AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Candidate List Punjab: ಪಂಜಾಬ್​ನಲ್ಲಿ ಕಾಂಗ್ರೆಸ್​ನಿಂದ ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್​ನಿಂದ ಸ್ಪರ್ಧೆಗಿಳಿಯಲಿದ್ದಾರೆ.

Congress Candidate List Punjab: ಪಂಜಾಬ್​ನಲ್ಲಿ ಕಾಂಗ್ರೆಸ್​ನಿಂದ ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವಜೋತ್​ ಸಿಂಗ್ ಸಿಧು
TV9 Web
| Edited By: |

Updated on: Jan 15, 2022 | 3:22 PM

Share

ಪಂಜಾಬ್: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 86 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್​ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಅವರು ಡೇರಾ ಬಾಬಾ ನಾನಕ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ರಾಜ್ಯ ಸಾರಿಗೆ ಸಚಿವ ರಾಜಾ ಅಮರಿಂದರ್ ವಾರಿಂಗ್ ಅವರು ಗಿಡ್ದರ್‌ಬಾಹಾದಿಂದ ಸ್ಪರ್ಧಿಸಲಿದ್ದಾರೆ.

ಮೊಗಾ ಕ್ಷೇತ್ರದಿಂದ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರಿಗೆ ಟಿಕೆಟ್ ನೀಡಲಾಗಿದೆ. ಪಂಜಾಬಿ ಗಾಯಕ ಸಿಧು ಮುಸೇವಾಲಾ ಅವರನ್ನು ಮಾನ್ಸಾದಿಂದ ಕಣಕ್ಕಿಳಿಸಲಾಗಿದೆ. ಮಜಿತಾ – ಜಗವಿಂದರ್ ಪಾಲ್ ಸಿಂಗ್ (ಜಗ್ಗ ಮಜಿತಾ), ಅಮೃತಸರ ಪಶ್ಚಿಮ – ರಾಜ್ ಕುಮಾರ್ ವೆರ್ಕಾ, ಫತೇಘರ್ ಸಾಹಿಬ್ – ಕುಲ್ಜೀತ್ ನಗ್ರಾ, ಭಟಿಂಡಾ ಅರ್ಬನ್ – ಮನ್‌ಪ್ರೀತ್ ಸಿಂಗ್ ಬಾದಲ್, ಸಂಗ್ರೂರ್ – ವಿಜಯ್ ಇಂದರ್ ಸಿಂಗ್ಲಾ, ಫತೇಘರ್ ಚುರಿಯನ್ – ಟ್ರಿಪ್ಟ್ ರಾಜಿಂದರ್ ಸಿಂಗ್ ಬಾಜ್ವಾ ಸ್ಪರ್ಧಿಸಲಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಜಿ ರಾಜ್ಯ ಘಟಕ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಸುನೀಲ್ ಜಾಖರ್ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆದರೆ ಅವರ ಬದಲಿಗೆ ಅವರ ಸೋದರಳಿಯ ಸಂದೀಪ್ ಜಾಖರ್ ಅಬೋಹರ್ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ.

ಪಂಜಾಬ್‌ನಲ್ಲಿ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: BSP Candidate List UP: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ; ಬಿಎಸ್​ಪಿಯಿಂದ 53 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಪಂಜಾಬ್​ನಲ್ಲಿ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ; 2 ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಅದೃಷ್ಟ ಪರೀಕ್ಷೆ