ನವದೆಹಲಿ: ಕಾಂಗ್ರೆಸ್ ನಾಯಕರ ಸೂಚನೆ ಮೇರೆಗೆ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಹೊಸ ಪಕ್ಷ ಕಟ್ಟಿರುವ ಅಮರೀಂದರ್ ಸಿಂಗ್ ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಪಂಜಾಬ್ ಚುನಾವಣೆಗೂ ಮುನ್ನ ಪಂಜಾಬ್ ಲೋಕ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿರೋಮಣಿ ಅಕಾಲಿದಳ (ಸಂಯುಕ್ತ) ಮೈತ್ರಿ ಮಾಡಿಕೊಂಡಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಮರೀಂದರ್ ಸಿಂಗ್ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಭಾಗಿಯಾಗಿದ್ದರು.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮೂರೂ ಮೈತ್ರಿ ಪಕ್ಷಗಳ ಸ್ಥಾನವನ್ನು ನಿರ್ಧರಿಸಲು ಆರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದ್ದಾರೆ. ಇಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೇಖಾವತ್, ಇಂದು 3 ಪಕ್ಷಗಳಾದ ಬಿಜೆಪಿ, ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಎಸ್‌ಎಡಿ (ಸಂಯುಕ್ತ) ಪಕ್ಷದ ಮುಖ್ಯಸ್ಥರು ದಿಂಡಾ ನೇತೃತ್ವದಲ್ಲಿ ಸಭೆ ನಡೆಸಿದರು.ಮಿತ್ರಪಕ್ಷಗಳ ಜಂಟಿ ಪ್ರಣಾಳಿಕೆ ಕೂಡ ಚುನಾವಣೆಗೆ ಮುನ್ನ ಅನಾವರಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
Delhi | Punjab Lok Congress president and former CM Captain Amarinder Singh meets Union Home Minister Amit Shah at his residence.
BJP chief JP Nadda and Punjab BJP in-charge Gajendra Singh Shekhawat were also present during the meeting. pic.twitter.com/OKPsUyxi01
— ANI (@ANI) December 27, 2021
ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ. ಸೀಟು ಹಂಚಿಕೆಯಂತಹ ವಿಷಯಗಳ ಬಗ್ಗೆ ಚರ್ಚಿಸಲು ಪ್ರತಿ ಪಕ್ಷದಿಂದ 2 ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು. ಜಂಟಿ ಪ್ರಣಾಳಿಕೆ ಇರುತ್ತದೆ ಎಂದು ಶೇಖಾವತ್ ತಿಳಿಸಿದ್ದಾರೆ.
ನವೆಂಬರ್‌ನಲ್ಲಿ, ಅಮರಿಂದರ್ ಸಿಂಗ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಘೋಷಿಸಿದರು.
ಇದನ್ನೂ ಓದಿ: Amarinder Singh: ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಯುವ ಮಾತೇ ಇಲ್ಲ, ಆ ಕಾಲ ಮುಗಿದಿದೆ; ಅಮರೀಂದರ್ ಸಿಂಗ್ ಸ್ಪಷ್ಟನೆ
ಮಜೀಠಿಯಾ ಡ್ರಗ್ ಪ್ರಕರಣ: ಕೇಜ್ರಿವಾಲ್, ಅಮರಿಂದರ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ನವಜೋತ್ ಸಿಂಗ್ ಸಿಧು