ಬಜರಂಗದಳವನ್ನು ಪಿಎಫ್‌ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಭಜರಂಗದಳ ಸಂಘಟನೆಯನ್ನು ಪಿಎಫ್ ಐ ಜೊತೆ ಹೋಲಿಕೆ ಮಾಡಿದ್ದರು.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಚಂಡೀಗಡ ಘಟಕವು 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್ ಜಾರಿ ಮಾಡಿತ್ತು.
ತನ್ನ ಯುವ ಘಟಕವಾದ ಬಜರಂಗದಳಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ‘ವಿಎಚ್‌ಪಿ’ ಆರೋಪಿಸಿದೆ. ವಿಶ್ವ ಹಿಂದೂ ಪರಿಷತ್‌ನ ಚಂಡೀಗಡ ಘಟಕ ಮತ್ತು ಅದರ ಯುವ ಘಟಕ ಬಜರಂಗ ದಳ ಮೇ 4ರಂದು ನೋಟಿಸ್ ಜಾರಿ ಮಾಡಿದ್ದು, 14 ದಿನಗಳ ಒಳಗೆ 100.10 ಕೋಟಿ ರೂ ಪರಿಹಾರ ನೀಡುವಂತೆ ಒತ್ತಾಯಿಸಿತ್ತು.
ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷ ಹರಡುತ್ತಿರುವ ಆರೋಪ ಎದುರಿಸುತ್ತಿರುವ ಬಜರಂಗದಳ, ಪಿಎಫ್‌ಐ ಮುಂತಾದ ಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.
ಆದರೆ, ಬಜರಂಗದಳವನ್ನು ಪಿಎಫ್‌ಐ, ಸಿಮಿ ಮುಂತಾದ ನಿಷೇಧಿತ ಸಂಘಟನೆಗಳ ಜತೆ ಹೋಲಿಸಿರುವುದು ಮಾನಹಾನಿಕರ ಎಂದು ವಿಎಚ್‌ಪಿ ಪರ ವಕೀಲರು ನೋಟಿಸ್‌ನಲ್ಲಿ ದೂರಿದ್ದರು, ಆದರೆ ಬಗ್ಗೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:21 am, Mon, 15 May 23