AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ

ರಾಹುಲ್ ಗಾಂಧಿ ಅವರ ಆಪ್ತ ಸಹಾಯಕನೆಂದು ಹೇಳಿಕೊಂಡು ರಾಜಕಾರಣಿಗಳು ಹಾಗೂ ಟಿಕೆಟ್ ಆಕಾಂಕ್ಷಿಗಳಿಗೆ ವಂಚಿಸುತ್ತಿದ್ದ ಬೃಹತ್ ಜಾಲವನ್ನು ಡೆಹ್ರಾಡೂನ್ ಪೊಲೀಸರು ಭೇದಿಸಿದ್ದಾರೆ. ಅಮೃತಸರದ ಗೌರವ್ ಕುಮಾರ್ ಎಂಬಾತ, ಉನ್ನತ ಹುದ್ದೆ ಹಾಗೂ ಟಿಕೆಟ್ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ. ಉತ್ತರಾಖಂಡ, ರಾಜಸ್ಥಾನ, ಬಿಹಾರದ ನಾಯಕರಿಗೆ ವಂಚಿಸಿ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ, ತನಿಖೆ ಮುಂದುವರಿಸಲಾಗಿದೆ.

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ
ಆರೋಪಿImage Credit source: India Today
ನಯನಾ ರಾಜೀವ್
|

Updated on: May 06, 2026 | 9:21 AM

Share

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ ಕಾನೀಶ್ ಸಿಂಗ್ ಎಂದು ಹೇಳಿಕೊಂಡಿದ್ದ ಗೌರವ್ ಕುಮಾರ್, ಪಕ್ಷದೊಳಗೆ ಉನ್ನತ ಹುದ್ದೆ ಕೊಡಿಸುವುದಾಗಿ ನಂಬಿಸಿ ಭಾವನಾ ಅವರಿಂದ 25 ಲಕ್ಷ ರೂಪಾಯಿ ಪಡೆದು ಫೋನ್ ಸ್ವಿಚ್ ಆಫ್ ಮಾಡಿದ್ದ. ವಿಶ್ವಾಸಾರ್ಹತೆ ಹೆಚ್ಚಿಸಲು ಟ್ರೂಕಾಲರ್‌ನಲ್ಲಿ ಕನಿಷ್ಕ್ ಸಿಂಗ್ ಎಂಬ ನಕಲಿ ಪ್ರೊಫೈಲ್ ಬಳಸುತ್ತಿದ್ದ.

ರಾಜಕೀಯ ವೆಬ್‌ಸೈಟ್‌ಗಳಿಂದ ಉತ್ತರಾಖಂಡ, ರಾಜಸ್ಥಾನ ಮತ್ತು ಬಿಹಾರದ ಪ್ರಭಾವಿ ನಾಯಕರ ಮಾಹಿತಿಯನ್ನು ಕಲೆಹಾಕುತ್ತಿದ್ದ. ಹೈಕಮಾಂಡ್‌ನೊಂದಿಗೆ ನೇರ ಸಂಪರ್ಕವಿದೆ ಎಂದು ಬಿಂಬಿಸಿಕೊಂಡು, ಚುನಾವಣಾ ಟಿಕೆಟ್ ಅಥವಾ ಉನ್ನತ ಹುದ್ದೆಗಳ ಆಸೆ ತೋರಿಸಿ ಹಣ ಪಡೆಯುತ್ತಿದ್ದ.

ಪೊಲೀಸ್ ವಿಚಾರಣೆಯ ವೇಳೆ ಆರೋಪಿಯು ತನ್ನ ವಂಚನೆಯನ್ನು ಒಪ್ಪಿಕೊಂಡಿದ್ದಾನೆ. ಜೈಪುರದಲ್ಲಿ ಇಬ್ಬರು ರಾಜಕಾರಣಿಗಳಿಗೆ ಕ್ರಮವಾಗಿ 1.90 ಕೋಟಿ ರೂ. ಮತ್ತು 12 ಲಕ್ಷ ರೂ. ವಂಚನೆ ಮಾಡಿದ್ದಾನೆ. ಪಾಟ್ನಾ ಮೂಲದ ನಾಯಕನಿಂದ 3 ಲಕ್ಷ ರೂ. ಲೂಟಿ, ಡೆಹ್ರಾಡೂನ್​ನ ಭಾವನಾ ಪಾಂಡೆ ಅವರಿಗೆ 25 ಲಕ್ಷ ರೂ. ವಂಚನೆ ಮಾಡಿದ್ದಾನೆ.

ಮತ್ತಷ್ಟು ಓದಿ: ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಡೆಹ್ರಾಡೂನ್‌ನ ಮಾಲ್‌ ಒಂದರಲ್ಲಿ ಮತ್ತೊಬ್ಬ ನಾಯಕನಿಂದ ಹಣ ಸಂಗ್ರಹಿಸಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸರು ಸಿಸಿಟಿವಿ ಮತ್ತು ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಈತನನ್ನು ಸೆರೆಹಿಡಿದಿದ್ದಾರೆ. ಈತನೊಂದಿಗೆ ಚಜ್ಜು, ರಜತ್ ಮಾದ ಮತ್ತು ಮಣಿಂದರ್ ಸಿಂಗ್ ಎಂಬ ಸಹಚರರು ಕೂಡ ಕೆಲಸ ಮಾಡುತ್ತಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ.

ಪ್ರತಿಷ್ಠೆಗೆ ಹೆದರಿ ಅನೇಕರು ಈತನ ವಿರುದ್ಧ ದೂರು ನೀಡಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ಆರೋಪಿಯಿಂದ ಎರಡು ಫೋನ್ ಮತ್ತು ಡೇಟಾ ಡಾಂಗಲ್ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ರಾಜಕೀಯ ಆಕಾಂಕ್ಷಿಗಳು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕೆಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ