Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನದ ಮೆನುವಿನಲ್ಲಿ ಟೊಮೆಟೊ ಬಳಕೆ ಬೇಡ ಎಂದ ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್

ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವನ್ನು ಎದುರಿಸುತ್ತಿರುವ ಪಂಜಾಬ್‌ನ ನಾಗರಿಕರಿಗೆ ಒಗ್ಗಟ್ಟಿನ ಸೂಚಕವಾಗಿ ಟೊಮೆಟೊ ಸೇವನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ನಿರ್ಧಾರವನ್ನು ರಾಜ್ಯಪಾಲರು ತೆಗೆದುಕೊಂಡಿದ್ದಾರೆ ಎಂದು ರಾಜಭವನದ ಹೇಳಿಕೆ ತಿಳಿಸಿದೆ.

ರಾಜಭವನದ ಮೆನುವಿನಲ್ಲಿ ಟೊಮೆಟೊ ಬಳಕೆ ಬೇಡ ಎಂದ ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್
ಬನ್ವಾರಿಲಾಲ್ ಪುರೋಹಿತ್
Follow us
ರಶ್ಮಿ ಕಲ್ಲಕಟ್ಟ
|

Updated on: Aug 04, 2023 | 7:21 PM

ಅಮೃತಸರ್ ಆಗಸ್ಟ್ 04: ಈ ಪ್ರದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ಕಾರಣ, ಪಂಜಾಬ್ ಗವರ್ನರ್ (Punjab governor) ಮತ್ತು ಯುಟಿ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ (Banwarilal Purohit) ಅವರು ರಾಜಭವನದಲ್ಲಿ ಮೆನುವಿನಲ್ಲಿ ಟೊಮೆಟೊ (tomatoes) ಬಳಕೆ ಬೇಡ ಎಂದು ಹೇಳಿದ್ದಾರೆ. ಚಂಡೀಗಢದ ಚಿಲ್ಲರೆ ಮಾರುಕಟ್ಟೆಗಳಲ್ಲಿ, ಟೊಮೆಟೊ ಕೆಜಿಗೆ ₹ 250 ವರೆಗೆ ಮಾರಾಟವಾಗುತ್ತಿದೆ. ಅಪ್ನಿ ಮಂಡಿಗಳಲ್ಲಿ, ಬೆಲೆಗಳು ಪ್ರತಿ ಕೆಜಿಗೆ ₹ 180 ರಿಂದ ₹ 200 ರ ನಡುವೆ ಇರುತ್ತದೆ.

ಟೊಮೆಟೊ ಬಳಕೆಯನ್ನು ಕಡಿಮೆ ಮಾಡುವುದರಿಂದ ಅವುಗಳ ಏರುತ್ತಿರುವ ಬೆಲೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ರಾಜ್ಯಪಾಲರು ಹೇಳಿದ್ದು ಸದ್ಯಕ್ಕೆ ಪರ್ಯಾಯಗಳನ್ನು ಬಳಸಲು ಜನರಿಗೆ ಮನವಿ ಮಾಡಿದರು.

ಆಹಾರ ಪದಾರ್ಥಗಳ ಬೆಲೆ ಏರಿಕೆಯ ಪರಿಣಾಮವನ್ನು ಎದುರಿಸುತ್ತಿರುವ ಪಂಜಾಬ್‌ನ ನಾಗರಿಕರಿಗೆ ಒಗ್ಗಟ್ಟಿನ ಸೂಚಕವಾಗಿ ಟೊಮೆಟೊ ಸೇವನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ನಿರ್ಧಾರವನ್ನು ರಾಜ್ಯಪಾಲರು ತೆಗೆದುಕೊಂಡಿದ್ದಾರೆ ಎಂದು ರಾಜಭವನದ ಹೇಳಿಕೆ ತಿಳಿಸಿದೆ. ಒಂದು ವಸ್ತುವಿನ ಬಳಕೆಯನ್ನು ನಿಲ್ಲಿಸುವುದು ಅಥವಾ ಕಡಿಮೆ ಮಾಡುವುದು ಅದರ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಬೇಡಿಕೆಯನ್ನು ಕಡಿಮೆ ಮಾಡುವುದರಿಂದ ಅದರ ಬೆಲೆ ತನ್ನಿಂದತಾನೇ ಬೆಲೆ ಕಡಿಮೆಯಾಗುತ್ತದೆ. ಜನರು ಸದ್ಯಕ್ಕೆ ತಮ್ಮ ಮನೆಯಲ್ಲಿ ಪರ್ಯಾಯಗಳನ್ನು ಬಳಸುತ್ತಾರೆ. ಇದು ಟೊಮೆಟೊ ಬೆಲೆಗಳ ಏರಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಪುರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ:  508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಆಗಸ್ಟ್ 6ರಂದು ಮೋದಿಯವರಿಂದ ಶಂಕುಸ್ಥಾಪನೆ

ಕಳೆದ ಕೆಲವು ವಾರಗಳಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಟೊಮೆಟೊ ಬೆಲೆ ಧುತ್ತನೆ ಏರಿಕೆ ಕಂಡಿದೆ.

ನಿಮ್ಮ ಮನೆಯಲ್ಲಿ ಟೊಮೆಟೊ ಸೇವನೆಯನ್ನು ತ್ಯಜಿಸುವ ಮೂಲಕ, ರಾಜ್ಯಪಾಲರು ಈ ಸವಾಲಿನ ಸಮಯದಲ್ಲಿ ಸಹಾನುಭೂತಿ, ಮಿತವ್ಯಯ ಮತ್ತು ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆಯ ಮಹತ್ವವನ್ನು ಒತ್ತಿಹೇಳುವ ಗುರಿಯನ್ನು ಹೊಂದಿದ್ದಾರೆ” ಎಂದು ಹೇಳಿಕೆ ತಿಳಿಸಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಉತ್ಪಾದನೆಯನ್ನು ಮಾತ್ರವಲ್ಲದೆ ಕಳೆದ ಕೆಲವು ವಾರಗಳಲ್ಲಿ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ. ಜುಲೈ 11 ರಂದು ಅಪ್ನಿ ಮಂಡಿಗಳಲ್ಲಿ ಪ್ರತಿ ಕೆಜಿಗೆ ₹ 250 ಮತ್ತು ಚಿಲ್ಲರೆ ಅಂಗಡಿಗಳಲ್ಲಿ ₹ 300 ರಂತೆ ಟೊಮೆಟೊ ದರವು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ