
ನವದೆಹಲಿ, ಜನವರಿ 29: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ. ಅದಕ್ಕೆ ಅವರು ಒಪ್ಪಿರಲಿಲ್ಲ. ಹೋಗಿ ಓದಿಕೋ ಎಂದು ಅವರು ಗದರಿ ರೂಂಗೆ ಕಳುಹಿಸಿದ್ದರು. ಸ್ವಲ್ಪ ಹೊತ್ತಾದ ಮೇಲೆ ರೂಂ ಬಳಿ ಹೋಗಿ ನೋಡಿದಾಗ ಆ ರೂಂ ಒಳಗಿಂದ ಲಾಕ್ ಆಗಿತ್ತು. ಆ ಬಾಲಕನನ್ನು ಕರೆದರೂ ಪ್ರತಿಕ್ರಿಯೆ ಬರಲಿಲ್ಲ.
ಅನುಮಾನದಿಂದ ಕುಟುಂಬದ ಸದಸ್ಯರು ಬಾಗಿಲು ಒಡೆದು ಒಳಗೆ ಹೋದಾಗ, ಮಗು ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕರ್ಟನ್ ರಾಡ್‌ಗೆ ನೇಣು ಬಿಗಿದುಕೊಂಡು ಆ ಬಾಲಕ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ
ಕಪುರ್ತಲಾ ಜಿಲ್ಲೆಯ ಫಾಗ್ವಾರಾದ ಪನ್ಶ್ತಾ ಗ್ರಾಮದಲ್ಲಿ ಈ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ, ಮಗುವಿನ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
(ಸೂಚನೆ: ಆತ್ಮಹತ್ಯೆಯನ್ನು ಟಿವಿ9 ಪ್ರಚೋದಿಸುವುದಿಲ್ಲ. ಇದನ್ನು ಕೇವಲ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಆತ್ಮಹತ್ಯೆಯ ಯೋಚನೆ ಬಂದರೆ ಆಪ್ತರೊಂದಿಗೆ ಮಾತನಾಡಿ ಅಥವಾ ಮನಶಾಸ್ತ್ರಜ್ಞರ ಸಹಾಯ ಪಡೆಯಿರಿ)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ