AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಪಟಕ್ಕೆ ದಾರ ಕೊಡಿಸಲಿಲ್ಲವೆಂದು 11 ವರ್ಷದ ಬಾಲಕ ಆತ್ಮಹತ್ಯೆ

ಗಾಳಿಪಟವನ್ನು ಹಾರಿಸಲು ದಾರ ಬೇಕೆಂದು ಹಠ ಹಿಡಿದ 11 ವರ್ಷದ ಬಾಲಕ ರೂಂನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಳಿಪಟ ಹಾರಿಸಲು ದಾರ ಕೊಡಿಸಬೇಕೆಂದು ಆ ಬಾಲಕ ಒತ್ತಾಯಿಸುತ್ತಿದ್ದ. ಅವನ ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಆತನನ್ನು ಓದಲು ರೂಂಗೆ ಕಳುಹಿಸಿದರು. ಸ್ವಲ್ಪ ಹೊತ್ತು ಬಿಟ್ಟು ಹೋದಾಗ ರೂಂ ಲಾಕ್ ಆಗಿತ್ತು. ಅನುಮಾನದಿಂದ ಬಾಗಿಲು ಒಡೆದಾಗ ಆ ಬಾಲಕ ನೇಣು ಹಾಕಿಕೊಂಡಿದ್ದ.

ಗಾಳಿಪಟಕ್ಕೆ ದಾರ ಕೊಡಿಸಲಿಲ್ಲವೆಂದು 11 ವರ್ಷದ ಬಾಲಕ ಆತ್ಮಹತ್ಯೆ
Kite
ಸುಷ್ಮಾ ಚಕ್ರೆ
|

Updated on: Jan 29, 2026 | 8:37 PM

Share

ನವದೆಹಲಿ, ಜನವರಿ 29: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ. ಅದಕ್ಕೆ ಅವರು ಒಪ್ಪಿರಲಿಲ್ಲ. ಹೋಗಿ ಓದಿಕೋ ಎಂದು ಅವರು ಗದರಿ ರೂಂಗೆ ಕಳುಹಿಸಿದ್ದರು. ಸ್ವಲ್ಪ ಹೊತ್ತಾದ ಮೇಲೆ ರೂಂ ಬಳಿ ಹೋಗಿ ನೋಡಿದಾಗ ಆ ರೂಂ ಒಳಗಿಂದ ಲಾಕ್ ಆಗಿತ್ತು. ಆ ಬಾಲಕನನ್ನು ಕರೆದರೂ ಪ್ರತಿಕ್ರಿಯೆ ಬರಲಿಲ್ಲ.

ಅನುಮಾನದಿಂದ ಕುಟುಂಬದ ಸದಸ್ಯರು ಬಾಗಿಲು ಒಡೆದು ಒಳಗೆ ಹೋದಾಗ, ಮಗು ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕರ್ಟನ್ ರಾಡ್‌ಗೆ ನೇಣು ಬಿಗಿದುಕೊಂಡು ಆ ಬಾಲಕ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ

ಕಪುರ್ತಲಾ ಜಿಲ್ಲೆಯ ಫಾಗ್ವಾರಾದ ಪನ್ಶ್ತಾ ಗ್ರಾಮದಲ್ಲಿ ಈ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ, ಮಗುವಿನ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

(ಸೂಚನೆ: ಆತ್ಮಹತ್ಯೆಯನ್ನು ಟಿವಿ9 ಪ್ರಚೋದಿಸುವುದಿಲ್ಲ. ಇದನ್ನು ಕೇವಲ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದರೆ ಆಪ್ತರೊಂದಿಗೆ ಮಾತನಾಡಿ ಅಥವಾ ಮನಶಾಸ್ತ್ರಜ್ಞರ ಸಹಾಯ ಪಡೆಯಿರಿ)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!