
ನವದೆಹಲಿ, ಏಪ್ರಿಲ್ 24: ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದ ಆಮ್ ಆದ್ಮಿ ಪಕ್ಷದ (AAm Aadmi Party) ವಿರುದ್ಧ ಪಕ್ಷದೊಳಗೇ ಅಸಮಾಧಾನ ಉಂಟಾಗಿತ್ತು. ಈ ಬಗ್ಗೆ ರಾಘವ್ ಚಡ್ಡಾ ಅವರೂ ವಿಡಿಯೋ ಸಂದೇಶದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೀಗ ತಾವು ತೆಗೆದುಕೊಂಡ ನಿರ್ಧಾರಕ್ಕೆ ಅರವಿಂದ್ ಕೇಜ್ರಿವಾಲ್ ಭಾರೀ ಬೆಲೆ ತೆರುವಂತಾಗಿದೆ. ಏಕೆಂದರೆ, ರಾಘವ್ ಚಡ್ಡಾ (Raghav Chadha) ಸೇರಿದಂತೆ ಒಟ್ಟು 7 ಸಂಸದರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಜೊತೆ ಸೇರುವುದಾಗಿ ಘೋಷಿಸಿದ್ದಾರೆ. ಇದರಿಂದ ಕೇಜ್ರಿವಾಲ್ಗೆ ಭಾರೀ ಹೊಡೆತ ಬಿದ್ದಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಪ್ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಲ್ಲಿ 2/3ರಷ್ಟು ಜನರು ಬಿಜೆಪಿಯೊಂದಿಗೆ ವಿಲೀನವಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಇಂದು ಕೇಜ್ರಿವಾಲ್ ಅವರನ್ನು ತೀವ್ರವಾಗಿ ಕೆಣಕುವ ರೀತಿಯಲ್ಲಿ ಎಎಪಿ ತೊರೆದು ಬಿಜೆಪಿಗೆ ಸೇರಿದ್ದಾರೆ.
#WATCH | Delhi: Rajya Sabha MPs Raghav Chadha, Sandeep Pathak and Ashok Mittal arrive at the BJP headquarters
2/3rd MPs of AAP in the Rajya Sabha announced merging with the BJP. pic.twitter.com/qDc6HZ9zvr
— ANI (@ANI) April 24, 2026
ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3ನೇ ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ನಮ್ಮನ್ನು ವಿಲೀನಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ
ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
आम आदमी पार्टी के सांसद राघव चड्ढा जी ने दो तिहाई सांसदों के साथ किया भाजपा में विलय करने का ऐलान@raghav_chadha @BJP4India pic.twitter.com/q0ijrPXwZd
— Haryana BJP (@BJP4Haryana) April 24, 2026
ರಾಘವ್ ಚಡ್ಡಾ ಅವರು, “ನಾನು ನನ್ನ ರಕ್ತ ಮತ್ತು ಬೆವರಿನಿಂದ ಆಮ್ ಆದ್ಮಿ ಪಕ್ಷವನ್ನು ಪೋಷಿಸಿ ನನ್ನ ಯೌವನದ 15 ವರ್ಷಗಳನ್ನು ಆ ಪಕ್ಷಕ್ಕಾಗಿ ನೀಡಿದ್ದೆ. ಆದರೆ, ಆ ಆಮ್ ಆದ್ಮಿ ಪಕ್ಷವು ಈಗ ಅದರ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ಸಂಪೂರ್ಣವಾಗಿ ವಿಮುಖವಾಗಿದೆ. ಪಕ್ಷವು ಈಗ ದೇಶಕ್ಕಾಗಿ ಅಥವಾ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಕೇವಲ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ನಿಮ್ಮಲ್ಲಿ ಹಲವರು ಕಳೆದ ಕೆಲವು ವರ್ಷಗಳಿಂದ ಇದನ್ನು ನನಗೆ ಹೇಳುತ್ತಲೇ ಇದ್ದೀರಿ. ನಾನು ತಪ್ಪಾದ ಪಕ್ಷದಲ್ಲಿರುವ ಸರಿಯಾದ ವ್ಯಕ್ತಿ ಎಂದು ನಿಮ್ಮಂತೆ ನಾನು ಕೂಡ ಭಾವಿಸಿದ್ದೇನೆ. ಆದ್ದರಿಂದ, ಇಂದು ನಾನು ಆಮ್ ಆದ್ಮಿ ಪಕ್ಷದಿಂದ ದೂರವಿದ್ದು ಜನರ ಬಳಿಗೆ ಹೋಗುತ್ತಿದ್ದೇನೆ ಎಂದು ಘೋಷಿಸುತ್ತೇನೆ” ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆಯಲ್ಲಿ ರಾಘವ್ ಚಡ್ಡಾರನ್ನು ಪಕ್ಷದ ಹಂಗಾಮಿ ನಾಯಕರನ್ನಾಗಿ ನೇಮಿಸುವಂತೆ ಎಎಪಿ ಮನವಿ ತಿರಸ್ಕೃತ
“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.
#WATCH | Delhi: Addressing a press conference with Sandeep Pathak and Ashok Mittal, AAP MP Raghav Chadha says, “We have decided that we, the 2/3rd members belonging to the AAP in Rajya Sabha, exercise the provisions of the Constitution of India and merge ourselves with the BJP.” pic.twitter.com/K3IK4TPXml
— ANI (@ANI) April 24, 2026
“ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ, ಅವರಲ್ಲಿ 2/3ಕ್ಕಿಂತ ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಅವರು ಸಹಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ. ಅವರಲ್ಲಿ ಮೂವರು ನಿಮ್ಮ ಮುಂದೆ ಇದ್ದಾರೆ. ನಮ್ಮ ಜೊತೆಗೆ, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ, ವಿಕ್ರಮ್ ಸಾಹ್ನಿ ಮತ್ತು ಸ್ವಾತಿ ಮಲಿವಾಲ್ ಇದ್ದಾರೆ.” ಎಂದು ರಾಘವ್ ಚಡ್ಡಾ ಘೋಷಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:41 pm, Fri, 24 April 26