AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ

ಪಂಜಾಬ್ ಪೊಲೀಸ್ ಇಲಾಖೆಯ ಮಾಜಿ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಅಮರ್ ಸಿಂಗ್ ಚಾಹಲ್ ಅವರು ಪಂಜಾಬ್‌ನ ಪಟಿಯಾಲದಲ್ಲಿರುವ ತಮ್ಮ ಮನೆಯಲ್ಲಿ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಪಟಿಯಾಲದ ಪಾರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರ ತಂಡವು ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳದಿಂದ ಪೊಲೀಸರು 12 ಪುಟಗಳ ಸೂಸೈಡ್ ನೋಟ್ ವಶಪಡಿಸಿಕೊಂಡಿದ್ದಾರೆ.

ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ
Amar Singh Chahal
ಸುಷ್ಮಾ ಚಕ್ರೆ
|

Updated on: Dec 22, 2025 | 6:29 PM

Share

ಪಟಿಯಾಲ, ಡಿಸೆಂಬರ್ 22: ಪಂಜಾಬ್‌ನ ಮಾಜಿ ಐಪಿಎಸ್  (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಮೂಲಗಳ ಪ್ರಕಾರ ತೀವ್ರವಾದ ಆರ್ಥಿಕ ನಷ್ಟ ಮತ್ತು ಮಾನಸಿಕ ಒತ್ತಡದಿಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸ್ಥಳದಿಂದ ವಶಪಡಿಸಿಕೊಂಡ ಸೂಸೈಡ್ ನೋಟ್ ಪ್ರಕಾರ ಆನ್‌ಲೈನ್ ವಂಚನೆಯಿಂದ ಉಂಟಾದ ತೀವ್ರ ಆರ್ಥಿಕ ನಷ್ಟ ಮತ್ತು ಮಾನಸಿಕ ಯಾತನೆಯನ್ನು ಸೂಚಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗಳ ಅನುಕ್ರಮವನ್ನು ಖಚಿತಪಡಿಸಿಕೊಳ್ಳಲು ಮತ್ತು ಟಿಪ್ಪಣಿಯ ವಿಷಯಗಳನ್ನು ಪರಿಶೀಲಿಸಲು ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Video: ದಾಖಲೆಗಳ ನೋಡದೆ ಆರ್​ಟಿಒ 4,500 ರೂ. ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ

ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು ಮತ್ತು ಚಾಹಲ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೈದ್ಯರು ಅವರನ್ನು ಉಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಅಂದಹಾಗೆ, ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಚಾಹಲ್ 2015ರ ಫರೀದ್‌ಕೋಟ್‌ನ ಬೆಹ್ಬಲ್ ಕಲಾನ್ ಮತ್ತು ಕೊಟ್ಕಾಪುರ ಗುಂಡಿನ ದಾಳಿ ಪ್ರಕರಣಗಳಲ್ಲಿ ಆರೋಪಿಗಳಲ್ಲಿ ಒಬ್ಬರು. 2023ರಲ್ಲಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಲ್.ಕೆ. ಯಾದವ್ ನೇತೃತ್ವದ ಪಂಜಾಬ್ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಚಾಹಲ್ ಸೇರಿದಂತೆ ಹಲವಾರು ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಸುಖ್‌ಬೀರ್ ಸಿಂಗ್ ಬಾದಲ್ ಅವರ ವಿರುದ್ಧ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು. ಅಮರ್ ಸಿಂಗ್ ಚಾಹಲ್ ಅವರ ಕುಟುಂಬ ಸದಸ್ಯರು ಅವರು ಆನ್‌ಲೈನ್ ವಂಚನೆಗೆ ಬಲಿಯಾಗಿದ್ದು, 8 ಕೋಟಿ ರೂ. ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು 12 ಪುಟಗಳ ಸೂಸೈಡ್ ನೋಟ್​​​ನಲ್ಲಿ ಕೂಡ ಇದನ್ನು ವಿವರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ