Punjab: ಅಮೃತಸರದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಯೋಧರು, 4 ದಿನಗಳಲ್ಲಿ 5ನೇ ಘಟನೆ
ಅಮೃತಸರದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಅಮೃತಸರದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. 4 ದಿನದಲ್ಲಿ ನಡೆದ ಐದನೇ ಘಟನೆ ಇದಾಗಿದೆ. ಅಧಿಕಾರಿಗಳ ಪ್ರಕಾರ, ಹೆರಾಯಿನ್ ಎಂದು ಶಂಕಿಸಲಾದ ಎರಡು ಪ್ಯಾಕೆಟ್‌ಗಳನ್ನು ತಪಾಸಣೆಯ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ. ಪಂಜಾಬ್‌ನ ಅಮೃತಸರದ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿದ್ದು ಮತ್ತೊಮ್ಮೆ ಆ ಭಾಗದಲ್ಲಿ ಆತಂಕ ಸೃಷ್ಟಿಯಾಗಿದೆ.
ಬಿಒಪಿ ರಾಜತಾಲ್ ಪ್ರದೇಶದಲ್ಲಿ ಬಿಎಸ್‌ಎಫ್‌ನ 144 ಕಾರ್ಪ್ಸ್‌ನ ಪಡೆಗಳು ಕಾರ್ಯಾಚರಣೆ ನಡೆಸಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿ ಬರುತ್ತಿತ್ತು, ಇದರಲ್ಲಿ ಬಿಳಿಯ ಪ್ಯಾಕೆಟ್ಗಳು ಇರುವುದನ್ನು ಗಮನಿಸಿ ದಾಳಿ ಮಾಡಲಾಗಿದೆ. ಕಳ್ಳಸಾಗಣೆ ತಡೆಯಲು ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಈ ಮೂಲಕ ಸೇನೆ ಪಾಕಿಸ್ತಾನದ ಮತ್ತೊಂದು ಕೃತ್ಯವನ್ನು ವಿಫಲಗೊಳಿಸಿದೆ. ಇದಕ್ಕೂ ಮೊದಲು ಭಾನುವಾರವೂ ಇದೇ ಭಾಗದಿಂದ ಬಂದ ಡ್ರೋನ್ ಅನ್ನು ಹೊಡೆದುರುಳಿಸಲಾಗಿತ್ತು.
ಮತ್ತಷ್ಟು ಓದಿ: Amritsar: ಅಮೃತಸರದ ಗಡಿ ಬಳಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಯೋಧರು
ಇದಕ್ಕೂ ಮೊದಲು, ಪಂಜಾಬ್‌ನ ಅಮೃತಸರದಿಂದ ಶಂಕಿತ ಮಾದಕವಸ್ತುಗಳನ್ನು ಒಳಗೊಂಡಿರುವ ಬ್ಯಾಗ್‌ನೊಂದಿಗೆ ಮತ್ತೊಂದು ಪಾಕಿಸ್ತಾನಿ ಡ್ರೋನ್ ಅನ್ನು ಬಿಎಸ್‌ಎಫ್ ಹೊಡೆದುರುಳಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪ್ರಕಾರ, ಕಳೆದ 4 ದಿನಗಳಲ್ಲಿ ಅವರು ಹೊಡೆದುರುಳಿಸಿದ 5 ಡ್ರೋನ್ ಇದಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ