AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಭಾರತದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ- ಕೇಂಬ್ರಿಡ್ಜ್​ನಲ್ಲಿ ಮತ್ತೆ ಪೆಗಾಸಸ್ ಕೆದಕಿದ ರಾಹುಲ್ ಗಾಂಧಿ

UK Cambridge University Lecture: ಭಾರತೀಯ ಪ್ರಜಾತಂತ್ರ ವ್ಯವಸ್ಥೆ ಆಕ್ರಮಣಕ್ಕೊಳಗಾಗಿದೆ. ಡೆಮಾಕ್ರಸಿ ಮೇಲಿನ ಆಕ್ರಮಣವನ್ನು ಎದುರಿಸಲು ನಾವು ಯತ್ನಿಸುತ್ತಿದ್ದೇವೆ. ವಿಪಕ್ಷ ನಾಯಕರ ಮೇಲೆ ಸರ್ಕಾರ ಗೂಢಚಾರಿಕೆ ಮಾಡಲು ಪೆಗಾಸಸ್ ಬಳಸುತ್ತಿದೆ ಎಂದು ಕೇಂಬ್ರಿಡ್ಸ್ ವಿವಿಯಲ್ಲಿ ರಾಹುಲ್ ಗಾಂಧಿ ಸಿಡಿಮಿಡಿ.

Rahul Gandhi: ಭಾರತದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ- ಕೇಂಬ್ರಿಡ್ಜ್​ನಲ್ಲಿ ಮತ್ತೆ ಪೆಗಾಸಸ್ ಕೆದಕಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 03, 2023 | 10:20 AM

Share

ಲಂಡನ್: ಮಾಜಿ ಕಾಂಗ್ರೆಸ್ ಅಧ್ಯಕ್ಷ ಹಾಗು ಸಂಸದ ರಾಹುಲ್ ಗಾಂಧಿ (Rahul Gandhi) ಭಾರತ ದೇಶ ಅಪಾಯದಲ್ಲಿದೆ ಎಂದು ಮತ್ತೆ ಧ್ವನಿ ಎತ್ತಿದ್ದು ಪೆಗಾಸಸ್ ಸ್ಪೈವೇರ್ (Pegasus Spyware) ಘಟನೆಯನ್ನು ಮತ್ತೆ ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಬ್ರಿಟನ್​ನ ಕೇಂಬ್ರಿಡ್ಜ್ ಯೂನಿವರ್ಸಿಟಿಯ (Cambridge University) ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೇಕಾದ ಸಾಂಸ್ಥಿಕ ಚೌಕಟ್ಟು ದುರ್ಬಲಗೊಳ್ಳುತ್ತಿದೆ. ಭಾರತೀಯ ಪ್ರಜಾತಂತ್ರ ವ್ಯವಸ್ಥೆಯ ಮೂಲ ಸ್ವರೂಪವೇ ಆಕ್ರಮಕ್ಕೊಳಗಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್​​ನಲ್ಲಿ ’21ನೇ ಶತಮಾನದಲ್ಲಿ ಆಲಿಕೆಯ ಕಲಿಕೆ‘ (Learning to Listen in the 21st Century) ವಿಚಾರದ ಬಗ್ಗೆ ವಿದ್ಯಾರ್ಥಿಗಳನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದರು.

ಭಾರತೀಯ ಪ್ರಜಾತಂತ್ರ ವ್ಯವಸ್ಥೆ ಆಕ್ರಮಣಕ್ಕೊಳಗಾಗಿದೆ. ಡೆಮಾಕ್ರಸಿ ಮೇಲಿನ ಆಕ್ರಮಣವನ್ನು ಎದುರಿಸಲು ನಾವು ಯತ್ನಿಸುತ್ತಿದ್ದೇವೆ. ವಿಪಕ್ಷ ನಾಯಕರ ಮೇಲೆ ಸರ್ಕಾರ ಗೂಢಚಾರಿಕೆ ಮಾಡಲು ಪೆಗಾಸಸ್ ಬಳಸುತ್ತಿದೆ. ನನ್ನ ಫೋನ್​ನಲ್ಲೇ ಪೆಗಾಸಸ್ ಹಾಕಲಾಗಿತ್ತು. ಬಹಳಷ್ಟು ರಾಜಕಾರಣಿಗಳ ಮೊಬೈಲ್​ಗಳಲ್ಲಿ ಪೆಗಾಸಸ್ ಇತ್ತು. ಫೋನ್​ನಲ್ಲಿ ಮಾತನಾಡುವಾಗ ಹುಷಾರಾಗಿರಬೇಕೆಂದು ನನಗೆ ಹೇಳಲಾಗಿತ್ತುಎಂದು ಯೂನಿವರ್ಸಿಟಿಯಲ್ಲಿ ವಿಸಿಟಿಂಗ್ ಫೆಲೋ ಆಗಿದ್ದ ರಾಹುಲ್ ಗಾಂಧಿ ಹೇಳಿದರು.

ಇದೇ ವೇಳೆ ರಾಹುಲ್ ಗಾಂಧಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಮಾಧ್ಯಮ ಮತ್ತು ನ್ಯಾಯಾಂಗವನ್ನು ಸರ್ಕಾರ ನಿಯಂತ್ರಿಸುತ್ತಿದೆ. ಅಲ್ಪಸಂಖ್ಯಾತರು, ದಲಿತರು, ಬುಡಕಟ್ಟು ಜನಾಂಗದವರನ್ನು ಬೆದರಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದರು.

ಇದನ್ನೂ ಓದಿಈಗ ಈಶಾನ್ಯ ರಾಜ್ಯಗಳು ದಿಲ್ಲಿಯಿಂದ ಅಥವಾ ಹೃದಯದಿಂದ ದೂರವಿಲ್ಲ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ಬ್ರಿಟನ್ ದೇಶಕ್ಕೆ ಒಂದು ವಾರ ಕಾಲದ ಪ್ರವಾಸದಲ್ಲಿದ್ದಾರೆ. ಕೇಂಬ್ರಿಡ್ಜ್ ಯೂನಿವರ್ಸಿಟಿಯಲ್ಲೇ ಕೆಲ ಸಭೆ, ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುವುದುಂಟು. ಭಾರತ ಮತ್ತು ಚೀನಾ ಸಂಬಂಧಗಳ ಬಗ್ಗೆ ಕ್ಲೋಸ್ಡ್ಡೋರ್ ಸೆಷನ್​ನಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಇದರ ಜೊತೆಗೆ ಲಂಡನ್​ನಲ್ಲಿ ಅನಿವಾಸಿ ಭಾರತೀಯರ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿಯೇ, ಕಾಂಗ್ರೆಸ್​ನ ವಿದೇಶೀ ವಿಭಾಗದ ಪ್ರತಿನಿಧಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ.

ಏನಿದು ಪೆಗಾಸಸ್ ವಿವಾದ?

ಪೆಗಾಸಸ್ ಎನ್ನುವುದು ಇಸ್ರೇಲ್ ಕಂಪನಿಯೊಂದು ತಯಾರಿಸಿದ ಸ್ಪೈವೇರ್. ಸ್ಪೈವೇರ್ ಎಂಬುದು ವಂಚಕ ಸಾಫ್ಟ್​ವೇರ್. ಇದು ಯಾವುದೇ ಫೋನ್​ನಿಂದ ಮಾಹಿತಿ ಕದ್ದು ರವಾನಿಸುತ್ತದೆ. ಭಾರತದ ಹಲವು ರಾಜಕಾರಣಿಗಳು, ನ್ಯಾಯಮೂರ್ತಿಗಳು, ಹಿರಿಯ ಅಧಿಕಾರಿಗಳು ಹೀಗೆ ನಾನಾ ವಿಭಾಗದ ನಾನಾ ಸ್ತರದ ವ್ಯಕ್ತಿಗಳ ಮೊಬೈಲ್​ಗಳನ್ನು ಪೆಗಾಸಸ್ ಮೂಲಕ ಸರ್ಕಾರ ಕಣ್ಗಾವಲಿನಲ್ಲಿಟ್ಟಿತ್ತು ಎಂಬುದು ವಿಪಕ್ಷಗಳ ಆರೋಪ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ