ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ; ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡ ಪಂಜಾಬ್ ಸಿಎಂ

ಸರ್ಕಾರಿ ನೌಕರರನ್ನು ತಲುಪಲು ವಿಶೇಷ ಪ್ರಯತ್ನಗಳನ್ನು ಮಾಡಲಾಯಿತು. ಅಷ್ಟಾದರೂ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿಸಿಕೊಂಡ ಸರ್ಕಾರಿ ನೌಕರರಿಗೆ ಈಗ ಮೊದಲ ಡೋಸ್ ಕೊರೊನಾ ಲಸಿಕೆ ಸಿಗುವವರೆಗೂ ಕಡ್ಡಾಯ ರಜೆ ಮೇಲೆ ಹೋಗುವಂತೆ ಕೇಳಲಾಗುತ್ತದೆ ಎಂದು ಪಂಜಾಬ್​ ರಾಜ್ಯದ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ; ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡ ಪಂಜಾಬ್ ಸಿಎಂ
ಕೊರೊನಾ ವ್ಯಾಕ್ಸಿನ್
Follow us
TV9 Web
| Updated By: Skanda

Updated on: Sep 10, 2021 | 5:52 PM

ಚಂಡೀಗಡ: ಪಂಜಾಬ್​ನಲ್ಲಿ ಕೊರೊನಾ ಲಸಿಕೆ ವಿತರಣೆಯನ್ನು ತ್ವರಿತಗೊಳಿಸುವ ಸಲುವಾಗಿ ಹೊಸ ಆದೇಶವನ್ನು ಹೊರಡಿಸಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್, ಲಸಿಕೆ ತೆಗೆದುಕೊಳ್ಳದ ರಾಜ್ಯ ಸರ್ಕಾರದ ಉದ್ಯೋಗಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಇಂದು (ಶುಕ್ರವಾರ) ಮಾಹಿರಿ ನೀಡಿರುವ ಅವರು, ಕೊರೊನಾ ವೈರಾಣುವನ್ನು ಮಣಿಸಲು ಲಸಿಕೆ ಅಗತ್ಯವಾಗಿದ್ದು ಲಸಿಕೆಯ ಮೊದಲ ಡೋಸ್​ ತೆಗೆದುಕೊಳ್ಳಲು ವಿಫಲರಾದ ಸರ್ಕಾರಿ ನೌಕರರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದಿದ್ದಾರೆ.

ಹಬ್ಬದ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕೊವಿಡ್ ನಿರ್ಬಂಧಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಆದೇಶಿಸಿದ್ದು, ಲಸಿಕೆ ಎಷ್ಟು ಪರಿಣಾಮಕಾರಿ ಎಂದು ಎತ್ತಿ ತೋರಿಸುವ ಸಲುವಾಗಿ ಉನ್ನತ ಮಟ್ಟದ ಕೊವಿಡ್ ಪರಿಶೀಲನಾ ಸಭೆಯಲ್ಲಿ ಲಸಿಕೆ ವಿತರಣೆ ಹಾಗೂ ಸೋಂಕಿನ ಪ್ರಮಾಣದ ಅಂಕಿ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಸರ್ಕಾರಿ ನೌಕರರನ್ನು ತಲುಪಲು ವಿಶೇಷ ಪ್ರಯತ್ನಗಳನ್ನು ಮಾಡಲಾಯಿತು. ಅಷ್ಟಾದರೂ ಲಸಿಕೆ ಹಾಕಿಸಿಕೊಳ್ಳುವುದರಿಂದ ತಪ್ಪಿಸಿಕೊಂಡ ಸರ್ಕಾರಿ ನೌಕರರಿಗೆ ಈಗ ಮೊದಲ ಡೋಸ್ ಕೊರೊನಾ ಲಸಿಕೆ ಸಿಗುವವರೆಗೂ ಕಡ್ಡಾಯ ರಜೆ ಮೇಲೆ ಹೋಗುವಂತೆ ಕೇಳಲಾಗುತ್ತದೆ ಎಂದು ಪಂಜಾಬ್​ ರಾಜ್ಯದ ಮುಖ್ಯಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ಬೋಧಕ ಮತ್ತು ಬೋಧಕೇತರ ಶಾಲಾ ಸಿಬ್ಬಂದಿ ಪ್ರತಿ ವಾರ ಕೊರೊನಾ ನೆಗೆಟಿವ್ ಆರ್‌ಟಿಪಿಸಿಆರ್ ವರದಿಗಳನ್ನು ಸಲ್ಲಿಸಿದ ನಂತರ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಅನುಮತಿಸಲಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಆದೇಶ ಮಾಡಲಾಗಿತ್ತು. ಇದೀಗ ನೂತನ ನಿರ್ಧಾರದ ಪ್ರಕಾರ, ಬೇರೆ ಬೇರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಶಾಲಾ ಸಿಬ್ಬಂದಿ ಸಂಪೂರ್ಣ ಎರಡು ಡೋಸ್ ಲಸಿಕೆ ಪಡೆದ ನಂತರ ಮಾತ್ರ ಶಾಲೆಗೆ ಬರಬಹುದು ಎಂದು ತಿಳಿಸಲಾಗಿದೆ.

ಪಂಜಾಬ್‌ನಲ್ಲಿ ಕೊರೊನಾ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ. ಕೆಲವು ರಾಜ್ಯಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚೆಚ್ಚು ವರದಿಯಾಗುತ್ತಿದೆ. ಶಾಲೆಗಳನ್ನು ಪುನಃ ತೆರೆಯುವುದು ಕಳವಳವನ್ನುಂಟು ಮಾಡಿದೆಯಾದರೂ ಕಟ್ಟುನಿಟ್ಟಾದ ಕ್ರಮಗಳೊಂದಿಗೆ ಪರಿಸ್ಥಿತಿಯನ್ನು ಹತೋಟಿಯಲ್ಲಿಡುತ್ತಿರುವುದು ಆಶಾದಾಯಕವಾಗಿದೆ ಎಂದು ಅವರು ಸಮಾಧಾನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

(Punjab Government employees who do not take corona vaccine are imposed with compulsory leave)

ಇದನ್ನೂ ಓದಿ: ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ 

Delta Sub-lineages in Bangalore: ರಾಜ್ಯದ ಜನರೇ ಎಚ್ಚರ ಎಚ್ಚರ, ಪತ್ತೆಯಾಗಿದೆ ಕೊರೊನಾ ಉಪ ರೂಪಾಂತರಿ!

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ