ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ

| Updated By: ರಶ್ಮಿ ಕಲ್ಲಕಟ್ಟ

Updated on: Nov 28, 2021 | 4:56 PM

ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು

ಪಂಜಾಬ್​​ನಲ್ಲಿ ಎಎಪಿ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ತಿಂಗಳಿಗೆ ₹1000; ಚುನಾವಣಾ ಭರವಸೆಯ  ಟೀಕಾಕಾರರಿಗೆ ಕೇಜ್ರಿವಾಲ್ ತರಾಟೆ
ಅರವಿಂದ ಕೇಜ್ರಿವಾಲ್
Follow us on

ದೆಹಲಿ: 2022 ರಲ್ಲಿ ಆಮ್ ಆದ್ಮಿ ಪಕ್ಷ (AAP) ಪಂಜಾಬ್​​ನಲ್ಲಿ (Punjab) ಅಧಿಕಾರಕ್ಕೆ ಬಂದರೆ ಪಂಜಾಬ್‌ನ ಎಲ್ಲಾ ಮಹಿಳೆಯರಿಗೆ ತಿಂಗಳಿಗೆ ₹ 1,000 ವರ್ಗಾವಣೆ ಮಾಡುವ ಎಎಪಿಯ ಚುನಾವಣಾ ಭರವಸೆಯನ್ನು ಪ್ರಶ್ನಿಸಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  (Arvind Kejriwal) ತಮ್ಮ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡರು. ಹೀಗೆ ಮಾಡಿದರೆ ಸರ್ಕಾರದ ಬೊಕ್ಕಸ ಖಾಲಿಯಾಗುತ್ತದೆ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಅಕಾಲಿದಳ ನನ್ನನ್ನು ಟೀಕಿಸುತ್ತಿವೆ ಎಂದು ಕೇಜ್ರಿವಾಲ್ ಪಂಜಾಬಿ ಭಾಷೆಯಲ್ಲಿ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಈ ವಂಶಾಡಳಿತ ಪಕ್ಷಗಳು ವರ್ಷಗಟ್ಟಲೆ ಆಡಳಿತ ನಡೆಸುತ್ತಿದ್ದು ಈಗಾಗಲೇ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿವೆ ಎಂದು ಹೇಳಿದರು.  ಕಳೆದ ವಾರ ಕೇಜ್ರಿವಾಲ್ 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಯ ಖಾತೆಗೆ ಮಾಸಿಕ ₹ 1,000 ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದರು.  ಮಹಿಳೆಯರನ್ನು ಸಬಲೀಕರಣಗೊಳಿಸಲು ಇದು ಸರಿಯಾದ ಮಾರ್ಗವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಪ್ರಶ್ನಿಸಿದ್ದಾರೆ.  ನಾನು ಪಂಜಾಬ್‌ನ ಮಹಿಳೆಯರಿಂದ ಸಾವಿರಾರು ಕರೆಗಳನ್ನು ಸ್ವೀಕರಿಸಿದ್ದು ಅವರು ಪ್ರಕಟಣೆಯಿಂದ ಸಂತೋಷವಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

2012ರಲ್ಲಿ ಸ್ಥಾಪನೆಯಾದ ಎಎಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಪ್ರಮುಖ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು ಆದರೆ ಪಕ್ಷವು ಉತ್ತಮ ಫಲಿತಾಂಶವನ್ನು ನಿರೀಕ್ಷಿಸುತ್ತಿದೆ ಎಂದು ಪಕ್ಷದ ನಾಯಕರು ಹೇಳಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪಂಜಾಬ್‌ನಲ್ಲಿ ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್, 24 ಗಂಟೆಗಳ ವಿದ್ಯುತ್ ಪೂರೈಕೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡುವುದಾಗಿ ಕೇಜ್ರಿವಾಲ್ ಈಗಾಗಲೇ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ನಡೆದ  ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳಿಂದ ವಾಗ್ದಾಳಿ