್ರೆಸ್ ಮೋದಿಯನ್ನು ದ್ವೇಷಿಸುತ್ತದೆ: ಸ್ಮೃತಿ  ಇರಾನಿ

ನಮ್ಮ ದೇಶದ ಇತಿಹಾಸದಲ್ಲಿ ಹಿಂದೆಂದೂ ಈ ರೀತಿ ಆಗಿಲ್ಲ. ಒಂದು ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ಪ್ರಧಾನಿಯವರಿಗೆ ತೊಂದರೆಯೊಡ್ಡುವ ಸನ್ನಿವೇಶವನ್ನು ನಿರ್ಮಿಸಿದೆ. ಕಾಂಗ್ರೆಸ್ ನರೇಂದ್ರ ಮೋದಿಯನ್ನು ದ್ವೇಷಿಸುತ್ತದೆ ಎಂದು ನಮಗೆ ತಿಳಿದಿದೆ, ಆದರೆ ಇಂದು ಅವರು ಭಾರತದ ಪ್ರಧಾನಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಹೇಳಿದ್ದಾರೆ. ರಾಜ್ಯದಲ್ಲಿ ಭದ್ರತಾ ವ್ಯವಸ್ಥೆಗಳ ಮುಂದಾಳತ್ವ ವಹಿಸುವವರು ಪ್ರಧಾನಿ ಭದ್ರತೆಗೆ ವ್ಯವಸ್ಥೆ ಮಾಡಲು ಏಕೆ ಪ್ರತಿಕ್ರಿಯಿಸಲಿಲ್ಲ? ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಡಿಜಿಪಿ ಅವರು ಪಿಎಂಒ ಮತ್ತು ಪಿಎಂ ಭದ್ರತಾ ವಿವರಗಳನ್ನು ಒದಗಿಸಲು ಅಸಮರ್ಥರಾಗಿದ್ದಾರೆಂದು ಹೇಳುತ್ತಾರೆ. ಕಾಂಗ್ರೆಸ್ ಉತ್ತರಿಸಬೇಕು ಪ್ರಧಾನಿ ಮೋದಿ ಅವರ ಭದ್ರತೆಯಲ್ಲಿ ಲೋಪ ಕಂಡುಬಂದಾಗ, ಕಾಂಗ್ರೆಸ್ ನಾಯಕರು ಸಂತೋಷದಿಂದ ಅವರ ಜೋಶ್ ಹೇಗಿದೆ ಎಂದು ಕೇಳಿದರು. ಎಂದಿನಂತೆ ಮಹಾನುಭಾವರಾದ ಪ್ರಧಾನಿ ಮೋದಿ ಅವರು ಹಿಂತಿರುಗುವಾಗ ‘ಜಿಂದಾ ಲೌಟ್ ರಹಾ ಹೂಂ(ಜೀವಂತ ಮರಳುತ್ತಿದ್ದೇನೆ) ಎಂದು ಹೇಳಿದ್ದರು ಎಂದು ಸ್ಮೃತಿ  ಕಾಂಗ್ರೆಸ್  ವಿರುದ್ಧ  ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ:  ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ:  ಕಾಂಗ್ರೆಸ್ ಮೋದಿಯನ್ನು ದ್ವೇಷಿಸುತ್ತದೆ ಎಂದು ಗೊತ್ತು, ಆದರೆ ಇಂದು ಪ್ರಧಾನಿಗೆ ಹಾನಿ ಮಾಡಲು ಯತ್ನಿಸಿದರು: ಸ್ಮೃತಿ ಇರಾನಿ

Published On - 6:30 pm, Wed, 5 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?