ಪ್ರವಾದಿ ಮೊಹಮ್ಮದ್​ರ ಅವಹೇಳನ: ಇಸ್ಲಾಮಿಕ್ ದೇಶಗಳಿಂದ ಆಕ್ಷೇಪ, ಭಾರತದ ಉತ್ಪನ್ನ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ

ಭಾರತದಲ್ಲಿ ತಯಾರಾಗುವ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಕರೆ ನೀಡಿದ್ದಾರೆ.

ಪ್ರವಾದಿ ಮೊಹಮ್ಮದ್​ರ ಅವಹೇಳನ: ಇಸ್ಲಾಮಿಕ್ ದೇಶಗಳಿಂದ ಆಕ್ಷೇಪ, ಭಾರತದ ಉತ್ಪನ್ನ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕರೆ
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 06, 2022 | 8:11 AM

ದೆಹಲಿ: ಇಸ್ಲಾಂ ಧರ್ಮ ಸ್ಥಾಪಕರಾದ ಪ್ರವಾದಿ ಮೊಹಮದ್​ರ​ (Prophet Muhammad)  ಬಗ್ಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ (Nupur Sharma) ನೀಡಿದ್ದ ವಿವಾದಾತ್ಮಕ ಹೇಳಿಕೆ ಜಾಗತಿಕ ಮಟ್ಟದಲ್ಲಿ ಭಾರತ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಕತಾರ್, ಕುವೈತ್ ಮತ್ತು ಇರಾನ್ ಸರ್ಕಾರಗಳು ಆ ದೇಶಗಳ ಭಾರತೀಯ ರಾಯಭಾರಿಗಳನ್ನು ಕರೆಸಿ, ಆಕ್ಷೇಪ ವ್ಯಕ್ತಪಡಿಸಿವೆ. ಭಾರತದಲ್ಲಿ ತಯಾರಾಗುವ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಹಲವರು ಕರೆ ನೀಡಿದ್ದಾರೆ. ಪ್ರವಾದಿ ಮೊಹಮದ್​ ಮತ್ತು ಅವರ ಪತ್ನಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ. ‘ಬಿಜೆಪಿಯು ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. ನೂಪುರ್ ಅವರ ಹೇಳಿಕೆಯು ಪಕ್ಷದ ನಿಲುವಲ್ಲ’ ಎಂದು ಬಿಜೆಪಿಯ ಹಿರಿಯ ನಾಯಕ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಈ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಇಸ್ಲಾಮಿಕ್ ದೇಶಗಳ ವಲಯದಲ್ಲಿ ಭಾರತ ಬೆಳೆಸಿಕೊಂಡಿದ್ದ ಪ್ರಭಾವಕ್ಕೂ ಧಕ್ಕೆ ತಂದಿದೆ. ಈ ಪ್ರಕರಣದ 10 ಪ್ರಮುಖ ಬೆಳವಣಿಗೆಗಳು ಇಲ್ಲಿವೆ…

  1. ಭಾರತದ ರಾಯಭಾರಿ ದೀಪಕ್ ಮಿತ್ತಲ್ ಅವರ ಬಳಿ ತನ್ನ ಆಕ್ಷೇಪ ದಾಖಲಿಸಿದ ಪ್ರಮುಖ ತೈಲ ಉತ್ಪಾದನೆ ರಾಷ್ಟ್ರ ಕತಾರ್, ‘ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಮಾಡುವ ಇಂಥ ಹೇಳಿಕೆ ಕೊಟ್ಟವರಿಗೆ ಶಿಕ್ಷೆ ನೀಡಬೇಕು. ಇದನ್ನು ಶಿಕ್ಷಿಸದೆ ಬಿಡುವುದರಿಂದ ಮುಂದಿನ ದಿನಗಳಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಅಪಾಯವಾಗಬಹುದು. ಮತ್ತಷ್ಟು ಪೂರ್ವಗ್ರಹಗಳು ಬೆಳೆಯುವುದರೊಂದಿಗೆ ದ್ವೇಷ ಮತ್ತು ಹಿಂಸಾಚಾರಗಳ ವಿಷವೃತ್ತ ಬೆಳೆಯಬಹುದು ಎಂದು ಎಚ್ಚರಿಸಿದೆ.
  2. ಇಂಥ ಅವಹೇಳನಕಾರಿ ಹೇಳಿಕೆ ಬಗ್ಗೆ ಸಾರ್ವಜನಿಕ ಕ್ಷಮೆ ಕೇಳಬೇಕು. ಇದನ್ನು ಹೀಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ತೀವ್ರವಾದ ಹೆಚ್ಚಾಗುವ ಅಪಾಯವಿದೆ. ಆಧುನಿಕ ಸಮಾಜದಲ್ಲಿ ದ್ವೇಷ ಹರಡುವವರ ಬಗ್ಗೆ ಸರ್ಕಾರ ಕಠಿಣ ನಿಲುವು ತಳೆಯಬೇಕು ಎಂದು ಕುವೈತ್ ಆಗ್ರಹಿಸಿದೆ.
  3. ಇರಾನ್ ವಿದೇಶಾಂಗ ಇಲಾಖೆ ರಾಜಧಾನಿ ತೆಹರಾನ್​ನಲ್ಲಿರುವ ಭಾರತದ ರಾಯಭಾರಿಯನ್ನು ಕಚೇರಿಗೆ ಕರೆಸಿಕೊಂಡು ಆಕ್ಷೇಪ ವ್ಯಕ್ತಪಡಿಸಿತು. ‘ಭಾರತದ ಟಿವಿ ಷೋ ಒಂದರಲ್ಲಿ ಪ್ರವಾದಿ ಮೊಹಮದ್​ರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ತಪ್ಪು’ ಎಂದು ತಾಕೀತು ಮಾಡಿತು.
  4. ‘ಪ್ರವಾದಿ ಮೊಹಮ್ಮದ್​ರ ಬಗ್ಗೆ ಭಾರತ ಸರ್ಕಾರ ಅವಹೇಳನ ಮಾಡಿಲ್ಲ. ನೂಪುರ್ ಶರ್ಮಾರ ಹೇಳಿಕೆಯು ಭಾರತದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಅದು ವ್ಯಕ್ತಿಯೊಬ್ಬರ ವೈಯಕ್ತಿಕ ಹೇಳಿಕೆ’ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಇಂಥ ಆಕ್ಷೇಪಾರ್ಹ ಹೇಳಿಕೆ ನೀಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
  5. ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಪ್ರಸ್ತುತ ಕತಾರ್ ಪ್ರವಾಸದಲ್ಲಿದ್ದಾರೆ. ಕತಾರ್ ಪ್ರಧಾನಿ ಶೇಖ್ ಖಾಲಿದ್ ಅವರನ್ನು ಭೇಟಿಯಾದ ಸಂದರ್ಭದಲ್ಲಿಯೇ ಅಲ್ಲಿನ ಆಡಳಿತ ತನ್ನ ಆಕ್ಷೇಪವನ್ನು ದಾಖಲಿಸಿದೆ.
  6. ದೇಶದ ವಿವಿಧೆಡೆ ನಡೆದಿದ್ದ ಕೋಮು ಸೌಹಾರ್ದ ಕದಡುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿವಿ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದರ್​ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಮತ್ತೋರ್ವ ಬಿಜೆಪಿ ನಾಯಕ ನವೀನ್ ಜಿಂದಾರ್ ಪ್ರವಾದಿ ಅವರ ಬಗ್ಗೆ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದರು. ನಂತರ ಅದನ್ನು ಡಿಲೀಟ್ ಮಾಡಲಾಗಿತ್ತು.
  7. ಪಕ್ಷದ ಸೂಚನೆ ಮೇರೆಗೆ ಇವರಿಬ್ಬರೂ ತಮ್ಮ ಹೇಳಿಕೆಗಳನ್ನು ಹಿಂದಕ್ಕೆ ಪಡೆದಿದ್ದರು. ಬಿಜೆಪಿಯಿಂದ ಇವರಿಬ್ಬರನ್ನೂ ಹೊರ ಹಾಕಲಾಗಿತ್ತು.
  8. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆಯು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿತ್ತು. ಶುಕ್ರವಾರದ ಪ್ರಾರ್ಥನೆಯ ನಂತರ ಕಾನ್​ಪುರದಲ್ಲಿ ಗುಂಪು ಘರ್ಷಣೆಗಳು ನಡೆದಿದ್ದವು.
  9. ಪ್ರಕರಣದ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಿರುವ ಬಿಜೆಪಿ, ‘ಈ ಹೇಳಿಕೆಯನ್ನು ಪಕ್ಷವು ಒಪ್ಪುವುದಿಲ್ಲ. ಯಾವುದೇ ಧರ್ಮ ಅಥವಾ ಪಂಥದ ಅವಹೇಳನವನ್ನು ಸರ್ಕಾರವು ಒಪ್ಪುವುದಿಲ್ಲ. ಇಂಥ ಯಾವುದೇ ವ್ಯಕ್ತಿ ಅಥವಾ ತತ್ವಕ್ಕೆ ಪಕ್ಷವು ಪ್ರೋತ್ಸಾಹ ನೀಡುವುದಿಲ್ಲ’ ಎಂದು ಹೇಳಿತ್ತು.
  10. ಬಿಜೆಪಿ ಹೇಳಿಕೆಯನ್ನು ತಳ್ಳಿ ಹಾಕಿರುವ ಕಾಂಗ್ರೆಸ್, ‘ಇದು ಬಿಜೆಪಿಯ ಅನಾಹುತ ನಿರ್ವಹಣೆ (Damage Control) ಪ್ರಯತ್ನವಷ್ಟೇ ಅಗಿದೆ’ ಎಂದು ಟೀಕಿಸಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್