Puri Jagannath Rath Yathra 2024: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ

ಒಡಿಶಾದ ಪುರಿ ನಗರದಲ್ಲಿರುವ ಐತಿಹಾಸಿಕ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತವಾಗಿ ಭಕ್ತಾಧಿ ಒಬ್ಬರು ಮೃತಪಟ್ಟಿದ್ದು ಮತ್ತು 300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವುದಾಗಿ ವರದಿ ಆಗಿದೆ. ಸದ್ಯ ಗಾಯಾಳುಗಳನ್ನು ಪುರಿ ಜಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಭಗವಾನ್ ಜಗನ್ನಾಥನ ಭವ್ಯ ರಥಯಾತ್ರೆ ಭಾನುವಾರ ಆರಂಭಗೊಂಡಿದ್ದು, ದೇಶಾದ್ಯಂತ ಭಕ್ತರು ಭಾಗಿಯಾಗುತ್ತಾರೆ.

Puri Jagannath Rath Yathra 2024: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಭಕ್ತ ಸಾವು, ಹಲವರಿಗೆ ಗಾಯ
Follow us
ಗಂಗಾಧರ​ ಬ. ಸಾಬೋಜಿ
|

Updated on: Jul 07, 2024 | 10:45 PM

ಒಡಿಶಾ, ಜುಲೈ 07: ಒಡಿಶಾದ ಪುರಿಯಲ್ಲಿ ಭಾನುವಾರ ನಡೆದ ಐತಿಹಾಸಿಕ ಜಗನ್ನಾಥ ರಥಯಾತ್ರೆ (Jagannath Rath Yathra) ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಭಕ್ತರೊಬ್ಬರು (Devotee) ಮೃತಪಟ್ಟಿದ್ದು, 300 ಕ್ಕೂ ಭಕ್ತಾಧಿಗಳಿಗೆ ಗಾಯಗಳಾಗಿರುವುದಾಗಿ ವರದಿ ಆಗಿದೆ. ಘಟನೆ ಬಳಿಕ ಭಕ್ತನನ್ನು ತಕ್ಷಣವೇ ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಅಷ್ಟರಲ್ಲಿ ಪ್ರಾಣ ಹೋಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಮೃತ ಭಕ್ತ ಯಾರೆಂದು ತಿಳಿದುಬಂದಿಲ್ಲ. ಸದ್ಯ ಗಾಯಾಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇಂದಿನಿಂದ ಎರಡು ದಿನ ನಡೆಯುವ ಭಗವಾನ್ ಜಗನ್ನಾಥ ಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ.

300ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಸುಮಾರು 50 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ಒಡಿಶಾ ಆರೋಗ್ಯ ಕಾರ್ಯದರ್ಶಿ ಆಸ್ಪತ್ರೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಇದನ್ನೂ ಓದಿ: Jagannath Rath Yatra 2024: ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ ನೋಡಿ

ಭಗವಾನ್ ಜಗನ್ನಾಥನ ಭವ್ಯ ರಥಯಾತ್ರೆ ಭಾನುವಾರ ಆರಂಭಗೊಂಡಿದ್ದು, ಪದಿ ಮುರ್ಮು ಅವರು ಚಾಲನೆ ನೀಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುವ ಮೂಲಕ ಈ ಯಾತ್ರೆಗೆ ಸಾಕ್ಷಿಯಾಗುತ್ತಾರೆ. ಈ ರಥಯಾತ್ರೆಯೂ ಎರಡು ದಿನ ನಡೆಯಲಿದ್ದು, 53 ವರ್ಷಗಳ ಬಳಿಕ ಮೊದಲ ಬಾರಿಗೆ ರಥಯಾತ್ರೆಯು ಎರಡು ದಿನಗಳವರೆಗೆ ನಡೆಯುತ್ತಿರುವುದು ವಿಶೇಷ. ಭಗವಾನ್ ಜಗನ್ನಾಥ, ಭಗವಾನ್ ಬಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ‘ಜೈ ಜಗನ್ನಾಥ’ ಘೋಷಣೆಯೊಂದಿಗೆ ಕಂಸಾಳೆ, ಶಂಖಗಳ ಶಬ್ದವು ಮೊಳಗಿದೆ.

ಇದನ್ನೂ ಓದಿ: Puri Janannath Rath Yathra 2024: ಪುರಿ ಜಗನ್ನಾಥನ ರಥಯಾತ್ರೆ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಈ ಶುಭ ಸಂದೇಶ ಕಳುಹಿಸಿ

ಧಾರ್ಮಿಕ ವಿಧಿ ವಿಧಾನದ ಪ್ರಕಾರ 11:15ಕ್ಕೆ ದೇವಿ ಸುಭದ್ರೆಯ ರಥವಾದ ದರ್ಪದಲನ್‌ಗೆ ಭಗವಾನ್ ಸುದರ್ಶನನು ಮೊದಲು ಬೆಂಗಾವಲು ಪಡೆಯುತ್ತಾನೆ. ತರುವಾಯ, ಬಲಭದ್ರ ದೇವರನ್ನು ತನ್ನ ತಾಳಧ್ವಜ ರಥಕ್ಕೆ ಕರೆದೊಯ್ಯಲಾಯಿತು. ನಂತರ ಸುಭದ್ರಾ ದೇವಿಯ ವಿಶೇಷ ಮೆರವಣಿಗೆ ಮಾಡಲಾಯಿತು. ಅಂತಿಮವಾಗಿ, ಭಗವಾನ್ ಜಗನ್ನಾಥನನ್ನು ನಂದಿಘೋಷ ರಥಕ್ಕೆ ಕರೆತರಲಾಯಿತು. ಮಧ್ಯಾಹ್ನ 2:15 ರ ಸುಮಾರಿಗೆ ‘ಪಹಂಡಿ’ ಆಚರಣೆಯನ್ನು ಪೂರ್ಣಗೊಳಿಸಲಾಗಿದೆ.

ಈ ರಥಯಾತ್ರೆಯೂ ಮಂಗಳ ಆರತಿ ಮತ್ತು ಮೈಲಂ ಸೇರಿದಂತೆ ಹಲವಾರು ಆಚರಣೆಗಳನ್ನು ಒಳಗೊಂಡಿದೆ. ಮೂರು ಭವ್ಯವಾದ ರಥಗಳು, ಈಗ ದೇವಾಲಯದ ಸಿಂಹ ದ್ವಾರದ ಮುಂದೆ ಪೂರ್ವಾಭಿಮುಖವಾಗಿ ನಿಲ್ಲಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್