AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು.

ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ
ಚರಣ್​​ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on: Jan 06, 2022 | 1:20 PM

Share

ಪ್ರಧಾನಿ ಮೋದಿಯವರ ಭದ್ರತಾ ಲೋಪಕ್ಕೆ(PM security breach) ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ನಿನ್ನೆ ಫಿರೋಜ್​ಪುರಕ್ಕೆ ಭೇಟಿ ನೀಡಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭದ್ರತೆ ಲೋಪ ಕಾರಣದಿಂದ ದೆಹಲಿಗೆ ವಾಪಸ್ ಆಗಿದ್ದರು. ನಿನ್ನೆ ಪ್ರಧಾನಿ ಮೋದಿ ಭದ್ರತೆ ಲೋಪವಾಗುತ್ತಿದ್ದಂತೆ ದೇಶದೆಲ್ಲೆಡೆಯಿಂದ ಪಂಜಾಬ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಪಂಜಾಬ್ ಮುಖ್ಯಮಂತ್ರಿ ಛನ್ನಿಯವರು, ಇದರಲ್ಲಿ ನಮ್ಮದೇನೂ ತಪ್ಪಿಲ್ಲ. ಪ್ರಧಾನಿ ಮೋದಿ ಕೊನೇ ಕ್ಷಣದಲ್ಲಿ ಮಾರ್ಗಬದಲಾವಣೆ ಮಾಡುವ ಬಗ್ಗೆ ನಮಗೆ ಗೊತ್ತಿರಲಿಲ್ಲ ಎಂದಿದ್ದಾರೆ. ಈ ಮಧ್ಯೆ ಕೇಂದ್ರ ಗೃಹ ಇಲಾಖೆ ಪಂಜಾಬ್​ ಸರ್ಕಾರದಿಂದ ವರದಿ ಕೇಳಿದೆ. ಹೀಗಾಗಿ ಕೂಲಂಕಷವಾಗಿ ತನಿಖೆ ನಡೆಸಲು ಪಂಜಾಬ್ ಸರ್ಕಾ, ನಿವೃತ್ತ ನ್ಯಾಯಾಧೀಶ  ಮೆಹ್ತಾಬ್​ ಸಿಂಗ್​ ಗಿಲ್​ ಮತ್ತು ಗೃಹ ಇಲಾಖೆ ಪ್ರಧಾನಕಾರ್ಯದರ್ಶಿ  ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿ ಮೂರು ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. 

ನಿನ್ನೆ ಹುಸ್ಸೇನಿವಾಲಾ ಫ್ಲೈಓವರ್​ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಸಿಲುಕಿದ್ದವು. ಕಾರಣ ಅದೇ ಮಾರ್ಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದರು. ಸುಮಾರು 20 ನಿಮಿಷ ಕಾದ ಬಳಿಕ ಪ್ರಧಾನಿ ಮೋದಿ ವಾಪಸ್ ಆಗಿದ್ದರು. ಅವರು ನಿಜಕ್ಕೂ ಕೋಪಗೊಂಡಿದ್ದರು. ದೆಹಲಿಗೆ ಹೊರಡುವುದಕ್ಕೂ ಮೊದಲು, ಭಟಿಂಡಾ ಏರ್​ಪೋರ್ಟ್​​ನಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳೊಟ್ಟಿಗೆ ಮಾತನಾಡಿ, ನಾನು ಭಟಿಂಡಾವರೆಗೆ ಜೀವಂತವಾಗಿಯಾದರೂ ಬಂದೆನಲ್ಲ, ನಿಮ್ಮ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾಗಿ ತಿಳಿಸಿ ಎಂದಿದ್ದರು.

ಆದರೆ ಪಂಜಾಬ್​ ಸಿಎಂ ಮಾತ್ರ ತಮ್ಮಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಳ್ಳುತ್ತಿಲ್ಲ. ನಾವು ಪ್ರಧಾನಿಯವರು ಭೇಟಿ ಕೊಡಲಿರುವ ಮುನ್ನಾದಿನ ರೈತರ ಬಳಿ ಮಾತನಾಡಿದೆವು. ಅವರೂ ಸಹ ಪ್ರತಿಭಟನೆ ಹಿಂಪಡೆಯಲು ಒಪ್ಪಿಕೊಂಡರು. ಆದರೆ ಮರುದಿನ ಫಿರೋಜ್​ಪುರ ಬಳಿ ಮತ್ತೆ ಪ್ರತಿಭಟನೆ ಶುರು ಮಾಡಿದರು. ಪ್ರಧಾನಿಯವರೂ ಕೂಡ ಭಟಿಂಡಾದಿಂದ ಹೆಲಿಕಾಪ್ಟರ್​ ಮೂಲಕ ಬರುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಗಿತ್ತು. ಅವರ ಮಾರ್ಗ ಬದಲಾವಣೆಯಾಗಿದ್ದು ನಮಗೆ ಗೊತ್ತಾಗಲಿಲ್ಲ ಎಂದೇ ಹೇಳುತ್ತಿದ್ದಾರೆ.

ಇದನ್ನೂ ಓದಿ: ಏರ್ ಇಂಡಿಯಾ ಹೂಡಿಕೆ ಹಿಂಪಡೆಯುವಿಕೆ ವಿರುದ್ಧ ಸುಬ್ರಮಣ್ಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್​

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ