AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತದ ಶತ್ರುಗಳ ಅಜೆಂಡಾವನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ’; ಪ್ರಧಾನಿ ಮೋದಿ ವಿರುದ್ಧದ ಆರೋಪಕ್ಕೆ ಕಿರಣ್ ರಿಜಿಜು ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ "ವಿದೇಶಿ ನೆರವು" ಇದೆ ಎಂದು ಆರೋಪಿಸಿ ಬಹಿರಂಗ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿ ನೀಡಿದ್ದ ಸವಾಲಿಗೆ ಕೇಂದ್ರ ಸಚಿವ ಕಿರಣ್ ರಿಜಿಜು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿರೋಧ ಪಕ್ಷದ ನಾಯಕರು ಭಾರತದ ಶತ್ರುಗಳ ಅಜೆಂಡಾವನ್ನು ದೇಶದೊಳಗೆ ಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ವಿದೇಶಿ ಶಕ್ತಿಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರ ಹಾಗೂ ಹಾಸ್ಯಾಸ್ಪದ ಎಂದು ಕಿರಣ್ ರಿಜಿಜು ತಳ್ಳಿಹಾಕಿದ್ದಾರೆ. ಈ ವಿವಾದವು ಇದೀಗ ಕೇಂದ್ರ ಸಚಿವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧದ ತೀವ್ರ ರಾಜಕೀಯ ವಾಕ್ಸಮರವಾಗಿ ರೂಪುಗೊಂಡಿದೆ.

'ಭಾರತದ ಶತ್ರುಗಳ ಅಜೆಂಡಾವನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ'; ಪ್ರಧಾನಿ ಮೋದಿ ವಿರುದ್ಧದ ಆರೋಪಕ್ಕೆ ಕಿರಣ್ ರಿಜಿಜು ತಿರುಗೇಟು
ಕಿರಣ್ ರಿಜಿಜು - ರಾಹುಲ್ ಗಾಂಧಿ Image Credit source: PTI
ಸುಷ್ಮಾ ಚಕ್ರೆ
|

Updated on: Nov 03, 2026 | 8:57 PM

Share

ನವದೆಹಲಿ, ನವೆಂಬರ್ 3: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಕ್ಕೆ ಬರಲು ಮತ್ತು ಅಧಿಕಾರದಲ್ಲಿ ಉಳಿಯಲು ವಿದೇಶಿ ಶಕ್ತಿಗಳ ನೆರವು ಪಡೆದಿದ್ದಾರೆ ಎಂಬ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಕೇಂದ್ರ ಸಚಿವ ಕಿರಣ್ ರಿಜಿಜು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಈ ಪೋಸ್ಟ್ ಅನ್ನು “ಇಸ್ಲಾಮಿಕ್ ಮೂಲಭೂತವಾದಿಗಳು ಜಾತ್ಯತೀತತೆಯ ಬಗ್ಗೆ ಮಾತನಾಡಿದಂತೆ ಮತ್ತು ಪ್ರತ್ಯೇಕತಾವಾದಿಗಳು ಭಾರತದ ಧ್ವಜ ಹಿಡಿದುಕೊಂಡಂತೆ” ಎಂದು ಕಿರಣ್ ರಿಜಿಜು ಟೀಕಿಸಿದ್ದಾರೆ.

ಆರೋಪಗಳ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಹಾಕಿದ್ದ ಸವಾಲನ್ನು ತಳ್ಳಿಹಾಕಿದ ಸಚಿವ ಕಿರಣ್ ರಿಜಿಜು, “ಉನ್ನತ ಮಟ್ಟದ ಚರ್ಚೆಗಳು ಪರಿಪಕ್ವ ಮತ್ತು ಪ್ರಬುದ್ಧ ವ್ಯಕ್ತಿಗಳ ನಡುವೆ ಮಾತ್ರ ನಡೆಯುತ್ತವೆ” ಎಂದು ಲೇವಡಿ ಮಾಡಿದ್ದಾರೆ.

ಕಳೆದ ವಾರ ಗುಜರಾತ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೇಸ್ ಮತ್ತು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿ, ದೇಶವನ್ನು ವಿಭಜಿಸಲು ಕೆಲವು ಶಕ್ತಿಗಳು ವಿದೇಶಗಳಲ್ಲಿ ಗೂಢಾಲೋಚನೆ ನಡೆಸುತ್ತಿವೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಯವರ ವಿದೇಶಿ ಪ್ರವಾಸಗಳನ್ನು ಪ್ರಶ್ನಿಸಿದ್ದರು.

ಇದನ್ನೂ ಓದಿ: ‘ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ’; ನಟ ನಾಸಿರುದ್ದೀನ್ ಶಾ ದಿಮಾಗಿ ನಕ್ಸಲ್ ವಿಡಿಯೋಗೆ ಸಚಿವ ಕಿರಣ್ ರಿಜಿಜು ಆಕ್ರೋಶ!

“ದೇಶವು ಬಾಹ್ಯ ಸವಾಲುಗಳಿಗೆ ಪರಿಹಾರ ಹುಡುಕುತ್ತಿರುವಾಗ, ದೇಶದೊಳಗಿನ ಕೆಲವು ವಿರೋಧಿ ಶಕ್ತಿಗಳು ಸುಳ್ಳು ಮತ್ತು ವದಂತಿಗಳನ್ನು ಹರಡುವ ಮೂಲಕ ಅಸ್ಥಿರತೆಯನ್ನು ಸೃಷ್ಟಿಸುತ್ತಿದ್ದವು. ದೇಶದಲ್ಲೀಗ ವಿರೋಧ ಪಕ್ಷವು ‘ವಿರೋಧ ಪಕ್ಷ’ವಾಗಿ ಉಳಿಯದೇ ದೇಶದ ಪ್ರಗತಿಗೆ ಅಡ್ಡಿಪಡಿಸುವ ತಡೆಗೋಡೆಯ ಪಕ್ಷವಾಗಿ ಬದಲಾಗಿದೆ. ವಿದೇಶಗಳಲ್ಲಿ ಯಾರು ರಹಸ್ಯವಾಗಿ ಯಾರನ್ನು ಭೇಟಿಯಾಗುತ್ತಿದ್ದಾರೆ? ಭಾರತ ವಿರೋಧಿ ಶಕ್ತಿಗಳು ಯಾರಿಗೆ ಬೆಂಬಲ ನೀಡುತ್ತಿವೆ? ಭಾರತದ ಶತ್ರುಗಳ ಭಾಷೆಯನ್ನು ಯಾರು ಮಾತನಾಡುತ್ತಿದ್ದಾರೆ ಎಂಬುದನ್ನು ದೇಶದ ಜನ ಗುರುತಿಸಬೇಕಿದೆ” ಎಂದು ಮೋದಿ ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯೇ ವಿದೇಶಿ ಬೆಂಬಲದಿಂದ ಅಧಿಕಾರ ನಡೆಸುತ್ತಿದ್ದಾರೆ, ವಿದೇಶಿ ಬೆಂಬಲದಿಂದಲೇ ಮೋದಿ ಪ್ರಧಾನಿಯಾಗಿದ್ದು ಎಂದು ಆರೋಪಿಸಿ ಸವಾಲೆಸೆದಿದ್ದರು. “ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ವಿದೇಶಿ ಶಕ್ತಿಗಳು ಸಂಪೂರ್ಣವಾಗಿ ನಿಯಂತ್ರಿಸುತ್ತಿವೆ. ವಿದೇಶಿ ಸಾಮಾಜಿಕ ಜಾಲತಾಣಗಳು ನಿಮಗೆ ಸಂಪೂರ್ಣ ಬೆಂಬಲ ನೀಡುತ್ತಿವೆ. ಯಾರಿಗೆ ವಿದೇಶಿ ನೆರವು ಸಿಗುತ್ತಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ನಾನು ನಿಮಗೆ ಸವಾಲು ಹಾಕುತ್ತೇನೆ. ಧೈರ್ಯವಿದ್ದರೆ ಯಾವುದೇ ವೇದಿಕೆಯಲ್ಲಿ ಬೇಕಾದರೂ, ಯಾವುದೇ ಸಮಯಕ್ಕೆ ಬೇಕಾದರೂ ಬನ್ನಿ” ಎಂದಿದ್ದರು.

ಇದನ್ನೂ ಓದಿ: ‘ಸುಳ್ಳು ಹೇಳಿ ನಂಬಿಸಬೇಡಿ, ವಿದೇಶಿ ನೆರವಿನಿಂದಲೇ ನೀವು ಪ್ರಧಾನಿಯಾಗಿದ್ದು’; ಮೋದಿ ಕುರಿತು ರಾಹುಲ್ ಗಾಂಧಿ ಆರೋಪ

ಕೇಂದ್ರ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯೆ:

ಕಾಂಗ್ರೆಸ್ ನಾಯಕನ ಸವಾಲಿಗೆ ಪ್ರತ್ಯುತ್ತರ ನೀಡಿದ ಕಿರಣ್ ರಿಜಿಜು, ರಾಹುಲ್ ಗಾಂಧಿ ಭಾರತದ ಶತ್ರುಗಳ ಅಜೆಂಡಾವನ್ನು ದೇಶದೊಳಗೆ ಮುನ್ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಇತರರ ಮೇಲೆ ವಿದೇಶಿ ಬೆಂಬಲದ ಆರೋಪ ಹೊರಿಸುವುದು ತನಗೆ ತಾನೇ ಮಾಡಿಕೊಳ್ಳುವ ಹಾಸ್ಯಾಸ್ಪದ ಸಂಗತಿಯಾಗಿದೆ. ಇದು ಇಸ್ಲಾಮಿಕ್ ಮೂಲಭೂತವಾದಿಗಳು ಜಾತ್ಯತೀತತೆಯ ಬಗ್ಗೆ ಮಾತನಾಡುವುದು, ಪ್ರತ್ಯೇಕತಾವಾದಿಗಳು ಭಾರತದ ತ್ರಿವರ್ಣ ಧ್ವಜವನ್ನು ಹಿಡಿಯುವುದು ಮತ್ತು ಅರಾಜಕತಾವಾದಿಗಳು ಸಂವಿಧಾನದ ಪುಸ್ತಕವನ್ನು ಪ್ರದರ್ಶಿಸುವುದಕ್ಕೆ ಸಮಾನವಾಗಿದೆ” ಎಂದು ಸಚಿವ ಕಿರಣ್ ರಿಜಿಜು ತಮ್ಮ ಎಕ್ಸ್ ಖಾತೆಯಲ್ಲಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ನಾಯಕರನ್ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್ ನಾಯಕರನ್ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್, ಗಾನವಿ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ಮೈಸೂರಿನಲ್ಲೂ ಭುಗಿಲೆದ್ದ ಕಬ್ಬು ಕಿಚ್ಚು: ಡಿಸಿ ಕಚೇರಿ ರಸ್ತೆಯಲ್ಲೇ ಅಡುಗೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ನದಿಗಳ ಜೋಡಣೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ನನ್ನನ್ನೂ ಸೇರಿ 26 ಶಾಸಕರು ರಾಜೀನಾಮೆ ಕೊಡಬೇಕು ಎಂದ ರಾಜಣ್ಣ
ನನ್ನನ್ನೂ ಸೇರಿ 26 ಶಾಸಕರು ರಾಜೀನಾಮೆ ಕೊಡಬೇಕು ಎಂದ ರಾಜಣ್ಣ
ಚೆಂಡು ಹೂವಿನ ತೋಟದಲ್ಲಿ ರಾರಾಜಿಸುತ್ತಿದೆ ಪ್ರಧಾನಿ ಮೋದಿ ಹೆಸರು
ಚೆಂಡು ಹೂವಿನ ತೋಟದಲ್ಲಿ ರಾರಾಜಿಸುತ್ತಿದೆ ಪ್ರಧಾನಿ ಮೋದಿ ಹೆಸರು
ಸಿಸಿಬಿ ವಿಚಾರಣೆಗ ಹಾಜರಾದ ಹೆಚ್​​ಡಿಕೆ ಪಿಆರ್​​ಒ ಪ್ರಜ್ವಲ್ ಪ್ರಸಾದ್
ಸಿಸಿಬಿ ವಿಚಾರಣೆಗ ಹಾಜರಾದ ಹೆಚ್​​ಡಿಕೆ ಪಿಆರ್​​ಒ ಪ್ರಜ್ವಲ್ ಪ್ರಸಾದ್