AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸರ್ಕಾರದಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ

ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಬಗ್ಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಾರ್ಚ್ 5ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಮಹಿಳಾ ಸಬಲೀಕರಣ ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದರು.

ಪಂಜಾಬ್ ಸರ್ಕಾರದಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ
ಮಹಿಳೆಯರಿಗೆ ಉಚಿತ ಬಸ್ ಸೇವೆ
TV9 Web
| Edited By: |

Updated on:Apr 05, 2022 | 12:59 PM

Share

ಚಂಡೀಗಡ: ಪಂಜಾಬ್​ನಲ್ಲಿ ಮಹಿಳಾ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದನ್ನು ರಾಜ್ಯ ಸರ್ಕಾರ ನೀಡಿದೆ. ರಾಜ್ಯದೊಳಗೆ ಸಂಚರಿಸುವ ಎಲ್ಲಾ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸೇವೆ ನೀಡುವುದಾಗಿ ಪಂಜಾಬ್ ಸರ್ಕಾರ ಇಂದು (ಮಾರ್ಚ್ 31) ಘೋಷಣೆ ಮಾಡಿದೆ. ಅದರಂತೆ ನಾಳೆಯಿಂದ (ಏಪ್ರಿಲ್ 1) ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯದೊಳಗೆ ಉಚಿತ ಬಸ್ ಸೌಲಭ್ಯ ಸಿಗಲಿದೆ. ಈ ಯೋಜನೆಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ತಿಂಗಳ ಆರಂಭದಲ್ಲಿ ಘೋಷಿಸಿದ್ದರು.

ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಬಗ್ಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಾರ್ಚ್ 5ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು. ಮಹಿಳಾ ಸಬಲೀಕರಣ ವಿಚಾರದಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದರು.

ಈ ಯೋಜನೆಯಿಂದ ರಾಜ್ಯದ ಸುಮಾರು 1.31 ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ. 2011ರ ಜನಗಣತಿಯಂತೆ ಪಂಜಾಬ್​ನಲ್ಲಿ 2.77 ಕೋಟಿ ಜನಸಂಖ್ಯೆ ಇದೆ. ಅದರಲ್ಲಿ 1,46,39,465 ಪುರುಷರು ಹಾಗೂ 1,31,03,873 ಮಹಿಳೆಯರಿದ್ದಾರೆ. ಈ ಮೊದಲು ದೆಹಲಿ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದನ್ನು ಇಲ್ಲಿ ನೆನೆಯಬಹುದು.

ಇದನ್ನೂ ಓದಿ: ಅಕ್ಕಪಕ್ಕದವರ ನೀರಿನ ಬವಣೆ ತೀರಿಸಲು ಈ ಮಹಿಳೆ ಮಾಡಿದ್ದು ಸಾಹಸಗಾಥೆ! ಎರಡು ಬಾವಿ ತೋಡಿ ಸಾಹಸ ಮೆರೆದ 56 ವರ್ಷದ ಮಹಿಳೆ

Published On - 11:00 pm, Wed, 31 March 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?