AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಪುಟಿನ್ ಭೇಟಿ; ರಷ್ಯಾ ಅಧ್ಯಕ್ಷ 2 ದಿನ ದೆಹಲಿಯಲ್ಲಿ ಏನು ಮಾಡಲಿದ್ದಾರೆ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 6.30ಕ್ಕೆ ದೆಹಲಿಗೆ ಆಗಮಿಸಲಿದ್ದಾರೆ. ಪುಟಿನ್ ಅವರ ಜೊತೆಗೆ ಅವರ ನೆಚ್ಚಿನ ಕಾರು ಔರಸ್ ಸೆನಾಟ್ ಲಿಮೋಸುಯಿನ್ ಕೂಡ ಭಾರತಕ್ಕೆ ಬರಲಿದೆ. ಈ ಕಾರನ್ನು ಅತ್ಯಂತ ಸುರಕ್ಷತೆಯ ದೃಷ್ಟಿಯಿಂದ ಐಷಾರಾಮಿಯಾಗಿ ಸಿದ್ಧಪಡಿಸಲಾಗಿದೆ. ಇದು ರಷ್ಯಾದ ಅಧಿಕೃತ ಅಧ್ಯಕ್ಷೀಯ ಸರ್ಕಾರಿ ಕಾರು. ಇದನ್ನು ಹೆಚ್ಚಾಗಿ ರೋಲ್ಸ್ ರಾಯ್ಸ್‌ಗೆ ಹೋಲಿಸಲಾಗುತ್ತದೆ. ಈ ಕಾರು ಪುಟಿನ್ ಜೊತೆಗೆ ದೆಹಲಿಗೂ ಬರಲಿದೆ. ದೆಹಲಿಯಲ್ಲಿ ಪುಟಿನ್ ಅವರ ವೇಳಾಪಟ್ಟಿ ಹೀಗಿದೆ.

ಭಾರತಕ್ಕೆ ಪುಟಿನ್ ಭೇಟಿ; ರಷ್ಯಾ ಅಧ್ಯಕ್ಷ 2 ದಿನ ದೆಹಲಿಯಲ್ಲಿ ಏನು ಮಾಡಲಿದ್ದಾರೆ?
Russia President Putin
ಸುಷ್ಮಾ ಚಕ್ರೆ
|

Updated on: Dec 04, 2025 | 5:31 PM

Share

ನವದೆಹಲಿ, ಡಿಸೆಂಬರ್ 4: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Putin) 4 ವರ್ಷಗಳ ಬಳಿಕ ಇಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿರ್ಣಾಯಕ ಸಭೆಗಳನ್ನು ನಡೆಸಲಿದ್ದಾರೆ ಮತ್ತು ನವದೆಹಲಿಯೊಂದಿಗಿನ ಎಂಟು ದಶಕಗಳ ಸಂಬಂಧಗಳನ್ನು ವಿಸ್ತರಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ ಹಂತವನ್ನು ಗುರುತಿಸಲಿದೆ.

ಪುಟಿನ್ ಎರಡು ದಿನಗಳ ಭೇಟಿಗಾಗಿ ಇಂದು ದೆಹಲಿಗೆ ಆಗಮಿಸಲಿದ್ದಾರೆ. ಪುಟಿನ್ ಅವರ ವಿವರವಾದ ಪ್ರಯಾಣದ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಪುಟಿನ್ ಅವರು ದೆಹಲಿಯ ಫೈವ್ ಸ್ಟಾರ್ ಹೋಟೆಲ್ ಐಟಿಸಿ ಮೌರ್ಯದಲ್ಲಿ ತಂಗಲಿದ್ದಾರೆ. ಇದು ಇದುವರೆಗೂ ಅನೇಕ ಜಾಗತಿಕ ನಾಯಕರ ವಾಸ್ತವ್ಯಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ- ಪುಟಿನ್ ಗೆಳೆತನ 25 ವರ್ಷಕ್ಕೂ ಹಿಂದಿನದು; ವಾಜಪೇಯಿ ಜೊತೆಗಿನ ಫೋಟೋ ಮತ್ತೆ ವೈರಲ್

ರಷ್ಯಾ ಅಧ್ಯಕ್ಷರ ಭಾರತ ಭೇಟಿಯ ವೇಳಾಪಟ್ಟಿ:

ಮೂಲಗಳ ಪ್ರಕಾರ, ರಷ್ಯಾದ ಅಧ್ಯಕ್ಷ ಪುಟಿನ್ ಇಂದು ಸಂಜೆ 6.30ಕ್ಕೆ ಭಾರತಕ್ಕೆ ಆಗಮಿಸಲಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಿದ್ದಾರೆ. ಅವರ ಗೌರವಾರ್ಥವಾಗಿ ಇಂದು ರಾತ್ರಿ ಆಯೋಜಿಸಲಾದ ಖಾಸಗಿ ಭೋಜನಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪುಟಿನ್ ಭೇಟಿ ಮಾಡಲಿದ್ದಾರೆ.

ನಾಳೆ (ಡಿಸೆಂಬರ್ 5) ಪುಟಿನ್ ಮೊದಲು ರಾಜ್‌ಘಾಟ್ ಮತ್ತು ನಂತರ ಹೈದರಾಬಾದ್ ಹೌಸ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ದ್ವಿಪಕ್ಷೀಯ ಸಭೆ ನಡೆಯಲಿದೆ. ಈ ಸಭೆಯ ನಂತರ ಮೋದಿ ಹಾಗೂ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆಯನ್ನು ನೀಡಲಿದ್ದಾರೆ. ಇದರ ನಂತರ, ಪುಟಿನ್ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಪುಟಿನ್ ರಷ್ಯಾದ ಸರ್ಕಾರಿ ಸ್ವಾಮ್ಯದ ಪ್ರಸಾರಕ ಆರ್‌ಟಿ ಟಿವಿಯ ಹೊಸ ಭಾರತ ಚಾನೆಲ್ ಅನ್ನು ಕೂಡ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಇಂದು ಪುಟಿನ್ ತಂಗಲಿರುವ ಹೋಟೆಲ್ ರೂಂ ಬಾಡಿಗೆ ಕೇಳಿದರೆ ಶಾಕ್ ಆಗುತ್ತೀರಿ!

ಫೆಬ್ರವರಿ 2022ರಲ್ಲಿ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಅಧ್ಯಕ್ಷ ಪುಟಿನ್ ಅವರ ಭಾರತಕ್ಕೆ ಇದು ಮೊದಲ ಅಧಿಕೃತ ಪ್ರವಾಸವಾಗಿದೆ. ಪುಟಿನ್ ಕೊನೆಯ ಬಾರಿಗೆ ಭಾರತಕ್ಕೆ 2021ರ ಡಿಸೆಂಬರ್‌ನಲ್ಲಿ ಭೇಟಿ ನೀಡಿದ್ದರು. ರಷ್ಯಾದ ಅಧ್ಯಕ್ಷರ ಭಾರತ ಭೇಟಿಯ ಸಮಯದಲ್ಲಿ ವ್ಯಾಪಾರ, ಆರ್ಥಿಕತೆ, ಆರೋಗ್ಯ ರಕ್ಷಣೆ, ಶೈಕ್ಷಣಿಕ, ಸಂಸ್ಕೃತಿ ಮತ್ತು ಮಾಧ್ಯಮದಂತಹ ಕ್ಷೇತ್ರಗಳನ್ನು ಒಳಗೊಂಡ ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ