Putin-Modi Meet: ಡಿಸೆಂಬರ್ 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
Putin India Visit: ರಷ್ಯಾ ಅಧ್ಯಕ್ಷ ಡಿಸೆಂಬರ್ 4ಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ. ವರದಿಗಳ ಪ್ರಕಾರ, 23 ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ. ಪುಟಿನ್ ಡಿಸೆಂಬರ್ 4 ಹಾಗೂ 5 ಒಟ್ಟು ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ. ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳ ಮೇಲೆ ಭಾರೀ ಸುಂಕ ವಿಧಿಸಿರುವುದರಿಂದ ಪುಟಿನ್ ಅವರ ಭಾರತ ಭೇಟಿ ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ.

ನವದೆಹಲಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ.ವರದಿಗಳ ಪ್ರಕಾರ, 23 ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ. ಪುಟಿನ್ ಡಿಸೆಂಬರ್ 4 ಹಾಗೂ 5 ಒಟ್ಟು ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ.
ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳ ಮೇಲೆ ಭಾರೀ ಸುಂಕ ವಿಧಿಸಿರುವುದರಿಂದ ಪುಟಿನ್ ಅವರ ಭಾರತ ಭೇಟಿ ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ.
ಇಲ್ಲಿಯವರೆಗೂ ಎರಡು ದೇಶಗಳ ನಡುವೆ 22 ಮಾತುಕತೆಗಳು ನಡೆದಿವೆ. ಪ್ರಧಾನಿ ಮೋದಿ ಕಳೆದ ವರ್ಷ ಜುಲೈನಲ್ಲಿ ಮಾಸ್ಕೋಗೆ ಭೇಟಿ ನೀಡಿದ್ದರೆ, ಪುಟಿನ್ ಕೊನೆಯ ಬಾರಿಗೆ 2021ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಈ ಬಾರಿ ಉಭಯ ದೇಶಗಳ ನಡುವೆ ಮಿಲಿಟರಿ ಮತ್ತು ತಾಂತ್ರಿಕ ಸಹಕಾರದ ಮೇಲೆ ವಿಶೇಷ ಗಮನಹರಿಸಲಾಗುತ್ತದೆ.
ಮತ್ತಷ್ಟು ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ ಭೇಟಿಯ ಮಾಹಿತಿ ಹಂಚಿಕೊಂಡ ರಷ್ಯಾ ಅಧ್ಯಕ್ಷ ಪುಟಿನ್
ಭಾರತವು ರಷ್ಯಾದಿಂದ ಹೆಚ್ಚುವರಿ S-400 ವಾಯು ರಕ್ಷಣಾ ಕ್ಷಿಪಣಿಯನ್ನು ಖರೀದಿಸಬಹುದು ಎಂದು ಹೇಳಲಾಗುತ್ತಿದೆ. ಭಾರತವು 2018 ರಲ್ಲಿ ಐದು ಘಟಕಗಳಿಗೆ 5 ಬಿಲಿಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿತು. ಅದರಲ್ಲಿ ಮೂರು ರೆಜಿಮೆಂಟ್‌ಗಳನ್ನು ಈಗಾಗಲೇ ವಿತರಿಸಲಾಗಿದೆ. ಉಳಿದ ಎರಡು ಮುಂದಿನ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನಿ ವಾಯು ದಾಳಿಯನ್ನು ತಡೆಯುವಲ್ಲಿ ರಷ್ಯಾದ S-400 ವಾಯು ರಕ್ಷಣಾ ವ್ಯವಸ್ಥೆಯು ಪ್ರಮುಖ ಪಾತ್ರ ವಹಿಸಿದೆ.
ರಷ್ಯಾದಿಂದ ತೈಲ ಖರೀದಿಸದಂತೆ ಅಮೆರಿಕ ಭಾರತವನ್ನು ನಿರಂತರವಾಗಿ ಒತ್ತಡ ಹೇರುತ್ತಿರುವ ಸಮಯದಲ್ಲಿ ಅಧ್ಯಕ್ಷ ಪುಟಿನ್ ಅವರ ಭೇಟಿ ನಡೆಯಲಿದ್ದು ಎಲ್ಲರ ಚಿತ್ತ ಅವರ ಮೇಲಿದೆ. ಅಮೆರಿಕದ ಒತ್ತಡ ಮತ್ತು ತೈಲ ಆಮದು ವಿವಾದವು ಭಾರತ-ರಷ್ಯಾ ಸಂಬಂಧಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.
ಪ್ರಧಾನಿ ಮೋದಿ ಇತ್ತೀಚೆಗೆ ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಸಮ್ಮೇಳನದಲ್ಲಿ ಪುಟಿನ್ ಅವರನ್ನು ಭೇಟಿ ಮಾಡಿದ್ದರು ಮತ್ತು ಡಿಸೆಂಬರ್‌ನಲ್ಲಿ ಅವರನ್ನು ಭಾರತಕ್ಕೆ ಸ್ವಾಗತಿಸಲು ಭಾರತೀಯರು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದರು. ಮುಂಬರುವ ಮಾತುಕತೆಗಳಲ್ಲಿ ಉಕ್ರೇನ್ ಯುದ್ಧದ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
ರಷ್ಯಾದ ತೈಲ ಆಮದುಗಳಿಗೆ ಸಂಬಂಧಿಸಿದ ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕಗಳು ಸೇರಿದಂತೆ ಜಾಗತಿಕ ಉದ್ವಿಗ್ನತೆಗಳ ನಡುವೆ ಭಾರತ-ರಷ್ಯಾ ಪಾಲುದಾರಿಕೆಯನ್ನು ಈ ಶೃಂಗಸಭೆಯು ಗಾಢವಾಗಿಸುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




