Crime News: ಗಂಡನೊಂದಿಗೆ ಜಗಳವಾಡಿ ಹೆತ್ತ ಮಗನನ್ನೇ ಕಾಲುವೆಗೆ ಎಸೆದ ಮಹಿಳೆ

ರೀನಾ ಕುಮಾರಿ ಮತ್ತು ರವಿ ಕುಮಾರ್ 2012ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. 10 ವರ್ಷದ ಮಗಳು ಮತ್ತು 8 ವರ್ಷದ ಮಗನೊಂದಿಗೆ ವಾಸಿಸುತ್ತಿದ್ದ ಆ ಮಹಿಳೆ ಆಗಾಗ ಪತಿಯೊಂದಿಗೆ ಜಗಳವಾಡುತ್ತಿದ್ದಳು.

Crime News: ಗಂಡನೊಂದಿಗೆ ಜಗಳವಾಡಿ ಹೆತ್ತ ಮಗನನ್ನೇ ಕಾಲುವೆಗೆ ಎಸೆದ ಮಹಿಳೆ
ಸಾಂದರ್ಭಿಕ ಚಿತ್ರImage Credit source: Indian Express
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 29, 2022 | 9:53 AM

ಚಂಡೀಗಢ: ಹಣದ ವಿಚಾರಕ್ಕೆ ಗಂಡನೊಂದಿಗೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗನನ್ನು ಕಾಲುವೆಗೆ ಎಸೆದಿರುವ ಘಟನೆ ಪಂಜಾಬ್‌ನ (Punjab) ಹೋಶಿಯಾರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ತನ್ನ ಮಗನನ್ನು ಕಾಲುವೆಗೆ ಎಸೆದಿದ್ದ ಆ ಮಹಿಳೆಯನ್ನು ಬಂಧಿಸಲಾಗಿದೆ. ಈ ಘಟನೆ ಸಂಭವಿಸಿದ ಉಚ್ಚಿ ಬಸ್ಸಿ ಕಾಲುವೆಯ ಸೇತುವೆ ಬಳಿ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಇದಕ್ಕೂ ಮೊದಲು ಕೂಡ ಸಾಕಷ್ಟು ಬಾರಿ ಆ ಮಹಿಳೆ ತನ್ನ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವುದಾಗಿ (Murder) ಗಂಡನಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ.

ರೀನಾ ಕುಮಾರಿ ಮತ್ತು ರವಿ ಕುಮಾರ್ 2012ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. 10 ವರ್ಷದ ಮಗಳು ಮತ್ತು 8 ವರ್ಷದ ಮಗನೊಂದಿಗೆ ವಾಸಿಸುತ್ತಿದ್ದ ಆ ಮಹಿಳೆ ಆಗಾಗ ಪತಿಯೊಂದಿಗೆ ಜಗಳವಾಡುತ್ತಿದ್ದಳು. ತಮ್ಮ ಮಕ್ಕಳನ್ನು ಕಾಲುವೆಗೆ ಎಸೆಯುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅವರ ಕುಟುಂಬದಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಾಗಿರಲಿಲ್ಲ. ಅವರು ಹಣಕಾಸಿನ ವಿಷಯದಲ್ಲಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: Riya Kumari: ಮಧ್ಯ ದಾರಿಯಲ್ಲಿ ನಟಿ ರಿಯಾ ಹತ್ಯೆ; ಗಂಡನ ಹೇಳಿಕೆ ಮೇಲೆ ಪೊಲೀಸರಿಗೆ ಮೂಡಿದೆ ಅನುಮಾನ

ಪತಿ ಇತ್ತೀಚೆಗೆ ಕೆಲಸ ಹುಡುಕಿಕೊಂಡು ಮಾಲ್ಡೀವ್ಸ್‌ಗೆ ತೆರಳಿದ್ದರಿಂದ ರೀನಾ ಕುಮಾರಿ ಮಕ್ಕಳೊಂದಿಗೆ ಉಳಿದುಕೊಂಡಿದ್ದಳು. ಆದರೂ ರವಿಕುಮಾರ್​ಗೆ ಹಣ ಕಳುಹಿಸುವಂತೆ ಆಕೆ ಫೋನ್ ಮಾಡಿ ಜಗಳವಾಡಿದ್ದಳು. ಈ ಸಮಯದಲ್ಲಿ ಆಕೆ ತನ್ನ ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ವರದಿಗಳು ತಿಳಿಸಿವೆ.

ಕ್ರಿಸ್‌ಮಸ್ ರಾತ್ರಿಯಂದು ಆ ದಂಪತಿಗಳು ಫೋನ್‌ನಲ್ಲಿ ಜಗಳವಾಡಿದ್ದರು. ಸೋಮವಾರ ರವಿಕುಮಾರ್ ತನ್ನ ತಂದೆಗೆ ಫೋನ್ ಮಾಡಿ ತನ್ನ ಹೆಂಡತಿ ತನ್ನ ಮಗ ಅಭಿಯೊಂದಿಗೆ ಉಚ್ಚಿ ಬಸ್ಸಿ ಕಾಲುವೆಗೆ ಹೊರಟಿದ್ದಾಳೆ ಎಂದು ತಿಳಿಸಿದ್ದ. ಆಕೆ ತನ್ನ ಮಕ್ಕಳನ್ನು ನೀರಿನಲ್ಲಿ ಮುಳುಗಿಸುವುದಾಗಿ ಬೆದರಿಕೆಯನ್ನು ಹಾಕಿದ್ದಾಳೆಂದು ಹೇಳಿದ್ದ. ಕೊನೆಗೆ ರವಿಕುಮಾರ್ ಹಾಗೂ ಆತನ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದಾಗ ಕಾಲುವೆಗೆ ಹೋಗುವ ಮಾರ್ಗದಲ್ಲಿ, ಲ್ಯಾಮಿನಾ ಗ್ರಾಮದ ಬಳಿ ಕಾಲುವೆಯ ದಡದಲ್ಲಿ ಮಹಿಳೆ ಮತ್ತು ಮಗು ಕುಳಿತಿರುವುದನ್ನು ಕೆಲವರು ಕಂಡು ತಂದೆ ಮತ್ತು ಮಗನಿಗೆ ಮಾಹಿತಿ ನೀಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಹಣದ ವಿಷಯಕ್ಕೆ ಬೆಂಗಳೂರು ಯುವಕನಿಗೆ ಚಿತ್ರಹಿಂಸೆ ನೀಡಿ ಕೊಲೆ, 6 ತಿಂಗಳ ನಂತರ ಪ್ರಕರಣ ಬೆಳಕಿಗೆ! ಪ್ರಕರಣ ಗುಪ್ತವಾಗಿಟ್ಟಿದ್ದು ಹೇಗೆ ಗೊತ್ತಾ?

ವಿಷಯ ತಿಳಿದು ರವಿಕುಮಾರ್​ ಮನೆಯವರು ಆಕೆ ಇದ್ದಲ್ಲಿಗೆ ಬರುವಾಗ ಆಕೆ ಕೋಪದಿಂದ ಅವರ ಎದುರಲ್ಲೇ ತನ್ನ ಮಗನನ್ನು ಕಾಲುವೆಗೆ ಎಸೆದು ಸ್ಥಳದಿಂದ ಓಡಿಹೋಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತನನ್ನು ಕಾಪಾಡುವಷ್ಟರಲ್ಲಿ ಆತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಆದರೆ, ಆತನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಮಂಗಳವಾರ ರೀನಾ ಕುಮಾರಿಯನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ