ಬ್ರಿಕ್ಸ್‌ ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ; ರಷ್ಯಾ ಮಾಹಿತಿ

ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ (BRICS) ಶೃಂಗಸಭೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸೆಪ್ಟೆಂಬರ್ 11ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. ಮಾಸ್ಕೋದಿಂದ ವರ್ಚುವಲ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪೆಸ್ಕೋವ್, "ರಷ್ಯಾದ ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಯ ವೇಳೆ ಪ್ರಧಾನಿ ಮೋದಿಯವರೊಂದಿಗೆ ಮತ್ತೊಂದು ದ್ವಿಪಕ್ಷೀಯ ಸಭೆ ನಿಗದಿಯಾಗಿದೆ. ಶುಕ್ರವಾರ ನಡೆಯಲಿರುವ ಈ ಸಭೆಯಲ್ಲಿ ದ್ವಿಪಕ್ಷೀಯ ಸಂಬಂಧಗಳು ಹಾಗೂ ಪ್ರಮುಖ ವಿಷಯಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ" ಎಂದಿದ್ದಾರೆ.

ಬ್ರಿಕ್ಸ್‌ ಶೃಂಗಸಭೆಗೂ ಮುನ್ನ ಪ್ರಧಾನಿ ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ; ರಷ್ಯಾ ಮಾಹಿತಿ
Modi And Putin
Image Credit source: PTI

Updated on: Sep 08, 2026 | 8:37 PM

ನವದೆಹಲಿ, ಸೆಪ್ಟೆಂಬರ್ 8: ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪಾಲ್ಗೊಳ್ಳುವುದು ಖಚಿತವಾಗಿದೆ. 18ನೇ ಬ್ರಿಕ್ಸ್‌ ಶೃಂಗಸಭೆಯು ನವದೆಹಲಿಯ ಪ್ರಗತಿ ಮೈದಾನದ ‘ಭಾರತ್ ಮಂಟಪಂ’ನಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ಆಯೋಜನೆಗೊಂಡಿದೆ. ಈ ವರ್ಷದ ಜನವರಿ 1ರಂದು ಭಾರತವು ಬ್ರಿಕ್ಸ್‌ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, ಇದು ಭಾರತ ವಹಿಸಿಕೊಳ್ಳುತ್ತಿರುವ 4ನೇ ಅಧ್ಯಕ್ಷತೆಯಾಗಿದೆ.

ರಷ್ಯಾದ ಅತ್ಯಾಧುನಿಕ 5ನೇ ಜನರೇಷನ್ Su-57 ಸ್ಟೆಲ್ತ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಮಾರಾಟ ಮಾಡುವ ಕುರಿತು ಈ ದ್ವಿಪಕ್ಷೀಯ ಸಭೆಯ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ರಷ್ಯಾ ಹೇಳಿದೆ. ಆದರೆ, ಈ ಕುರಿತು ಭಾರತ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವ ಅಮೆರಿಕದ ಪ್ರಸ್ತಾವಿತ ನಿರ್ಧಾರವನ್ನು ರಷ್ಯಾ “ಅಕ್ರಮ ಮತ್ತು ಸ್ವೀಕಾರಾರ್ಹವಲ್ಲ” ಎಂದು ಕರೆದಿದೆ.

ಬ್ರಿಕ್ಸ್‌ ಶೃಂಗಸಭೆಯಲ್ಲಿ ಯಾರು ಪಾಲ್ಗೊಳ್ಳಲಿದ್ದಾರೆ?:

11 ಪ್ರಮುಖ ಪೂರ್ಣಪ್ರಮಾಣದ ಸದಸ್ಯ ರಾಷ್ಟ್ರಗಳಾದ ಭಾರತ, ರಷ್ಯಾ, ಬ್ರೆಜಿಲ್, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ, ಯುಎಇ ಮತ್ತು ಇಂಡೋನೇಷ್ಯಾ ಈ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿವೆ. ಇದಲ್ಲದೆ ಬೇಲಾರಸ್, ಮಲೇಷ್ಯಾ, ವಿಯೆಟ್ನಾಂ ಸೇರಿದಂತೆ 10 ಪಾಲುದಾರ ದೇಶಗಳು ಕೂಡ ಭಾಗವಹಿಸಲಿವೆ.

ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ ಯಶಸ್ವಿ; ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಈ ಶೃಂಗಸಭೆಯ ಆತಿಥ್ಯ ವಹಿಸಲಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಖಚಿತವಾಗಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಆಗಮಿಸುವ ನಿರೀಕ್ಷೆಯಿದೆ. ಜಿನ್‌ಪಿಂಗ್ ಆಗಮಿಸಿದರೆ, 2019ರ ಮಾಮಲ್ಲಪುರಂ ಭೇಟಿಯ ನಂತರ ಅವರು ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಲಿದೆ. ಜೊತೆಗೆ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಕೂಡ ಉಪಸ್ಥಿತರಿರಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us