AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೂ ನಡೆದಿದೆ ಚುನಾವಣಾ ಅಕ್ರಮ, ಶೀಘ್ರ ಸಾಕ್ಷ್ಯ ಕೊಡ್ತೇನೆ ಎಂದ ರಾಹುಲ್ ಗಾಂಧಿ

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಗದ್ದಲದ ನಡುವೆಯೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಮತಗಳನ್ನು ಕದಿಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅದಕ್ಕೆ ಕರ್ನಾಟಕದ ಉದಾಹರಣೆ ನೀಡಿದ್ದಾರೆ. ಕರ್ನಾಟಕದ ಲೋಕಸಭಾ ಕ್ಷೇತ್ರವನ್ನು ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷವು ಮತ ಕಳ್ಳತನದ ವಿಧಾನವನ್ನು ಕಂಡುಹಿಡಿದಿದೆ ಎಂದು ಹೇಳಿದ್ದಾರೆ. ನಾವು ಅವರ ಆಟವನ್ನು ಅರ್ಥಮಾಡಿಕೊಂಡಿದ್ದೇವೆಂದು ಅವರಿಗೆ ತಿಳಿದಿದೆ. ನಾವು ಒಂದು ಕ್ಷೇತ್ರವನ್ನು ಆರಿಸಿಕೊಂಡು ಆಳವಾಗಿ ಅಧ್ಯಯನ ಮಾಡಿದೆವು ಎಂದು ರಾಹುಲ್ ಹೇಳಿದ್ದಾರೆ.

ಕರ್ನಾಟಕದಲ್ಲೂ ನಡೆದಿದೆ ಚುನಾವಣಾ ಅಕ್ರಮ, ಶೀಘ್ರ ಸಾಕ್ಷ್ಯ ಕೊಡ್ತೇನೆ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on:Jul 24, 2025 | 7:55 AM

Share

ನವದೆಹಲಿ, ಜುಲೈ 24: ಕರ್ನಾಟಕದ ಚುನಾವಣೆ(Karnataka Election)ಯಲ್ಲೂ ಮತ ಕಳವು ನಡೆದಿದೆ, ಶೀಘ್ರವೇ ಸಾಕ್ಷ್ಯಗಳನ್ನು ನೀಡುವುದಾಗಿ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ಮುಂಗಾರು ಸಂಸತ್​ ಅಧಿವೇಶನದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಮಾತನಾಡಿರುವ ಅವರು, ಕರ್ನಾಟಕದ ಉದಾಹರಣೆ ನೀಡಿದರು. ಯಾವ ರೀತಿ ಮತಕಳವು ಮಾಡಲು ಸಾಧ್ಯ ಎನ್ನುವುದನ್ನು ದೇಶದ ಜನರ ಮತ್ತು ಕೇಂದ್ರ ಚುನಾವಣಾ ಆಯೋಗದ ಮುಂದೆ ಇಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆಯ ಬಗ್ಗೆ ನಾವು ಆಳವಾದ ಅಧ್ಯಯನ ನಡೆಸಿದ್ದೇವೆ. ಬೋಗಸ್ ವೋಟಿಂಗ್ ಬಗ್ಗೆ ಮಾಹಿತಿ ನಮಗೆ ಲಭ್ಯವಾಗಿದೆ. ಯಾವ ರೀತಿ ಮತಕಳವು ಮಾಡಲು ಸಾಧ್ಯ ಎನ್ನುವುದನ್ನು ಕರ್ನಾಟಕದ ಈ ಕ್ಷೇತ್ರದ ಮೂಲಕವೇ ದೇಶದ ಜನರ ಮತ್ತು ಕೇಂದ್ರ ಚುನಾವಣಾ ಆಯೋಗದ ಮುಂದೆ ಇಡುತ್ತೇವೆ. ಸದ್ಯದಲ್ಲೇ ಎಲ್ಲಾ ವಿಚಾರಗಳ ಸತ್ಯವನ್ನು ಬಹಿರಂಗಪಡಿಸಲಿದ್ದೇವೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಗದ್ದಲದ ನಡುವೆಯೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಚುನಾವಣೆಗಳಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ ಆರೋಪ ಮಾಡಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಚುನಾವಣಾ ಅಧಿಕಾರಿಗಳು ಇಲ್ಲಿಯವರೆಗೆ 52 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ವಿಳಾಸಗಳಲ್ಲಿ ಇರಲಿಲ್ಲ ಮತ್ತು ಇನ್ನೂ 18 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎನ್ನುವ ವಿಚಾರ ಬಹಿರಂಗಗೊಂಡ ಬಳಿಕ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಹೇಗೆ ಮ್ಯಾಚ್‌ ಫಿಕ್ಸಿಂಗ್‌ ನಡೆದಿತ್ತು ಎನ್ನುವ ಬಗ್ಗೆ ನಾವು ಎಲ್ಲರಿಗೂ ತೋರ್ಪಡಿಸಿದ್ದೆವು. ಅದೇ ರೀತಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲೂ ನಾವು ತನಿಖೆ ನಡೆಸಿದ್ದೇವೆ. ಅಲ್ಲಿ ದೊಡ್ಡ ಮಟ್ಟದಲ್ಲಿ ಮತಗಳ ಕಳ್ಳತನ ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಶೀಘ್ರವೇ ಜನತೆಯ ಮುಂದೆ ಸಾಕ್ಷಿ ಸಮೇತ ಮಾಹಿತಿ ನೀಡಲಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಓದಿ: ‘ಮನಮೋಹನ್ ಸಿಂಗ್ ನೀಡಿದ್ದ ಪ್ರಧಾನಿ ಹುದ್ದೆಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ್ದರು’; ಪಪ್ಪು ಯಾದವ್

ಸಮಸ್ಯೆ ಏನೆಂದರೆ, ಅವರು ಮತದಾರರ ಪಟ್ಟಿಯನ್ನು ಕಾಗದದ ರೂಪದಲ್ಲಿ ನೀಡುತ್ತಾರೆ. ನಾವು ಅಂಥ ಪಟ್ಟಿಗಳನ್ನು ವಿಶ್ಲೇಷಿಸಲು ಸಾಧ್ಯವಿಲ್ಲ. ನಾವು ಮತದಾರರ ಪಟ್ಟಿಯನ್ನು ಸಂಗ್ರಹಿಸಿ ಡಿಜಿಟಲೈಸ್ ಮಾಡಿದ್ದು, ಅದಕ್ಕೆ ಆರು ತಿಂಗಳು ಹಿಡಿಯಿತು. ಈ ಪ್ರಕ್ರಿಯೆಯಿಂದ ನಾವು ಆಯೋಗದ ಕಳ್ಳಾಟವನ್ನ ಪತ್ತೆಹಚ್ಚಿದೆವು. ಯಾರು ಮತ ಹಾಕುತ್ತಾರೆ, ಮತದಾರರನ್ನು ಹೇಗೆ ಸೇರಿಸಲಾಗುತ್ತದೆ, ಹಳೆಯವರನ್ನು ಹೇಗೆ ತೆಗೆದುಹಾಕಲಾಗುತ್ತದೆ ಎಂಬುದನ್ನು ತಿಳಿದುಕೊಂಡೆವು ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ವಿಡಿಯೋ

2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 17 ಸ್ಥಾನಗಳನ್ನು ಪಡೆದಿತ್ತು.ಇದೇ ವೇಳೆ ಕರ್ನಾಟಕದ ಯಾವ ಲೋಕಸಭಾ ಕ್ಷೇತ್ರವನ್ನ ಅಧ್ಯಯನ ಮಾಡಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ಹೇಳಿಲ್ಲ.

ಅಕ್ರಮ ಬಗ್ಗೆ ನನಗೆ ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದು, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನನಗೆ ಈ ಬಗ್ಗೆ ಗೊತ್ತಿಲ್ಲ. ಹೀಗಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:54 am, Thu, 24 July 25

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..