ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ಸುಖ್ಜಿಂದರ್ ರಂಧಾವಾ ಹೆಸರು ಶಿಫಾರಸು

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ನೇಮಿಸುವುದು ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಹುಲ್ ಗಾಂಧಿ ಅವರ ಮನೆಯಲ್ಲಿ ಈ ಸಂಬಂಧ ಸುದೀರ್ಘ ಚರ್ಚೆ ನಡೆಯುತ್ತಿದೆ

ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ಸುಖ್ಜಿಂದರ್ ರಂಧಾವಾ ಹೆಸರು ಶಿಫಾರಸು
ಸುಖ್ಜಿಂದರ್ ರಂಧವ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 19, 2021 | 4:12 PM

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಅವರ ಹೆಸರನ್ನು ಪಂಜಾಬ್ ಕಾಂಗ್ರೆಸ್ ಸಮಿತಿ ಶಿಫಾರಸು ಮಾಡಿದೆ. ಇವರು ಸಹ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಹುಲ್ ಗಾಂಧಿ ಅವರ ಮನೆಯಲ್ಲಿ ಈ ಸಂಬಂಧ ಸುದೀರ್ಘ ಚರ್ಚೆ ನಡೆಯುತ್ತಿದೆ. ಹಿರಿಯ ನಾಯಕಿ ಅಂಬಿಕಾ ಸೋನಿ ಸಹ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್​ನ ಪಂಜಾಬ್​ ಘಟಕದಲ್ಲಿ ಈಚಿನ ದಿನಗಳಲ್ಲಿ ಆದ ಕೆಲ ಬೆಳವಣಿಗೆಗಳಿಂದ ಬೇಸತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ರಾಜೀನಾಮೆಯ ಒಂದು ದಿನದ ನಂತರ, ಅಂದರೆ ಭಾನುವಾರ ಪಕ್ಷದ ಶಾಸಕರ ಸಭೆ ನಡೆದಿತ್ತು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ವಿಂದರ್ ರಂಧಾವಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಅಮರಿಂದರ್ ಸಿಂಗ್ ಸಂಪುಟದಲ್ಲಿ ಸುಖ್ಜಿಂದರ್ ರಂಧಾವಾ ಸೆರೆಮನೆ ಮತ್ತು ಸಹಕಾರ ಇಲಾಖೆಯ ರಾಜ್ಯಖಾತೆ ಸಚಿವರಾಗಿದ್ದರು. ಸಭೆಯ ನಡುವೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ನಾನೆಂದೂ ಯಾವುದೇ ಹುದ್ದೆಯನ್ನು ಬೆಂಬತ್ತಿ ಹೋದವನಲ್ಲ ಎಂದು ಹೇಳಿದ್ದರು. ಪರೋಕ್ಷವಾಗಿ ಅಮರಿಂದರ್ ಸಿಂಗ್ ಅವರನ್ನು ಟೀಕಿಸಿದ ಅವರು, ‘ರಾಜ್ಯದ ಜನರು ಮತ್ತು ಪಕ್ಷ ತಮ್ಮ ಪರವಾಗಿ ಇರುವವರೆಗೆ ಮುಖ್ಯಮಂತ್ರಿಯಾದವರು ಆ ಸ್ಥಾನದಲ್ಲಿ ಇರುತ್ತಾರೆ’ ಎಂದು ಹೇಳಿದರು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ಬಗ್ಗೆ ಟ್ವೀಟ್ ಮಾಡಿದ್ದ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸಹಾಯಕ ರಾಜೀನಾಮೆ

ಇದನ್ನೂ ಓದಿ: Punjab Politics ಸಿಖ್ ನಾಯಕರೇ ಪಂಜಾಬ್ ಸಿಎಂ ಆಗಬೇಕು; ಮುಖ್ಯಮಂತ್ರಿ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ

(Punjab Congress Proposes Sukhjinder Randhawa for Chief Minister Post)

Published On - 3:59 pm, Sun, 19 September 21

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ