AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!

ಪಂಜಾಬ್ ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹಸಿವಿನಿಂದ ಆಹಾರಕ್ಕಾಗಿ ಅಳುತ್ತಿದ್ದ 5 ವರ್ಷದ ಮಗಳಿಗೆ ತನ್ನ ಬಳಿಯಿದ್ದ ಆಲ್ಕೋಹಾಲ್ ಕುಡಿಸಿದರೂ ಆಕೆ ಅಳು ನಿಲ್ಲಿಸಲಿಲ್ಲ. ಇದರಿಂದ ಕೋಪಗೊಂಡ ಕುಡುಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಅಪ್ಪನ ಕುಡುಕನ ಚಟಕ್ಕೆ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ.

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!
Child Death Image Credit source: iStock
ಸುಷ್ಮಾ ಚಕ್ರೆ
|

Updated on: Feb 05, 2026 | 10:24 PM

Share

ಜಲಂಧರ್, ಫೆಬ್ರವರಿ 5: ಪಂಜಾಬ್‌ನ ಜಲಂಧರ್‌ನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳು ಹಸಿವಿನಿಂದ ಅಳುತ್ತಿದ್ದ ಕಾರಣ ಆಕೆಯ ಬಾಯಿಗೆ ಆಲ್ಕೋಹಾಲ್ (Alcohol) ಹಾಕಿ, ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ಜಲಂಧರ್‌ನಲ್ಲಿ ವಾಸಿಸುತ್ತಿರುವ ಛತ್ತೀಸ್‌ಗಢ ಮೂಲದ ಆರೋಪಿ ಅರವಿಂದ್​​ನನ್ನು ಆತನ ನೆರೆಯ ಮನೆಯ ಹಿಮ್ಮತ್ ಕುಮಾರ್ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಅರವಿಂದ್ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ವಿಪರೀತ ಕುಡಿಯುತ್ತಿದ್ದ.

5 ವರ್ಷದ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅರವಿಂದ್ ತನ್ನ ಹಸಿದ ಮತ್ತು ಅಳುತ್ತಿದ್ದ ಮಗಳ ಬಾಯಿಗೆ ಆಲ್ಕೋಹಾಲ್ ಸುರಿದು ಅವಳನ್ನು ಸುಮ್ಮನಾಗಿಸಲು ಪ್ರಯತ್ನಿಸಿದನು. ಆದರೂ ಆಕೆ ಅಳತೊಡಗಿದಾಗ ಕೋಪದಿಂದ ಆಕೆಯನ್ನು ನೆಲಕ್ಕೆ ಎಸೆದನು. ಆದರೂ ಅವಳು ಅಳುತ್ತಲೇ ಇದ್ದಾಗ, ಅವಳ ಕತ್ತು ಹಿಸುಕಿದನು. ಇದರಿಂದಾಗಿ ಅವಳು ತಕ್ಷಣವೇ ಸಾವನ್ನಪ್ಪಿದಳು.

ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

“ಆರೋಪಿಗೆ ಸರಿಯಾದ ಕೆಲಸವಿರಲಿಲ್ಲ. ಕುಡಿತದ ಅಮಲಿನಲ್ಲಿದ್ದಾಗ ಆಗಾಗ ತನ್ನ ಹೆಂಡತಿ ಮತ್ತು ಮಕ್ಕಳ ಮೇಲೆ ದೈಹಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಆರಂಭಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೌಟುಂಬಿಕ ಕಲಹಗಳು ಮತ್ತು ಆರ್ಥಿಕ ತೊಂದರೆಗಳಿಂದಾಗಿ ಕುಟುಂಬವು ತೀವ್ರ ಸಂಕಷ್ಟದಲ್ಲಿತ್ತು” ಎಂದು ನೆರೆಹೊರೆಯವರ ಸಾಕ್ಷ್ಯಗಳನ್ನು ಉಲ್ಲೇಖಿಸಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಆ ಮಗುವಿನ ತಾಯಿ ತೀವ್ರ ದುಃಖಿತರಾಗಿದ್ದಾರೆ. ಮಗುವಿನ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!