AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ

ಎನ್​ಸಿಪಿಯಲ್ಲಿ ಅಜಿತ್ ಪವಾರ್ ಹಾಗೂ ಅವರ ಚಿಕ್ಕಪ್ಪ ಶರದ್ ಪವಾರ್ ನಡುವೆ ಭಿನ್ನಾಭಿಪ್ರಾಯಗಳು ಏರ್ಪಟ್ಟು 2 ಬಣಗಳಾಗಿದ್ದವು. ಇಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದೀಗ ಶರದ್ ಪವಾರ್ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಅಪಘಾತವನ್ನು ರಾಜಕೀಯಗೊಳಿಸಬೇಡಿ. ಇದೊಂದು ಆಕಸ್ಮಿಕ ಸಾವು. ಇದರಲ್ಲಿ ಯಾವುದೇ ಷಡ್ಯಂತ್ರವಿಲ್ಲ ಎಂದಿದ್ದಾರೆ.

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ
Sharad Pawar
ಸುಷ್ಮಾ ಚಕ್ರೆ
|

Updated on: Jan 28, 2026 | 9:08 PM

Share

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ ಸಾವಿನಿಂದ ಮಹಾರಾಷ್ಟ್ರವು ಭಾರೀ ನಷ್ಟವನ್ನು ಅನುಭವಿಸಿದೆ ಎಂದು ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.

ಅಜಿತ್ ಪವಾರ್ ಅವರ ನಿಧನದ ಸುದ್ದಿ ತುಂಬಾ ದುಃಖಕರವಾಗಿದೆ. ಕಠಿಣ ಪರಿಶ್ರಮಿ ನಾಯಕನ ನಿಧನದಿಂದ ಮಹಾರಾಷ್ಟ್ರಕ್ಕೆ ಭಾರಿ ನಷ್ಟವಾಗಿದೆ. ರಾಜ್ಯಕ್ಕಾದ ನಷ್ಟವನ್ನು ಭರಿಸಲಾಗದು. ಇಂದಿಗೂ ಕೆಲವು ವಿಷಯಗಳು ನಮ್ಮ ಕೈಯಲ್ಲಿಲ್ಲ. ಈ ಸಾವಿನ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಇದು ಕೇವಲ ಅಪಘಾತ. ಮಹಾರಾಷ್ಟ್ರ ಮತ್ತು ನಾವೆಲ್ಲರೂ ಇದರಿಂದ ದುಃಖಕ್ಕೆ ಒಳಗಾಗಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ. ದಯವಿಟ್ಟು ಇದರಲ್ಲಿ ರಾಜಕೀಯ ತರಬೇಡಿ ಎಂದು ಅವರು ವಿನಂತಿಸಿದ್ದಾರೆ.

ಇದನ್ನೂ ಓದಿ: ವಿಮಾನ ಪತನದಲ್ಲಿ ಡಿಸಿಎಂ ಅಜಿತ್ ಪವಾರ್​​ ನಿಧನ; ಇದುವರೆಗೂ ಏನೇನಾಯ್ತು?

ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವಾರು ರಾಜಕೀಯ ನಾಯಕರು ಈ ಅಪಘಾತದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ನಂತರ ಅವರ ಈ ಪ್ರತಿಕ್ರಿಯೆ ಬಂದಿದೆ.

ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ಚಾರ್ಟರ್ಡ್ ವಿಮಾನವು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮುಂಬೈನಿಂದ ಹೊರಟಿತು. ಸುಮಾರು 45 ನಿಮಿಷಗಳ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡ್ ಆಗಲು ಪ್ರಯತ್ನಿಸುವಾಗ ವಿಮಾನ ಅಪಘಾತಕ್ಕೀಡಾಯಿತು. ಅಜಿತ್ ಪವಾರ್ ಜೊತೆಗೆ, ಇತರ ನಾಲ್ವರು ಜನರು ವಿಮಾನದಲ್ಲಿದ್ದರು. ಅವರು ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ