AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್ ಕುರಿತು ಹಿಮಾಚಲ ಸಚಿವರ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ; ಕ್ಷಮೆ ಯಾಚಿಸಲ್ಲ ಎಂದ ಜಗತ್ ಸಿಂಗ್

‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನವನ್ನು ಎದುರಿಸಲು ಭಾರತಕ್ಕೆ ಕಠಿಣ ಸಮಯ ಎದುರಾಗಿತ್ತು ಎಂದು ಹೇಳುವ ಮೂಲಕ ಹಿಮಾಚಲ ಪ್ರದೇಶದ ಸಚಿವ ಜಗತ್ ಸಿಂಗ್ ನೇಗಿ ವಿಧಾನಸಭೆಯಲ್ಲಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಇಂದು ಅಧಿವೇಶನದಲ್ಲಿ ಮಾತನಾಡಿದ ನೇಗಿ, ಡಸಾಲ್ಟ್ ಏವಿಯೇಷನ್‌ನ ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಪ್ರತಿ ವಿಮಾನಕ್ಕೆ 700 ಕೋಟಿ ರೂ. ಬದಲಾಗಿ ಭಾರತ 2,300 ಕೋಟಿ ರೂ. ಪಾವತಿಸಿದೆ ಎಂದು ಆರೋಪಿಸಿದ ಅವರು, "ಆ ಯುದ್ಧ ವಿಮಾನಗಳು ನಿಷ್ಪ್ರಯೋಜಕವೆಂದು ಸಾಬೀತಾದವು. ಇದರ ಪರಿಣಾಮವಾಗಿ ಭಾರತವು ಪಾಕಿಸ್ತಾನವನ್ನು ಎದುರಿಸಲು ಕಠಿಣ ಸಮಯವನ್ನು ಎದುರಿಸಬೇಕಾಯಿತು" ಎಂದು ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಕುರಿತು ಹಿಮಾಚಲ ಸಚಿವರ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ; ಕ್ಷಮೆ ಯಾಚಿಸಲ್ಲ ಎಂದ ಜಗತ್ ಸಿಂಗ್
ಜಗತ್ ಸಿಂಗ್ ನೇಗಿ
ಸುಷ್ಮಾ ಚಕ್ರೆ
|

Updated on: Nov 19, 2026 | 8:22 PM

Share

ಶಿಮ್ಲಾ, ನವೆಂಬರ್ 19: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಸಂದರ್ಭದಲ್ಲಿ ರಫೇಲ್ ಯುದ್ಧ ವಿಮಾನಗಳು ನಿಷ್ಪ್ರಯೋಜಕವೆಂದು ಸಾಬೀತಾದವು ಮತ್ತು ಪಾಕಿಸ್ತಾನವನ್ನು ಎದುರಿಸಲು ಭಾರತಕ್ಕೆ ಕಠಿಣ ಸಮಯ ಎದುರಾಗಿತ್ತು ಎಂದು ಹಿಮಾಚಲ ಪ್ರದೇಶದ ಕಂದಾಯ ಸಚಿವ ಜಗತ್ ಸಿಂಗ್ ನೇಗಿ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷ ಬಿಜೆಪಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಿಮಾಚಲ ಪ್ರದೇಶ ವಿಧಾನಸಭೆ ಅಧಿವೇಶನದ ವೇಳೆ ಭ್ರಷ್ಟಾಚಾರದ ಕುರಿತು ಚರ್ಚಿಸಲು ಬಿಜೆಪಿ ನಿಲುವಳಿ ಸೂಚನೆ ಮಂಡಿಸಿದಾಗ ಪ್ರತಿಕ್ರಿಯಿಸಿದ ಸಚಿವ ಜಗತ್ ಸಿಂಗ್ ನೇಗಿ, ಡಸಾಲ್ಟ್ ಏವಿಯೇಷನ್‌ನ ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಪ್ರತಿ ವಿಮಾನಕ್ಕೆ 700 ಕೋಟಿ ರೂ. ಬದಲಿಗೆ ಭಾರತ 2,300 ಕೋಟಿ ರೂ. ಪಾವತಿಸಿದೆ ಎಂದ ನೇಗಿ, ಆ ವಿಮಾನಗಳು ನಿಷ್ಪ್ರಯೋಜಕವೆಂದು ಸಾಬೀತಾದವು ಹಾಗೂ ಇದರಿಂದಾಗಿ ‘ಆಪರೇಷನ್ ಸಿಂಧೂರ್’ ವೇಳೆ ಭಾರತವು ಪಾಕಿಸ್ತಾನವನ್ನು ಎದುರಿಸಲು ಕಠಿಣ ಪರಿಸ್ಥಿತಿ ಎದುರಿಸಬೇಕಾಯಿತು ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ತಿಳಿಸಿರುವ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ.

ಸದನದ ಕಡತದಿಂದ ತೆಗೆದುಹಾಕಲು ಬಿಜೆಪಿ ಪಟ್ಟು:

ಹಿಮಾಚಲ ಪ್ರದೇಶದ ಸಚಿವರ ಹೇಳಿಕೆಯನ್ನು ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಎಂದು ಖಂಡಿಸಿರುವ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಈ ವಿವಾದಾತ್ಮಕ ಹೇಳಿಕೆಗಳನ್ನು ವಿಧಾನಸಭೆಯ ಕಲಾಪದ ಕಡತದಿಂದ ತಕ್ಷಣವೇ ತೆಗೆದುಹಾಕಬೇಕು ಎಂದು ಸ್ಪೀಕರ್​ಗೆ ಒತ್ತಾಯಿಸಿದ್ದಾರೆ. ಕಡತದಿಂದ ತೆಗೆದುಹಾಕದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಬೆಟ್ಟದಷ್ಟು ಸಾಲ; ಬೆಟ್ಟದಷ್ಟು ಕನಸು; ವಿಶ್ವದ 6ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗುವ ಗುರಿ

ವಿಧಾನಸಭೆಯ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ವೀರ ಯೋಧರ ನಾಡಾದ ಹಿಮಾಚಲ ಪ್ರದೇಶದಲ್ಲಿ ಕುಳಿತು ಸಚಿವರು ಸೇನೆಯ ಕಾರ್ಯಾಚರಣೆಯನ್ನು ಪ್ರಶ್ನಿಸಿರುವುದು ಖಂಡನೀಯ ಎಂದಿದ್ದಾರೆ. ಬಿಜೆಪಿ ಶಾಸಕ ಸುಧೀರ್ ಶರ್ಮಾ ಮಾತನಾಡಿ, ಇಂತಹ ಅಭಿಪ್ರಾಯ ಹೊಂದಿರುವ ನೇಗಿ ಲಾಹೋರ್‌ಗೆ ಹೋಗಲಿ ಎಂದು ಕಿಡಿಕಾರಿದ್ದಾರೆ.

ಆದರೆ, ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ರಫೇಲ್ ವಿಮಾನಗಳ ಕಾರ್ಯಕ್ಷಮತೆಯ ಕುರಿತು ತಾವು ನೀಡಿದ ಹೇಳಿಕೆಗೆ ಜಗತ್ ಸಿಂಗ್ ನೇಗಿ ಬದ್ಧರಾಗಿದ್ದು, ಬಿಜೆಪಿಯ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
‘ಕಲಾವಿದರ ಸಂಘದಲ್ಲಿ ಯಾರೂ ಇರಲ್ಲ’: ಆರೋಪಕ್ಕೆ ರಾಕ್​ಲೈನ್ ವೆಂಕಟೇಶ್ ಉತ್ತರ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ನಿವಾಸದ ಮೇಲೆ ಎಸ್ಐಟಿ ದಾಳಿ
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು
ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ: ಕಾಂಗ್ರೆಸ್​​ ಮುಖಂಡ ಶರಣು