Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ

ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ
ರಾಹುಲ್ ಬಜಾಜ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Feb 12, 2022 | 4:32 PM

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ (Bajaj Group) ಚೇರ್ಮನ್ ರಾಹುಲ್ ಬಜಾಜ್ (Rahul Bajaj) ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

1938ರ ಜೂನ್ 10ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

ರಾಹುಲ್ ಬಜಾಜ್ ಅವರಿಗೆ 2001ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ರಾಹುಲ್ ಬಜಾಜ್ ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಪಲ್ಸರ್ ಸರಣಿಯ ಪಲ್ಸರ್ ಎಫ್250 ಮತ್ತು ಎನ್250 ಬೈಕ್ ಗಳನ್ನು ಬಿಡುಗಡೆ ಮಾಡಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

Published On - 4:21 pm, Sat, 12 February 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ