Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

Punjab CM | ಪಂಜಾಬ್​ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಂ ಆಯ್ಕೆ ಕುರಿತು ನಿರ್ಧಾರವಾಗಲಿದೆ.

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ
ನವಜೋತ್ ಸಿಂಗ್ ಸಿಧು, ಸುನಿಲ್ ಜಖಾರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 19, 2021 | 10:04 AM

ಪಂಜಾಬ್: ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್​ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಇಂದು ನಿರ್ಧಾರವಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸಭೆ ನಡೆಯಲಿದೆ. ಪಂಜಾಬ್​ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಂ ಆಯ್ಕೆ ಕುರಿತು ನಿರ್ಧಾರವಾಗಲಿದೆ.

ನಿನ್ನೆ ಸಂಜೆ ನಡೆದ ಸಿಎಲ್​ಪಿ ಸಭೆಯಲ್ಲಿ ಪಂಜಾಬ್ ಕಾಂಗ್ರೆಸ್ ಶಾಸಕರು ನೂತನ ಮುಖ್ಯಮಂತ್ರಿ ಆಯ್ಕೆಯ ಸಂಪೂರ್ಣ ಅಧಿಕಾರವನ್ನು ಸೋನಿಯಾ ಗಾಂಧಿ ಅವರೇ ವಹಿಸಿಕೊಳ್ಳಬೇಕು. ಅವರ ಆಯ್ಕೆಯೇ ಅಂತಿಮ ಎಂದು ನಿರ್ಣಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಮುಖ್ಯ ಸಭೆ ನಡೆಯಲಿದೆ. ನಿನ್ನೆ ಸಂಜೆಯ ಸಿಎಲ್​ಪಿ ಸಭೆಯ ಬಳಿಕ ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಪಂಜಾಬ್ ಮುಖ್ಯಮಂತ್ರಿ ರೇಸ್​ನಲ್ಲಿರುವವರ ಪೈಕಿ ಪಂಜಾಬ್​ನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಜಖಾರ್ ಹೆಸರು ಮೊದಲಿದೆ. ಜಖಾರ್ ಪಂಜಾಬ್ ಮುಖ್ಯಮಂತ್ರಿಯಾದರೆ ಪಂಜಾಬ್​ನಲ್ಲಿ ಹಿಂದು ಮುಖ್ಯಮಂತ್ರಿ ಮತ್ತು ಜಾಟ್ ಸಿಖ್ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದಂತಾಗುತ್ತದೆ. ಇದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರ ಪಕ್ಷದ ನಾಯಕರದ್ದು.

ಸುನಿಲ್ ಜಖಾರ್ ಅವರನ್ನು ಬಿಟ್ಟರೆ ಪಂಜಾಬ್ ಅಧ್ಯಕ್ಷರಾಗಿರುವ ನವಜೋತ್ ಸಿಂಗ್ ಸಿಧು, ಪ್ರತಾಪ್ ಬಾಜ್ವಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ, ಪಂಜಾಬ್ ಸಚಿವರಾಗಿದ್ದ ಸುಖ್ಜಿಂದರ್ ರಾಂಧವ, ಸುಖ್ಬಿಂದರ್ ಸಿಂಗ್ ಸರ್ಕಾರಿ ಬ್ರಹ್ಮ ಮೊಹಿಂದ್ರ, ವಿಜಯ್ ಇಂದರ್ ಸಿಂಗ್ಲಾ, ಕುಲ್ಜಿತ್ ಸಿಂಗ್ ನಾಗ್ರಾ ಹಾಗೂ ತೃಪ್ತ್ ರಾಜೀಂದರ್ ಬಾಜ್ವಾ ಅವರ ಹೆಸರು ಕೂಡ ಮುಖ್ಯಮಂತ್ರಿ ಪಟ್ಟಿಯಲ್ಲಿದೆ.

ಪಂಜಾಬ್​ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಪಕ್ಷ ಕೂಡ ಕರ್ನಾಟಕ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿತ್ತು. ಈಗಾಗಲೇ ಪಂಜಾಬ್​ನಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಅಕಾಲಿ ದಳದ ಸುಖಬೀರ್​ ಸಿಂಗ್​ ಬಾದಲ್​ ತಂಡ ಬಹಳ ಪ್ರಯತ್ನ ಪಡುತ್ತಿದೆ. ಆಮ್​ ಆದ್ಮಿ ಪಕ್ಷ ಈಗಲೇ ತನ್ನ ಪ್ರಚಾರ ಕಾರ್ಯ ಶುರು ಮಾಡಿದೆ. ಈ ಬಾರಿ ಹೇಗಾದರೂ ಮಾಡಿ ಪಂಜಾಬಿನಲ್ಲಿ ಅಧಿಕಾರಕ್ಕೆ ಬರಲೇಬೇಕೆಂಬುದು ಆ ಪಕ್ಷದ ನಾಯಕರ ತಂತ್ರ. ಬಿಜೆಪಿ ಈಗ ಕ್ಯಾಪ್ಟನ್ ಅಮರೀಂದರ್​ ಸಿಂಗ್​ ಅವರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುವುದು ಖಚಿತ ಎನ್ನಲಾಗಿದೆ.

ಇದನ್ನೂ ಓದಿ: Punjab CM: ಅಮರೀಂದರ್ ಸಿಂಗ್ ರಾಜೀನಾಮೆ ಹಿನ್ನೆಲೆ; ಪಂಜಾಬ್ ನೂತನ ಸಿಎಂ ರೇಸ್​ನಲ್ಲಿದ್ದಾರೆ ಈ ಕಾಂಗ್ರೆಸ್ ನಾಯಕರು

Punjab Congress Crisis: ಪಂಜಾಬ್ ಹೊಸ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಸೋನಿಯಾ ಗಾಂಧಿ ಹೆಗಲಿಗೆ

(Sonia Gandhi To Pick New Punjab Chief Minister Name To Be Announced at CLP Meet Today)

Published On - 10:03 am, Sun, 19 September 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ