AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ

ಪಂಜಾಬ್‌ನ ತರಣ್‌ ತಾರಣ್ ಜಿಲ್ಲೆಯಲ್ಲಿ ನಡೆದ ಘೋರ ಕೃತ್ಯದಲ್ಲಿ, ಮುನಿಸಿಕೊಂಡು ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕರೆತರಲು ಬಂದ ಪತಿಯನ್ನು ಆಕೆಯ ಸಹೋದರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ದುರಂತ ಘಟನೆಯಲ್ಲಿ ಪತಿ ಲವ್‌ಪ್ರೀತ್ ಸಿಂಗ್ ಹಾಗೂ ರಕ್ಷಣೆಗೆ ಬಂದ ಮಹಿಳೆ ಗುರ್ಜಿತ್ ಕೌರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿ ಸಹೋದರ ಸಜನ್ ಸಿಂಗ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ
ಬೆಂಕಿ
ನಯನಾ ರಾಜೀವ್
|

Updated on:Jul 05, 2026 | 2:19 PM

Share

ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ.

ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್ ಕೆಲ ದಿನಗಳಿಂದ ಮುನಿಸಿಕೊಂಡು ತಾಯಿ ಮನೆಗೆ ಹೋಗಿ ಉಳಿದುಕೊಂಡಿದ್ದರು. ಜೂನ್ 13 ರಂದು ಲವ್‌ಪ್ರೀತ್ ಸಿಂಗ್ ಪತ್ನಿಯ ಮನವೊಲಿಸಿ ಮನೆಗೆ ಕರೆದೊಯ್ಯಲು ಅತ್ತೆಯ ಮನೆಗೆ ಹೋಗಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಸಂದೀಪ್ ಕೌರ್ ಸಹೋದರ ಸಜನ್ ಸಿಂಗ್, ಬಾವ ಲವ್‌ಪ್ರೀತ್ ಸಿಂಗ್ ಮೇಲೆ ದಹನಕಾರಿ ವಸ್ತುವನ್ನು ಸುರಿದು ದಿಢೀರನೆ ಬೆಂಕಿ ಹಚ್ಚಿದ್ದಾನೆ.

ರಕ್ಷಿಸಲು ಹೋದ ಮಹಿಳೆಯೂ ಸಾವು ಲವ್‌ಪ್ರೀತ್ ಸಿಂಗ್ ಒದ್ದಾಡುತ್ತಾ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿದ್ದನ್ನು ನೋಡಿ, ಸಜನ್ ಸಿಂಗ್ ಅವರ ಅತ್ತಿಗೆ ಗುರ್ಜಿತ್ ಕೌರ್ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ದುರದೃಷ್ಟವಶಾತ್ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಅವರಿಗೂ ಭೀಕರವಾಗಿ ಸುಟ್ಟ ಗಾಯಗಳಾಗಿದ್ದವು. ತೀವ್ರವಾಗಿ ಗಾಯಗೊಂಡಿದ್ದ ಲವ್‌ಪ್ರೀತ್ ಮತ್ತು ಗುರ್ಜಿತ್ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ಸಜನ್ ಸಿಂಗ್‌ಗೂ ಸುಟ್ಟ ಗಾಯಗಳಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮತ್ತಷ್ಟು ಓದಿ: ಲಕ್ನೋ ಕೋಚಿಂಗ್ ಸೆಂಟರ್​​ನಲ್ಲಿ ಭೀಕರ ಬೆಂಕಿ ದುರಂತ; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ ಈ ಘಟನೆಯ ಮೈ ಜುಂ ಎನಿಸುವ ಸಿಸಿಟಿವಿ (CCTV) ದೃಶ್ಯಾವಳಿಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ವ್ಯಕ್ತಿಯೊಬ್ಬನಿಗೆ ದಿಢೀರನೆ ಬೆಂಕಿ ಹಚ್ಚುವುದು, ಆತ ಪ್ರಾಣಭಯದಿಂದ ಬೆಂಕಿ ನಂದಿಸಲು ಓಡುವುದು ಮತ್ತು ಆತನನ್ನು ರಕ್ಷಿಸಲು ಹೋದ ಮಹಿಳೆಯ ಮೈಗೂ ಬೆಂಕಿ ಹೊತ್ತಿಕೊಂಡು ಇಬ್ಬರೂ ಕಿರುಚಾಡುತ್ತಾ ಓಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಆರೋಪಿ ಸಜನ್ ಸಿಂಗ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:19 pm, Sun, 5 July 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ