ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಆ ಒಂದು ಸುಳ್ಳು ನಂಬಿ ರೈಲಿನಿಂದ ಹಾರಿ 11 ಜನರ ದೇಹ ಛಿದ್ರ
Maharashtra Train Accident: ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡಿತು. ಇದರಿಂದ ಆತಂಕಗೊಂಡ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನ ಚಕ್ರದಡಿ ಸಿಲುಕಿ 11 ಜನರ ದಏಹಗಳು ಛಿದ್ರವಾಗಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 11 ಜನರ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್‌ನ ಪರಾಂಡ ನಿಲ್ದಾಣದಲ್ಲಿ ಘಟನೆ ನಡೆದಿದೆ. ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿ ಹರಡಿತ್ತು. ಇದರಿಂದ ಹೆದರಿದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದರು. ಪಕ್ಕದ ಹಳಿ ಮೇಲೆ ನಿಂತಾಗ ಮತ್ತೊಂದು ರೈಲು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ 11 ಜನ ಸಾವನ್ನಪ್ಪಿದ್ದಾರೆ.
ಬೆಂಕಿ ಕಾಣಿಸಿಕೊಂಡಿದ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದೆ. ಜಲಗಾಂವ್‌ನ ಪಚೋರಾ ರೈಲು ನಿಲ್ದಾಣದಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗೊಂದಲ ಸೃಷ್ಟಿಯಾಯಿತು. ಇದರಿಂದ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಹೊರಗೆ ಹಾರಿದರು, ಆಗ ಪಕ್ಕದ ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ.
#BREAKING A major accident has taken place near Paranda Railway Station in Jalgaon #Maharashtra . Passengers jumped from the train amid rumors of fire in Pushpak Express. During this time, many passengers died after being hit by another train. #PushpakExpress #Jalgaon #Rumor pic.twitter.com/ZMrGm4szGy
— Ravi Pandey🇮🇳 (@ravipandey2643) January 22, 2025
ಇದನ್ನೂ ಓದಿ: ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಬೆಂಕಿ ಹರಡಿದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ 30-40 ಜನ ರೈಲಿನಿಂದ ಕೆಳಗೆ ಜಿಗಿದಿದ್ದರು. ಕೆಲವರು ದೂರ ಓಡಿಹೋದರೆ ಇನ್ನು ಕೆಲವರು ಪಕ್ಕದ ಹಳಿ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಹರಿದು ಅವರು ಮೃತಪಟ್ಟಿದ್ದಾರೆ. ಆ ಪ್ರದೇಶದಲ್ಲಿ ಹಳಿಯ ಕೆಲಸ ನಡೆಯುತ್ತಿರುವ ಕಾರಣ ರೈಲಿಗೆ ಎಚ್ಚರಿಕೆಯ ಆದೇಶ ನೀಡಲಾಗಿತ್ತು. ಹೀಗಾಗಿ, ಬ್ರೇಕ್‌ಗಳನ್ನು ಹಾಕುತ್ತಿದ್ದಂತೆ, ರೈಲಿನ ಚಕ್ರಗಳಿಂದ ಕಿಡಿಗಳು ಹೊರಹೊಮ್ಮಿದವು. ಇದರಿಂದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿತು.
Jalgaon, Maharashtra: A false fire alarm in the Pushpak Express at Paranda Railway Station caused panicked passengers to jump off the train. Tragically, several were run over by the Karnataka Express passing on another track https://t.co/Gs3RGOnksa pic.twitter.com/lmIHkE6IKb
— IANS (@ians_india) January 22, 2025
ಚಲಿಸುವ ರೈಲಿನಿಂದ ಜಿಗಿದಿದ್ದರಿಂದ ಹಲವರಿಗೆ ಗಾಯಗಳಾಗಿವೆ. ಗಾಯಾಳು ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:46 pm, Wed, 22 January 25