Raghav Chadha: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು
ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನ್ನ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೆಸರು ಸೇರಿಸಿದೆ ಎಂದು ಹೇಳಿದೆ.
ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor policy case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ತನ್ನ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಪಕ್ಷದ (Aam Aadmi Party) ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೆಸರು ಸೇರಿಸಿದೆ ಎಂದು ಹೇಳಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ(Raghav Chadha) ಅವರನ್ನು ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಉಲ್ಲೇಖಿಸಿದೆ. ಆರೋಪಿಯಾಗಿಲ್ಲದಿದ್ದರೂ ಸಂಸದರ ಹೆಸರನ್ನು ತನಿಖಾ ಸಂಸ್ಥೆಯು ಪೂರಕ ಚಾರ್ಜ್ ಶೀಟ್‌ನಲ್ಲಿ ಸೇರಿಸಿದೆ.
ಚಾರ್ಜ್ ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಸೇರಿ ಪಕ್ಷದ ಇತರ ನಾಯಕರನ್ನು ಹೆಸರಿಸಲಾಗಿದೆ. ಬಂಧಿತ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಘವ್ ಚಡ್ಡಾ ಭಾಗವಹಿಸಿದ್ದರು, ಇದೀಗ ರದ್ದುಗೊಂಡಿರುವ ಮದ್ಯ ನೀತಿಯನ್ನು ತರುವ ಯೋಜನೆಯ ಬಗ್ಗೆ ಉದ್ಯಮಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಇದನ್ನೂ ಓದಿ: Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ
ದೆಹಲಿಯಲ್ಲಿ ಹೊಸ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮವಾಗಿದೆ ಎಂದು ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಇ.ಡಿ ಅನೇಕರ ಹೆಸರನ್ನು ಚಾರ್ಜ್ ಶೀಟ್ ಹೆಸರಿಸಿದೆ.
Published On - 12:50 pm, Tue, 2 May 23