AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗದಲ್ಲಿ ಎಸ್​ಸಿ ಎಸ್​ಟಿ ಒಳಮೀಸಲಾತಿಗೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ ಕೋರ್ಟ್

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪು ನೀಡಿದೆ.

ಸರ್ಕಾರಿ ಉದ್ಯೋಗದಲ್ಲಿ ಎಸ್​ಸಿ ಎಸ್​ಟಿ ಒಳಮೀಸಲಾತಿಗೆ ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on:Aug 01, 2024 | 12:22 PM

Share

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ತೀರ್ಪು ನೀಡಿದೆ. ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತಿತರರ ವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್​ ಫೆಬ್ರವರಿ 8ರಂದು ಆದೇಶವನ್ನು ಕಾಯ್ದಿರಿಸಿತ್ತು. ಇದು ಪರಿಶಿಷ್ಟ ಜಾತಿಗಳನ್ನು ಗುರುತಿಸಲು 341 ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ವಿಶೇಷ ಅಧಿಕಾರವನ್ನು ಉಲ್ಲಂಘಿಸುವುದಿಲ್ಲ. ಉಪ-ವರ್ಗೀಕರಿಸುವ ರಾಜ್ಯಗಳ ಅಧಿಕಾರವು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಅದು ಹೇಳಿದೆ.

ಏಳು ನ್ಯಾಯಾಧೀಶರ ಪೀಠದ ತೀರ್ಪು ಅರುಂತಥಿಯಾರ್ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ತಮಿಳುನಾಡು ವಿಧಾನಸಭೆಯ ಶಾಸಕಾಂಗ ಸಾಮರ್ಥ್ಯಕ್ಕೆ ಹಸಿರು ನಿಶಾನೆ ತೋರಿಸಿದೆ.

ಮತ್ತಷ್ಟು ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಶ್ರೀಮಂತ ಹಿಂದುಳಿದ ವರ್ಗಗಳಿಗೆ ಕೋಟಾದ ಪ್ರಯೋಜನಗಳನ್ನು ನೀಡುವುದನ್ನು ಮುಂದುವರಿಸುವುದು ಮೀಸಲಾತಿಯ ಉದ್ದೇಶವನ್ನೇ ವಿಫಲಗೊಳಿಸುತ್ತದೆ. ಮೀಸಲಾತಿಯ ಲಾಭದ ಮೇಲೆ ಸವಾರಿ ಮಾಡುವ ಶ್ರೀಮಂತ ಸ್ಥಾನವನ್ನು ತಲುಪಿದ ಜನರನ್ನು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ವಂಚಿತರನ್ನಾಗಿ ಪರಿಗಣಿಸಲಾಗುವುದಿಲ್ಲ.

ಅವರು ಈಗಾಗಲೇ ಮೀಸಲಾತಿಯ ನಿಬಂಧನೆಗಳಿಂದ ಹೊರನಡೆಯುವ ಹಂತವನ್ನು ತಲುಪಿದ್ದಾರೆ ಮತ್ತು ಎಸ್‌ಸಿ, ಎಸ್‌ಟಿಯ ಹೆಚ್ಚು ಅರ್ಹ ವರ್ಗಗಳಿಗೆ ದಾರಿ ಮಾಡಿಕೊಡಬೇಕು ಎಂಬುದನ್ನು ಒತ್ತಿ ಹೇಳಿದರು.

ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳ ವರ್ಗೀಕರಣ ತರುವುದಕ್ಕೆ ತನ್ನ ಬೆಂಬಲ ಇದೆ ಎಂದು ಈ ಮೊದಲೇ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್​ಗೆ ತಿಳಿಸಿತ್ತು.

ಒಳ ವರ್ಗೀಕರಣವು ಮೀಸಲಾತಿಯ ಉದ್ದೇಶದಿಂದ ಮುಂದಕ್ಕೆ ಒಯ್ಯಲು ನೆರವಾಗುತ್ತದೆ ಎಂದು ಕೇಂದ್ರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದರು. ಇವಿ ಚಿನ್ನಯ್ಯ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ ತೀರ್ಪು ವಿರೋಧಿಸುವುದಾಗಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:48 am, Thu, 1 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ