ದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್ ಸರ್ಕಾರ ಇದೀಗ ಸುಪ್ರೀಂ ಕೋರ್ಟ್ ಮೊರೆಹೋಗಲು ನಿರ್ಧರಿಸಿದೆ.
ಜೊತೆಗೆ, ಕೇಂದ್ರದ ಕೃಷಿ ಕಾಯ್ದೆಯನ್ನು ಜಾರಿ ಮಾಡದಿರಲು ಪಂಜಾಬ್ ಸಿಎಂ ನಿರ್ಧಾರ ತೆಗೆದುಕೊಂಡಿದ್ದಾರೆ. ಕೃಷಿ ರಾಜ್ಯಪಟ್ಟಿಯಲ್ಲಿ ಇರುವ ವಿಷಯ. ಹೀಗಾಗಿ, ಕೃಷಿ ಕ್ಷೇತ್ರದ ಬಗ್ಗೆ ಕೇಂದ್ರವು ಕಾಯ್ದೆ ರೂಪಿಸಲು ಸಾಧ್ಯವಿಲ್ಲ. ಹೀಗಾಗಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಇಂದು ಹುತಾತ್ಮ ಭಗತ್ ಸಿಂಗ್ರ ಹುಟ್ಟೂರಿನಲ್ಲಿ ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಿಎಂ ಅಮರೀಂದರ್ ಸಿಂಗ್ ಧರಣಿ ನಡೆಸುತ್ತಿದ್ದಾರೆ. ಪಂಜಾಬ್ನಲ್ಲಿ ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ.