ನಾನು ಭಯೋತ್ಪಾದಕನಲ್ಲ ಎಂದು ಜನ ಸಾಬೀತು ಮಾಡಿದ್ದಾರೆ, ಇದು ಕೇವಲ ಆರಂಭ; ಪಂಜಾಬ್​ನಲ್ಲಿ ಆಪ್​ ಗೆಲುವಿಗೆ ಕೇಜ್ರಿವಾಲ್ ಸಂತಸ

Punjab Election Results: ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವ ಮೂಲಕ ಜನರು "ಕೇಜ್ರಿವಾಲ್ ಭಯೋತ್ಪಾದಕ ಅಲ್ಲ, ಆತ ದೇಶದ ಮಗ, ನಿಜವಾದ ದೇಶಭಕ್ತ" ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಸಂತೋಷ ವ್ಯಕ್ತಪಡಿಸಿದ್ದಾರೆ.

ನಾನು ಭಯೋತ್ಪಾದಕನಲ್ಲ ಎಂದು ಜನ ಸಾಬೀತು ಮಾಡಿದ್ದಾರೆ, ಇದು ಕೇವಲ ಆರಂಭ; ಪಂಜಾಬ್​ನಲ್ಲಿ ಆಪ್​ ಗೆಲುವಿಗೆ ಕೇಜ್ರಿವಾಲ್ ಸಂತಸ
ಅರವಿಂದ್ ಕೇಜ್ರಿವಾಲ್
TV9kannada Web Team

| Edited By: Sushma Chakre

Mar 10, 2022 | 8:45 PM

ನವದೆಹಲಿ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಸಾಧನೆಯನ್ನು ದೊಡ್ಡ ಕ್ರಾಂತಿ ಎಂದು ಶ್ಲಾಘಿಸಿರುವ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal), ಈ ಮೂಲಕ ಜನರು ನಾನು ಭಯೋತ್ಪಾದಕನಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ದೆಹಲಿಯಲ್ಲಿ ಮೊದಲು ಸಂಭವಿಸಿದ ಈ ಕ್ರಾಂತಿಯು ಇದೀಗ ಪಂಜಾಬ್‌ಗೆ ಹರಡಿದೆ. ಮುಂದಿನ ದಿನಗಳಲ್ಲಿ ದೇಶದಾದ್ಯಂತ ಈ ಕ್ರಾಂತಿ ಉಂಟಾಗಲಿದೆ. ಭಾರತದ ಎಲ್ಲ ರಾಜ್ಯಗಳಲ್ಲೂ ಆಮ್ ಆದ್ಮಿ ಪಕ್ಷ ಗೆಲುವು ಕಾಣಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವ ಮೂಲಕ ಜನರು “ಕೇಜ್ರಿವಾಲ್ ಭಯೋತ್ಪಾದಕ ಅಲ್ಲ, ಆತ ದೇಶದ ಮಗ, ನಿಜವಾದ ದೇಶಭಕ್ತ” ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಪಂಜಾಬ್​ನಲ್ಲಿ AAP ಸರ್ಕಾರ ರಚಿಸಲು ಸಿದ್ಧವಾಗಿದೆ, 117 ವಿಧಾನಸಭಾ ಸ್ಥಾನಗಳಲ್ಲಿ 91 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಆಪ್ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರೀತಿಯ ರಾಜಕಾರಣ ಮಾಡುವಂತೆ ಮನವಿ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಎಎಪಿಗೆ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ಪಂಜಾಬ್‌ನ ಮತದಾರರನ್ನು ಅರವಿಂದ್ ಕೇಜ್ರಿವಾಲ್ ಅಭಿನಂದಿಸಿದ್ದಾರೆ. ಆಪ್​ಗೆ ಮಣೆ ಹಾಕುವ ಮೂಲಕ ಮತದಾರರು ರಾಜಕೀಯ ದಿಗ್ಗಜರನ್ನು ಮಣ್ಣು ಕಚ್ಚುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಆಮ್ ಆದ್ಮಿ (ಸಾಮಾನ್ಯ ವ್ಯಕ್ತಿ)ಗಳಾದ ಚರಣ್​ಜಿತ್ ಸಿಂಗ್ ಚನ್ನಿ, ನವಜೋತ್ ಸಿಂಗ್ ಸಿಧು, ಅಮರಿಂದರ್ ಸಿಂಗ್, ಬಿಕ್ರಮ್ ಮಜಿಥಿಯಾ ಅವರನ್ನು ಮತದಾರರು ಸೋಲಿಸಿದ್ದಾರೆ. ಇದು ಎಂದಿಗೂ ಜನಸಾಮಾನ್ಯರನ್ನು ಕಡೆಗಣಿಸಬಾರದು ಎಂದುದನ್ನು ತೋರಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಬ್ರಿಟಿಷರ ವ್ಯವಸ್ಥೆಯನ್ನು ಜೀವಂತವಾಗಿಟ್ಟು, ದೇಶದ ಜನರನ್ನು ಬಡವರು ಮತ್ತು ವಂಚಿತರನ್ನಾಗಿ ಮಾಡಿರುವುದು ದುಃಖಕರವಾಗಿದೆ. ಆಪ್ ಈ ವ್ಯವಸ್ಥೆಯನ್ನು ಬದಲಾಯಿಸಿದೆ. ನಾವು ಪ್ರಾಮಾಣಿಕ ರಾಜಕಾರಣ ಆರಂಭಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: Punjab Election Results: ಪಂಜಾಬ್​ನಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು; ನವಜೋತ್ ಸಿಂಗ್ ಸಿಧು ರಾಜೀನಾಮೆ ಸಾಧ್ಯತೆ

Amarinder Singh: ಪಂಜಾಬ್​ ಮಾಜಿ ಸಿಎಂ ಅಮರೀಂದರ್ ಸಿಂಗ್​ಗೆ ಭಾರೀ ಮುಖಭಂಗ; ಆಪ್​ ಸ್ಪರ್ಧಿ ವಿರುದ್ಧ ಕ್ಯಾಪ್ಟನ್​ಗೆ ಸೋಲು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada