Delhi Chalo ಪ್ರತಿಭಟನೆ ಕೈಬಿಟ್ಟು ಮನೆಗೆ ಬಂದು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡ ಪಂಜಾಬ್ನ ಯುವರೈತ
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಲವರು ಚಳಿ, ಅನಾರೋಗ್ಯದಿಂದ ಮೃತಪಟ್ಟಿದ್ದರೆ, ಕೆಲವು ದಿನಗಳ ಹಿಂದೆ ರೈತರ ಕಷ್ಟ ನೋಡಲಾಗದೆ ಗುರುದ್ವಾರದ ಸಂತ ಬಾಬಾ ರಾಮ್ ಸಿಂಗ್ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ದೆಹಲಿ: ಗಡಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವ ರೈತನೋರ್ವ ಅಲ್ಲಿಂದ ವಾಪಸ್ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರ್ಲಬ್ ಸಿಂಗ್ (22) ಪಂಜಾಬ್ನ ಬಟಿಂಡಾ ಜಿಲ್ಲೆಯ ದಯಾಳ್ಪುರಾ ಮಿರ್ಜಾ ಗ್ರಾಮದ ನಿವಾಸಿಯಾಗಿದ್ದು, ಡಿ.18ರಂದು ಪ್ರತಿಭಟನಾ ಸ್ಥಳದಿಂದ ಮನೆಗೆ ಆಗಮಿಸಿದ್ದರು.
ನಿನ್ನೆ ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆಯವರೆಗೂ ಪ್ರತಿಭಟನೆ ನಡೆಸುತ್ತಿದ್ದವರೇಕೆ ಹೀಗೆ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ತನಿಖೆ ಶುರುವಾಗಿದೆ. ಗುರ್ಲಬ್ ಸಿಂಗ್ ಸಣ್ಣ ರೈತನಾಗಿದ್ದು, ಇತ್ತೀಚೆಗಷ್ಟೇ ₹ 6 ಲಕ್ಷ ಸಾಲ ಮಾಡಿಕೊಂಡಿದ್ದರು.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಲವರು ಚಳಿ, ಅನಾರೋಗ್ಯದಿಂದ ಮೃತಪಟ್ಟಿದ್ದರೆ, ಕೆಲವು ದಿನಗಳ ಹಿಂದೆ ರೈತರ ಕಷ್ಟ ನೋಡಲಾಗದೆ ಗುರುದ್ವಾರದ ಸಂತ ಬಾಬಾ ರಾಮ್ ಸಿಂಗ್ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗೆ ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿಖ್ ಧರ್ಮಗುರು ಆತ್ಮಹತ್ಯೆ ಮಾಡಿಕೊಂಡಿದ್ದರು.
Delhi Chalo ಚಳವಳಿಯಲ್ಲಿ ಜೀವತೆತ್ತ 20ಕ್ಕೂ ಹೆಚ್ಚು ರೈತರ ಸಾವಿಗೆ ಏನು ಕಾರಣ?