ರೈತರ ಪ್ರತಿಭಟನೆ ಹಿನ್ನೆಲೆ; ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಸರ್ಕಾರ ನಿರ್ಧಾರ

ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಭತ್ತ ಮತ್ತು ಸಿರಿಧಾನ್ಯ ಖರೀದಿಯನ್ನು ಈ ವರ್ಷ ಕೇಂದ್ರ ಸರ್ಕಾರ ಅ. 11ಕ್ಕೆ ಮುಂದೂಡಿತ್ತು. ಆದರೆ, ರೈತರ ಒತ್ತಾಯದ ಮೇರೆಗೆ ನಾಳೆಯಿಂದಲೇ ಭತ್ತ ಖರೀದಿ ಮಾಡಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.

ರೈತರ ಪ್ರತಿಭಟನೆ ಹಿನ್ನೆಲೆ; ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಸರ್ಕಾರ ನಿರ್ಧಾರ
ರೈತರ ಪ್ರತಿಭಟನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 02, 2021 | 8:42 PM

ನವದೆಹಲಿ: ಭತ್ತ ಖರೀದಿಸಲು ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ಧ ಪಂಜಾಬ್, ಹರಿಯಾಣದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಾಳೆಯಿಂದ ಭತ್ತ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಹರಿಯಾಣ ಹಾಗೂ ಪಂಜಾಬ್ ರಾಜ್ಯದಲ್ಲಿ ಭಾನುವಾರದಿಂದ ಭಾರತೀಯ ಆಹಾರ ನಿಗಮದಿಂದ ಭತ್ತ ಖರೀದಿ ಮಾಡಲಾಗುವುದು. ರೈತರಿಂದ ನೇರವಾಗಿ ಭತ್ತವನ್ನು ಎಫ್​​ಸಿಐ ಖರೀದಿಸಲಿದೆ.

ಭತ್ತ ಖರೀದಿ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಭತ್ತ ಖರೀದಿಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿಯನ್ನು ವಾಪಾಸ್ ಪಡೆಯಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ ವಾಪಸ್​ ಪಡೆಯಲಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ರಾಜ್ಯ ಸಚಿವರಾದ ಅಶ್ವಿನಿ ಚೌಬೆ ತಿಳಿಸಿದ್ದಾರೆ.

ಭತ್ತ ಖರೀದಿ ಮಾಡಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಮುಂಗಾರು ವಿಳಂಬವಾದ ಹಿನ್ನೆಲೆಯಲ್ಲಿ ಭತ್ತ ಮತ್ತು ಸಿರಿಧಾನ್ಯ ಖರೀದಿಯನ್ನು ಈ ವರ್ಷ ಕೇಂದ್ರ ಸರ್ಕಾರ ಅ. 11ಕ್ಕೆ ಮುಂದೂಡಿತ್ತು. ಆದರೆ, ರೈತರ ಒತ್ತಾಯದ ಮೇರೆಗೆ ನಾಳೆಯಿಂದಲೇ ಭತ್ತ ಖರೀದಿ ಮಾಡಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.

ಭತ್ತ ಖರೀದಿ ಮುಂದೂಡುತ್ತಿರುವುದನ್ನು ವಿರೋಧಿಸಿ ಪಂಜಾಬ್ ಮತ್ತು ಹರಿಯಾಣದ ರೈತರು ಅನೇಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಭತ್ತ ಖರೀದಿಯಲ್ಲಿನ ವಿಳಂಬ ಖಂಡಿಸಿ ಎರಡೂ ರಾಜ್ಯಗಳ ಶಾಸಕರ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಕರೆ ನೀಡಿತ್ತು. ಸಾಮಾನ್ಯವಾಗಿ ಅಕ್ಟೋಬರ್ 1ರಿಂದ ಭತ್ತ ಖರೀದಿ ಆರಂಭವಾಗುತ್ತದೆ. ಆದರೆ ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣದಲ್ಲಿ ಖಾರಿಫ್ ಭತ್ತ ಖರೀದಿಯನ್ನು ಅಕ್ಟೋಬರ್ 11 ರವರೆಗೆ ಮುಂದೂಡಿರುವುದಾಗಿ ಘೋಷಿಸಿತ್ತು. ಇದನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಇದೀಗ ಆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.

ಇದನ್ನೂ ಓದಿ: Gorakhpur Death: ಗೋರಖ್​ಪುರದಲ್ಲಿ ಉದ್ಯಮಿಯ ಸಾವು ಪ್ರಕರಣ; ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು

Narendra Modi Interview: ನನಗೆ ಟೀಕಿಸುವವರೆಂದರೆ ಇಷ್ಟ, ನನ್ನ ದೃಷ್ಟಿಯಲ್ಲಿ ಅಧಿಕಾರವೆಂಬುದು ಜನಸೇವೆಯ ಒಂದು ಮಾರ್ಗ ಮಾತ್ರ; ಪ್ರಧಾನಿ ನರೇಂದ್ರ ಮೋದಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ